ಮಂಡ್ಯ | ಭಾರೀ ಮಳೆ; ಬೃಂದಾವನ ಉದ್ಯಾನ ಬಂದ್

Date:

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕೃಷ್ಣರಾಜ ಸಾಗರದ ಬೃಂದಾವನ ಉದ್ಯಾನದಲ್ಲಿ ಸೋಮವಾರ ಮಧ್ಯಾಹ್ನ ಸುರಿದ ಭಾರೀ ಮಳೆಯಿಂದಾಗಿ ಹಲವಾರು ಮರಗಳು ಧರೆಗುರುಳಿವೆ. ಈ ಹಿನ್ನೆಲೆಯಲ್ಲಿ, ಕೆಆರ್‌ಎಸ್ ಬೃಂದಾವನಕ್ಕೆ ಪ್ರವಾಸಿಗರಿಗೆ ಭೇಟಿಯನ್ನು ನಿರ್ಬಂಧಿಸಿ ಕಾವೇರಿ ನೀರಾವರಿ ನಿಗಮ ಆದೇಶ ಹೊರಡಿಸಿದೆ.

“ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬೃಂದಾವನ ಉದ್ಯಾನವನ್ನು ಸೋಮವಾರ ಮುಚ್ಚಬೇಕಾಯಿತು. ಮಳೆಯ ಅವಾಂತರದಿಂದ ಸೃಷ್ಟಿಯಾದ ಘಟನೆಯ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ. ಬೇರುಸಹಿತ ನೆಲಕ್ಕೆ ಉರುಳಿರುವ ಮರಗಳನ್ನು ಮಂಗಳವಾರ ತೆರವುಗೊಳಿಸಲಾಗುವುದು” ಎಂದು ಎಂದು ಕೆಆರ್‌ಎಸ್ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಒಂದೇ ತಿಂಗಳಲ್ಲಿ ಎರಡು ಚಿರತೆಗಳ ಸೆರೆ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಭಾರೀ ಗಾಳಿ ಮಳೆಯಿಂದಾಗಿ ಉದ್ಯಾನದೊಳಗಿನ ವಿದ್ಯುತ್ ಕಂಬಗಳೂ ಸಹ ಬಿದ್ದಿವೆ. ಕೆಆರ್‌ಎಸ್‌ನ ಕಾವೇರಿ ನೀರಾವರಿ ನಿಗಮ ನಿಯಮಿತ ಕಚೇರಿಯ ಆವರಣದಲ್ಲೂ ಮರಗಳು ಧರೆಗುರುಳಿವೆ. ಅದೃಷ್ಟವಶಾತ್, ಸೋಮವಾರದ ಘಟನೆಯಲ್ಲಿ ಯಾವುದೇ ಪ್ರವಾಸಿಗರು ಅಥವಾ ಅಧಿಕಾರಿಗಳು ಗಾಯಗೊಂಡಿಲ್ಲ” ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಕುಟುಂಬ ರಾಜಕಾರಣದ ವಿರುದ್ಧ ನನ್ನ ಹೋರಾಟ: ವಿನಯ್ ಕುಮಾರ್

ಪಾಳೇಗಾರಿಕೆ, ಕುಟುಂಬ ರಾಜಕಾರಣದ ವಿರುದ್ಧ ಹೋರಾಟ ನನ್ನದು. ಸಚಿವ ಎಸ್ ಎಸ್...

ಕಲಬುರಗಿ | ನನ್ನನ್ನು ಎನ್‌ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಯವರು ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ...