ಮಂಡ್ಯ | ಏಕರೂಪ ಸಮಾನ ಶಿಕ್ಷಣಕ್ಕೆ ಆಗ್ರಹಿಸಿ ಇಂದು ಬೃಹತ್ ಪಂಜಿನ ಮೆರವಣಿಗೆ

Date:

ಏಕರೂಪ ಸಮಾನ ಶಿಕ್ಷಣ ಜಾರಿ ಹಾಗೂ ಸರ್ಕಾರಿ ಶಾಲೆಗಳ ಉಳಿವಿಗೆ ಆಗ್ರಹಿಸಿ ಕಳೆದ 55 ದಿನಗಳಿಂದ ನಡೆಸಲಾಗಿದ್ದ ಪಾದಯಾತ್ರೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಅದರ ಸಮಾರೋಪವಾಗಿ ಜೂನ್ 6ರಂದು ಬೃಹತ್ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಇಂಡುವಾಳು ಚಂದ್ರಶೇಖರ್ ತಿಳಿಸಿದ್ದಾರೆ.

- Advertisement -

ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂಡುವಾಳು ಗ್ರಾಮ ಪಂಚಾಯಿತಿ ಆವರಣದಿಂದ ಮಂಡ್ಯ ನಗರದ ಜೆ.ಸಿ. ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಯಲಿದ್ದು, ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದ ಹಿರಿಯ ವಿದ್ಯಾರ್ಥಿಗಳು, ಎಸ್‌ಡಿಎಂಸಿ ಸದಸ್ಯರು, ಪೋಷಕರು, ಶಿಕ್ಷಕ ಪ್ರೇಮಿಗಳು ಸೇರಿದಂತೆ ಸುಮಾರು 3 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ರಾಜ್ಯದ ಪ್ರತಿಯೊಂದು ಸರ್ಕಾರಿ ಶಾಲೆಗೆ ಸುಸಜ್ಜಿತ ಕಟ್ಟಡ ನಿರ್ಮಾಣ, ದ್ವಿಭಾಷಾ ಶಿಕ್ಷಣ ಪದ್ಧತಿ ಜಾರಿ, ವಿಷಯವಾರು ಶಿಕ್ಷಕರ ನೇಮಕ, ಶಿಕ್ಷಕರನ್ನು ಬೋಧಕೇತರ ಕಾರ್ಯಗಳಿಗೆ ಬಳಸುವುದಕ್ಕೆ ನಿರ್ಬಂಧ ಹಾಗೂ ಜನಪ್ರತಿನಿಧಿಗಳು ಮತ್ತು ಸರ್ಕಾರಿ ನೌಕರರ ಮಕ್ಕಳು ಸರ್ಕಾರಿ ಶಾಲೆಗಳಲ್ಲೇ ಶಿಕ್ಷಣ ಪಡೆಯುವಂತೆ ನಿಯಮ ಜಾರಿಗೆ ತರಬೇಕೆಂಬ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಈ ಪಂಜಿನ ಮೆರವಣಿಗೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ರೈತ ಮುಖಂಡ ಸಂತೋಷ್‌ಗೌಡ ಮಾತನಾಡಿ, ಜಿಲ್ಲೆಯ ಎಸ್‌ಡಿಎಂಸಿ ಸಂಘದ ಸಹಕಾರದೊಂದಿಗೆ ಈಗಾಗಲೇ 1,295 ಕಿಲೋಮೀಟರ್ ಪಾದಯಾತ್ರೆಯನ್ನು 55 ದಿನಗಳ ಕಾಲ ನಿರಂತರವಾಗಿ ನಡೆಸಲಾಗಿದೆ. ಒಟ್ಟು 233 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಸಾವಿರಕ್ಕೂ ಹೆಚ್ಚು ಹಳ್ಳಿಗಳ ಶಾಲೆಗಳನ್ನು ತಲುಪಿ ಅಲ್ಲಿನ ಸಮಸ್ಯೆಗಳನ್ನು ಅಧ್ಯಯನ ಮಾಡಿ, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?ಮೈಸೂರು | ತಂಬಾಕು ಆರೋಗ್ಯ ಮತ್ತು ಪರಿಸರಕ್ಕೆ ಮಾರಕ: ಡಾ. ರವಿಕುಮಾರ್ ಎಚ್ಚರಿಕೆ

ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ಉಪಾಧ್ಯಕ್ಷ ಶಿವಳ್ಳಿ ಚಂದ್ರಶೇಖರ್, ಸಾರಥಿ ಕೃಷ್ಣೇಗೌಡ, ತೇಜಸ್ ಗೌಡ, ಹುಬ್ಬಳ್ಳಿಯ ರವಿಚಂದ್ರ, ಹಾವೇರಿಯ ಮಲ್ಲಣ್ಣಗೌಡ ಹಾಗೂ ಧನುಷ್ ಗೌಡ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...