ಮಂಡ್ಯ | ಮನುಸ್ಮೃತಿ ತೊಲಗಿಸಿ, ಸಂವಿಧಾನ ಉಳಿಸಿ: ವಿವಿಧ ಪ್ರಗತಿಪರ ಸಂಘಟನೆಗಳ ಬೃಹತ್ ಪ್ರತಿಭಟನೆ

Date:

ಬಾಬಾ ಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಮನುಸ್ಮೃತಿಯನ್ನು ದಹಿಸಿದ ಐತಿಹಾಸಿಕ ದಿನದ 98ನೇ ವರ್ಷಾಚರಣೆಯ ಅಂಗವಾಗಿ, ಮಂಡ್ಯ ನಗರದ ಸಂಜಯ ವೃತ್ತದಲ್ಲಿ ದಲಿತ ಸಂಘರ್ಷ ಸಮಿತಿ, ಕರ್ನಾಟಕ ಜನಶಕ್ತಿ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ಮತ್ತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

- Advertisement -

ದಸಂಸದ ​ಗುರುಪ್ರಸಾದ್ ಕೆರಗೋಡು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, “ಸಮಾಜದಲ್ಲಿ ತಲೆತಲಾಂತರಗಳಿಂದ ಶೂದ್ರ ಸಮುದಾಯ, ದಲಿತರು ಹಾಗೂ ಮಹಿಳೆಯರನ್ನು ಅಕ್ಷರ ಜ್ಞಾನದಿಂದ ವಂಚಿತರನ್ನಾಗಿಸಿ, ಅವರ ಮೇಲೆ ದೌರ್ಜನ್ಯ ಎಸಗಲು ಕಾರಣವಾಗಿದ್ದ ಮನುಸ್ಮೃತಿಯನ್ನು ಅಂಬೇಡ್ಕರ್ 1927ರ ಡಿಸೆಂಬರ್ 25ರಂದು ಸಾರ್ವಜನಿಕವಾಗಿ ಸುಟ್ಟು ಹಾಕಿದ್ದರು” ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

​”ಆದರೆ ಇಂದು ಸಂವಿಧಾನ ವಿರೋಧಿ ಶಕ್ತಿಗಳು ಮತ್ತೆ ಪ್ರಬಲವಾಗುತ್ತಿವೆ. ಅಂಬೇಡ್ಕರ್ ರೂಪಿಸಿದ ಸಮಾನತೆಯ ಸಂವಿಧಾನದ ಬದಲಿಗೆ ಮನುಸ್ಮೃತಿಯ ಆಶಯಗಳನ್ನು ಜಾರಿಗೆ ತರಲು ವ್ಯವಸ್ಥಿತ ಸಂಚು ನಡೆಯುತ್ತಿದೆ. ಇದನ್ನು ಪ್ರತಿಭಟಿಸಲು ಮತ್ತು ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯಲು ನಾವು ಸಂಕೇತಿಕವಾಗಿ ಮನುಸ್ಮೃತಿಯ ಪ್ರತಿಗಳನ್ನು ಸುಡುವ ಮೂಲಕ ಹೋರಾಟ ಮುಂದುವರಿಸುತ್ತಿದ್ದೇವೆ” ಎಂದು ಗುಡುಗಿದರು.

