ಮಂಡ್ಯ | ಐದು ವರ್ಷ ನಾನೇ ಮುಖ್ಯಮಂತ್ರಿ ಎನ್ನುವುದು ಸರಿಯಲ್ಲ: ಮಾಜಿ ಸಿಎಂ ಎಸ್‌ ಎಂ ಕೃಷ್ಣ

Date:

ಜಾತಿ ಆಧಾರದಲ್ಲಿ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಜೊತೆಗೆ, ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತೇನೆಂದು ಹೇಳುವುದೂ ಅನಾರೋಗ್ಯಕರ ಬೆಳವಣಿಗೆ ಎಂದು ಬಿಜೆಪಿ ಮುಖಂಡ, ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ಅವರು ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸಿದ್ದಾರೆ.

- Advertisement -

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮದಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “ವೈಯಕ್ತಿಕ ಸಾಧನೆ, ಯೋಗ್ಯತೆ, ಸಾಮಾಜಿಕ ಕಳಕಳಿ ಇರುವವರು ಮುಖ್ಯಮಂತ್ರಿಯಾಗಬೇಕು. ಜಾತಿ ಆಧಾರದ ಮೇಲೆ ಅವಕಾಶ ಪಡೆಯುವುದು ಪ್ರಜಾಪ್ರಭುತ್ವದ ಅಣಕ. ಪ್ರತಿ ರಾಜಕೀಯ ಕಾಲಘಟ್ಟದಲ್ಲಿ ತಿರುವುಗಳಿರುತ್ತವೆ. ಅದನ್ನು ಆಧರಿಸಿ ಸ್ಥಾನಗಳ ಬದಲಾವಣೆಯಾಗುತ್ತವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿರುತ್ತೇನೆಂದು ಹೇಳುವ ಅನಾರೋಗ್ಯಕರ ಕಾಲಘಟ್ಟಕ್ಕೆ ನಾವಿಂದು ತಲುಪಿದ್ದೇವೆ. ಈಗ ಈ ಪ್ರಶ್ನೆ ಉದ್ಭವಿಸುವ ಅವಶ್ಯಕತೆಯೇ ಇರಲಿಲ್ಲ. ಅಧಿಕಾರದ ಅಹಂನಲ್ಲಿ ಯಾರೂ ರಾಜಕೀಯ ಮೌಲ್ಯಗಳನ್ನು ಕಳೆದುಕೊಳ್ಳಬಾರದು. ಉನ್ನತ ಸ್ಥಾನದಲ್ಲಿರುವವರು ಇತಿಮಿತಿ ಇಟ್ಟುಕೊಂಡು ಮಾತನಾಡಿದರೆ ಎಲ್ಲ ಸಮಸ್ಯೆಗಳಿಗೂ ಪರಿಹಾರ ದೊರೆಯುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ನಲ್ಲಿ ಸದ್ಯಕ್ಕೆ ಸಿಎಂ ಕುರ್ಚಿ ಖಾಲಿಯಿಲ್ಲ: ಎಚ್‌ ಕೆ ಪಾಟೀಲ್

“ಕಾವೇರಿ ನದಿ ನೀರಿನ ಸಮಸ್ಯೆ ಬಗೆಹರಿಯಬೇಕಾದರೆ ನಾಲ್ಕು ರಾಜ್ಯಗಳ ರೈತ ಮುಖಂಡರು ಒಟ್ಟಿಗೆ ಸಭೆ ಸೇರಿ ಚರ್ಚಿಸಿದಾಗ ಮಾತ್ರ ಈ ಸಮಸ್ಯೆಗೆ ಪರಿಹಾರ ಸಿಗಬಹುದು. ಪ್ರಸ್ತುತ ರಾಜ್ಯ ಸರ್ಕಾರ ಅನಿವಾರ್ಯ ಹಾಗೂ ವಿಧಿ ಇಲ್ಲದೆ ತಮಿಳುನಾಡಿಗೆ ನೀರು ಬಿಡಬೇಕಾದ ಆದೇಶವನ್ನು ಅನುಸರಿಸಬೇಕಿದೆ” ಎಂದರು

ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರದಂದು ‘ನಾನೇ 5 ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ’ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಬಿಜೆಪಿ ಮುಖಂಡ ಎಸ್‌ ಎಂ ಕೃಷ್ಣ ಪ್ರತಿಕ್ರಿಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ತಮಿಳುನಾಡು | ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆ ಪ್ರಶ್ನಿಸಿ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ

ತಮಿಳುನಾಡು ಸರ್ಕಾರವು ಮಹಿಳೆಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‌ಗಳಲ್ಲಿ ಜಾರಿಗೆ...