ಮಂಡ್ಯ |”ಕನಕದಾಸರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ” : ಶಾಸಕ ಪಿ. ರವಿಕುಮಾರ್‌

Date:

ಸಂತಶ್ರೇಷ್ಠ ಕನಕದಾಸರು ಯಾವುದೇ ಒಂದು ಜಾತಿ ಅಥವಾ ಸಮುದಾಯಕ್ಕೆ ಸೀಮಿತರಾದವರಲ್ಲ. ಜಾತಿ, ಧರ್ಮಗಳ ಎಲ್ಲೆ ಮೀರಿ ಬೆಳೆದ ಮಹಾನ್ ದಾರ್ಶನಿಕರು ಹಾಗೂ ಮಾನವತಾವಾದಿಗಳಾಗಿದ್ದಾರೆ. ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿ ಸಮಾನತೆ ನೆಲೆಸಬೇಕು, ಎಲ್ಲರೂ ಸಹೋದರತ್ವದ ಭಾವನೆಯಿಂದ ಬದುಕಬೇಕು ಎಂಬ ಸಂದೇಶ ಸಾರಿದ್ದಾರೆ ಎಂದು ಮಂಡ್ಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಪಿ. ರವಿಕುಮಾರ್ ರವರು ಹೇಳಿದರು.

- Advertisement -

ಇಂದು ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಿದ್ದ ‘ಕನಕ ಜಯಂತಿ-2026’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕನಕದಾಸರಂತಹ ಮಹಾನ್ ಸಂತನ ಕೀರ್ತನೆಗಳು ಹಾಗೂ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿರುಕು ಬಿಟ್ಟಿದ್ದ ‘ಕೈ’ ಕೋಟೆಗೆ ಒಗ್ಗಟ್ಟಿನ ಶಕ್ತಿ: ರಾಜಸ್ಥಾನ...

ಗೋವಿಂದ್ ಡೋಟಸರ ಮತ್ತು ಟೀಕಾರಾಮ್ ಜುಲ್ಲಿ ಅವರ ನಡುವಣ ಬಾಂಧವ್ಯ ಕೇವಲ ರಾಜಕೀಯ ಅನಿವಾರ್ಯತೆಯಲ್ಲ; ಅದು ಪರಸ್ಪರ ನಂಬಿಕೆ ಮತ್ತು ಪೂರಕ ಸಾಮರ್ಥ್ಯಗಳ ಸಮ್ಮಿಲನವಾಗಿದೆ. ಡೋಟಸರ ಅವರಲ್ಲಿರುವ ಆಕ್ರಮಣಕಾರಿ ಸಂಘಟನಾ ಶೈಲಿ, ಪ್ರಖರ...

ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ...

ಬಂಡೀಪುರ-ನಾಗರಹೊಳೆ ಅರಣ್ಯಗಳ ಮೇಲೆ ಹೆಚ್ಚುತ್ತಿರುವ ಒತ್ತಡ; ಖಾಸಗಿ ಬಂಡವಾಳ, ಪ್ರವಾಸೋದ್ಯಮ ವಿಸ್ತರಣೆ ಮತ್ತು ಆದಿವಾಸಿಗಳ ಹಕ್ಕುಗಳ ನಡುವೆ ಸಂರಕ್ಷಣೆಯ ಮೂಲ ಆಶಯಕ್ಕೆ ಸವಾಲು. ಮನುಷ್ಯ-ವನ್ಯಜೀವಿ ಸಂಘರ್ಷಕ್ಕೆ ಶಾಶ್ವತ ಪರಿಹಾರವಿಲ್ಲ; ಅರಣ್ಯಗಳ ಮೇಲಿನ ನಿಯಂತ್ರಣ...

ಶಿವಮೊಗ್ಗ | ನೀರಿಲ್ಲದೆ ಒಣಗುತ್ತಿವೆ ಅಡಿಕೆ ತೋಟಗಳು: ರೈತರ...

ಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಪಾಲಿಗೆ ನಾಲೆಗಳ ನೀರು ಕೇವಲ ಕೃಷಿಗೆ ಪೂರಕವಾದ ವ್ಯವಸ್ಥೆಯಲ್ಲ. ಅದು ಅವರ ವಾರ್ಷಿಕ ಆದಾಯ, ಕುಟುಂಬದ ನಿರ್ವಹಣೆ, ಕೃಷಿ ಸಾಲದ ಮರುಪಾವತಿ ಹಾಗೂ ಮುಂದಿನ ಬದುಕಿನ ಭರವಸೆಯಾಗಿದೆ....