​ಮಹಿಳಾ ಮುನ್ನಡೆಯ ಪೂರ್ಣಿಮಾ ಮಾತನಾಡಿ, “ಇಂದಿಗೂ ಸಮಾಜದಲ್ಲಿ ಜಾತಿ ತಾರತಮ್ಯ ಮತ್ತು ಲಿಂಗ ಅಸಮಾನತೆ ಜೀವಂತವಾಗಿದೆ. ಅನ್ಯ ಜಾತಿಯವನನ್ನು ಪ್ರೀತಿಸಿ ಮದುವೆಯಾದ ಗರ್ಭಿಣಿ ಮಗಳನ್ನು ತಂದೆಯೇ ಕೊಚ್ಚಿ ಕೊಲೆ ಮಾಡಿದ ಹುಬ್ಬಳ್ಳಿ ಘಟನೆ, ಮನುಸ್ಮೃತಿಯ ವಿಷಬೀಜ ಜನರ ತಲೆಯಲ್ಲಿ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿ. ​”ಮಹಿಳೆಯರ ಮೇಲೆ ನಿರಂತರ ಅತ್ಯಾಚಾರಗಳು ನಡೆಯುತ್ತಿದ್ದರೂ, ಅಪರಾಧಿಗಳು ಸುಲಭವಾಗಿ ಬಿಡುಗಡೆಯಾಗುತ್ತಿದ್ದಾರೆ. ಸಮಾಜದ ಪ್ರತಿಯೊಬ್ಬ ವ್ಯಕ್ತಿ ಮತ್ತು ಅಧಿಕಾರಿಗಳ ತಲೆಯಿಂದ ಈ ಮನುಸಿದ್ದಾಂತ ಹೊರಹೋಗುವವರೆಗೂ ಮಹಿಳೆಯರಿಗೆ ಮತ್ತು ಶೋಷಿತರಿಗೆ ನಿಜವಾದ ನ್ಯಾಯ ಸಿಗಲು ಸಾಧ್ಯವಿಲ್ಲ” ಎಂದು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಮಂಡ್ಯ | ರೈತರು ಸಮಗ್ರ ಕೃಷಿ, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ

​ಈ ಸಂದರ್ಭದಲ್ಲಿ ಕರ್ನಾಟಕ ಜನಶಕ್ತಿಯ ಸಿದ್ದರಾಜು ಹಾಗೂ ಜಗದೀಶ್ ನಗರಕೆರೆ, ಮಹಿಳಾ ಮುನ್ನಡೆಯ ಶಿಲ್ಪ, ಅಂಜಲಿ, ಶೈಲಜಾ, ಕೌಶಲ್ಯ ಮತ್ತು ಪ್ರಿಯಾಂಕ ಉಪಸ್ಥಿತರಿದ್ದರು. ಅಲ್ಲದೆ ರೈತ ಸಂಘದ ಪಾಂಡು ಶ್ರೀರಂಗಪಟ್ಟಣ, ದಸಂಸದ ರವಿಚಂದ್ರ ಗಂಜಾಂ, ವಿಜಯ್ ಪಾಂಡವಪುರ, ಕಲಾವಿದರಾದ ಹುರಗಲವಾಡಿ ರಾಮಯ್ಯ ಹಾಗೂ ಮಂಜುಳ ಆಲದಹಳ್ಳಿ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡು ಸಂವಿಧಾನದ ರಕ್ಷಣೆಗಾಗಿ ಘೋಷಣೆಗಳನ್ನು ಕೂಗಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೌಲಾನಾ ಅಬುಲ್ ಕಲಾಂ ಅಜಾದ್ ಜಯಂತಿ ಆಚರಣೆ

ದೇಶದ ಮೊದಲ ಶಿಕ್ಷಣ ಸಚಿವ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಬುಲ್...

ಬಾಗಲಕೋಟೆ |ಭೋವಿ ಸಮುದಾಯದ ಆರ್ಥಿಕ ಸಬಲೀಕರಣಕ್ಕೆ ವಿವಿಧ ಯೋಜನೆ: ಅರ್ಜಿ ಆಹ್ವಾನ

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಭೋವಿ ಸಮುದಾಯದ ಆರ್ಥಿಕ...

ಶಿರಸಿ | ಬನವಾಸಿಯಲ್ಲಿ ಸರಣಿ ಮನೆ ಕಳ್ಳತನ: 20 ಗ್ರಾಂ ಚಿನ್ನಾಭರಣ, ₹56 ಸಾವಿರ ನಗದು ಕಳವು

ಶಿರಸಿ: ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆ ಮನೆ ಹಾಗೂ...

ರಾಯಚೂರು | ಪಡಿತರ ಚೀಟಿ ಇ-ಕೆವೈಸಿ ನ.30 ಕೊನೆ ದಿನ; ಜಿಲ್ಲೆಯಲ್ಲಿ 1.63 ಲಕ್ಷ ಫಲಾನುಭವಿಗಳ ಬಾಕಿ

ಜಿಲ್ಲೆಯ ಎಲ್ಲ ಪಡಿತರ ಚೀಟಿಗಳಲ್ಲಿನ ಸದಸ್ಯರು ಪ್ರತಿ ಐದು ವರ್ಷಗಳಿಗೊಮ್ಮೆ ಇ-ಕೆವೈಸಿ...