ಮಂಡ್ಯ | ಅನೈತಿಕ ಸಂಬಂಧ; ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ ಆರೋಪಿ ಬಂಧನ

Date:

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಶಂಭೂನಹಳ್ಳಿ ಗ್ರಾಮದಲ್ಲಿ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬನ ಮೇಲೆ ಮತ್ತೋರ್ವ ನಾಡ ಪಿಸ್ತೂಲಿನಿಂದ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ.

- Advertisement -

ಗ್ರಾಮದ ಶಿವರಾಜು ಎಂಬಾತ ಅದೇ ಗ್ರಾಮದ ಮಂಜುನಾಥ್ ಎಂಬಾತನ ಮೇಲೆ ದಾಳಿ ನಡೆಸಿದ್ದು, ಗುಂಡಿನ ದಾಳಿಗೊಳಗಾದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮುಂಬೈನ  ಹೋಟೆಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದ  ಶಿವರಾಜು ಎರಡು ನಾಡ ಪಿಸ್ತೂಲಿನಿಂದ  ಮಂಜುನಾಥ್ ಹಾಗೂ ಆತನ ಭಾವನ ಮೇಲೆ ಏಕಾಏಕಿ ಗುಂಡು ಹಾರಿಸಿದ್ದಾನೆ. ಈ ಸಂದರ್ಭದಲ್ಲಿ ಮಂಜುನಾಥನ ತಲೆ ಹಾಗೂ ಕಂಕುಳ ಬಳಿ ಗಾಯವಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದೇ ಆರೋಪಿ ಶಿವರಾಜ್ ಕಳೆದ ಎರಡು ವರ್ಷಗಳ ಹಿಂದೆ ಕೂಡ ಮಂಜುನಾಥ್ ಮೇಲೆ ಹತ್ಯೆಗೆ ಯತ್ನಿಸಿ ಚಾಕುವಿನಿಂದ ಇರಿದಿದ್ದ ಎನ್ನಲಾಗಿದೆ.

ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...