ಸಮುದಾಯ ಹಾಗೂ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತು ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾನ್ಯ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಅನುದಾನದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಕನಕ ಭವನ ನಿರ್ಮಾಣಕ್ಕೆ ₹1 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಸ್ಥಗಿತಗೊಂಡಿದ್ದ ಕಾಮಗಾರಿಯನ್ನು ಪೂರ್ಣಗೊಳಿಸಲು ಹೆಚ್ಚುವರಿಯಾಗಿ ₹60 ಲಕ್ಷ ಸೇರಿದಂತೆ ಒಟ್ಟು ₹1.20 ಕೋಟಿ ಅನುದಾನ ಒದಗಿಸಲಾಗಿದೆ. ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿ ಮುಂದಿನ ಎರಡು ತಿಂಗಳೊಳಗೆ ಅದ್ದೂರಿಯಾಗಿ ಉದ್ಘಾಟಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಜಿಲ್ಲಾಧಿಕಾರಿಗಳಾದ ಡಾ. ಕುಮಾರ ಮಾತನಾಡಿ, ಕನಕದಾಸರು ಕತ್ತಿ ಹಿಡಿದು ಹೋರಾಡಿದ ವೀರರೂ ಹೌದು, ಲೇಖನಿ ಹಿಡಿದು ಸಮಾಜದ ಅಂಕುಡೊಂಕುಗಳನ್ನು ತಿದ್ದಿದ ಶ್ರೇಷ್ಠ ಕವಿ ಹಾಗೂ ಮಾನವತಾವಾದಿಯೂ ಹೌದು. ‘ಕುಲ ಕುಲವೆಂದು ಹೊಡೆದಾಡದಿರಿ’ ಎಂಬ ಸಂದೇಶದ ಮೂಲಕ ಸಮಾನತೆಯ ಸಮಾಜದ ಪರಿಕಲ್ಪನೆಯನ್ನು ಸಾರಿದ ಅವರ ಜಯಂತಿಯನ್ನು ಕೇವಲ ಒಂದು ದಿನದ ಆಚರಣೆಗೆ ಸೀಮಿತಗೊಳಿಸಬಾರದು. ಅವರ ಚಿಂತನೆ ಮತ್ತು ಆದರ್ಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಳ್ಳುವುದರ ಜತೆಗೆ ಯುವಪೀಳಿಗೆಗೆ ಅವರ ವಿಚಾರಗಳನ್ನು ಪರಿಚಯಿಸುವ ಕಾರ್ಯವಾಗಬೇಕು ಎಂದರು.

ಕನಕದಾಸರ ಜೀವನ ಚರಿತ್ರೆ ಕುರಿತು ವಿಶೇಷ ಉಪನ್ಯಾಸ ನೀಡಿದ ಮುಖ್ಯೋಪಾಧ್ಯಾಯ ಎಂ.ಎಲ್. ಉಮೇಶ್ ಅವರು, ಧಾರವಾಡ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಾಡ ಗ್ರಾಮದ ದಂಡನಾಯಕ ಬೀರಪ್ಪ ನಾಯಕ ಮತ್ತು ಬಚ್ಚಮ್ಮ ದಂಪತಿಗೆ ತಿರುಪತಿ ತಿಮ್ಮಪ್ಪನ ಪುತ್ರನಾಗಿ ಜನಿಸಿದ ಕನಕದಾಸರ ಮೂಲ ಹೆಸರು ತಿಮ್ಮಪ್ಪ ನಾಯಕ. ಯುದ್ಧಭೂಮಿಯಲ್ಲಿ ಉಂಟಾದ ಮನಃಪರಿವರ್ತನೆಯಿಂದ ದಂಡನಾಯಕನ ಪದವಿಯನ್ನು ತ್ಯಜಿಸಿ, ಆಧ್ಯಾತ್ಮಿಕ ಜೀವನದತ್ತ ಮುಖಮಾಡಿದರು. ತಂಬೂರಿ ಹಿಡಿದು ಕೀರ್ತನೆಗಳ ಮೂಲಕ ಸಮಾಜಕ್ಕೆ ದ್ವೈತ-ಅದ್ವೈತ ತತ್ವಗಳನ್ನು ