ಮಂಡ್ಯ | ಇಂಡುವಾಳು ಗ್ರಾಮ ಪಂ.ಯಲ್ಲಿ ಅಕ್ರಮ; ಇಬ್ಬರು ಪಿಡಿಒ ಸೇರಿ ನಾಲ್ವರ ಅಮಾನತು

Date:

ಮಂಡ್ಯ ಜಿಲ್ಲೆಯ ಇಂಡುವಾಳು ಗ್ರಾಮ ಪಂಚಾಯತಿಯಲ್ಲಿ1,281 ಕಡತ ನಾಪತ್ತೆ ಮತ್ತು 1,881 ಅಕ್ರಮ ಇ-ಖಾತೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪಿಡಿಒಗಳು ಸೇರಿ ನಾಲ್ವರು ಅಧಿಕಾರಿಗಳು ಅಮಾನತುಗೊಳಿಸಲಾಗಿದೆ. ನಾಲ್ವರನ್ನೂ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಅಮಾನತು ಮಾಡಿರುವುದಾಗಿ ಮಂಡ್ಯ ಜಿಲ್ಲಾ ಪಂಚಾಯತಿ ಸಿಇಓ ಕೆ.ಆ‌ರ್ ನಂದಿನಿ ತಿಳಿಸಿದ್ದಾರೆ.

- Advertisement -

ಈ ಹಿಂದೆ ಇಂಡುವಾಳು ಗ್ರಾಮ ಪಂಚಾಯತಿಯ ಪಿಡಿಒ ಆಗಿದ್ದ ಸಿದ್ಧರಾಜು, ಹಾಲಿ ಪಿಡಿಒ ದಯಾನಂದ, ಕಾರ್ಯದರ್ಶಿ ಮರಿಲಿಂಗಯ್ಯ ಹಾಗೂ ದ್ವಿತೀಯ ದರ್ಜೆ ಸಹಾಯಕಿ ರಾಣಿ – ಅಮಾನತುಗೊಂಡ ಅಧಿಕಾರಿಗಳು. ಈ ನಾಲ್ವರ ವಿರುದ್ಧ ತನಿಖೆ ನಡೆಸಲಾಇದ್ದು, ನಾಲ್ವರೂ ಇ-ಸ್ವತ್ತು ನಮೂನೆ 9/11ಎ ವಿತರಿಸುವಲ್ಲಿ ಕರ್ತವ್ಯಲೋಪ ಎಸಗಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಅಮಾನತು ಆದೇಶದಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನಾಲ್ವರ ಅಮಾನತಿಗೂ ಮುನ್ನವೇ, ಈ ಹಿಂದೆ ಇಂಡುವಾಳು ಗ್ರಾಮ ಪಂಚಾಯತಿಯಲ್ಲಿ ಪಿಡಿಒಗಳಾಗಿ ಕೆಲಸ ಮಾಡಿದ್ದ ಯೋಗೇಶ್ ಮತ್ತು ವಿಶಾಲಮೂರ್ತಿ ಎಂಬುವರನ್ನೂ ಅಮಾನತು ಮಾಡಲಾಗಿತ್ತು. ಮತ್ತೊಬ್ಬ ಪಿಡಿಒ ಬಿ.ವಿ ಸೋಮು ಎಂಬವರು ನಿವೃತ್ತರಾಗಿದ್ದಾರೆ. ಈ ಎಲ್ಲರ ವಿರುದ್ಧವೂ ಇಲಾಖಾ ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿಯಾಗಿದೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...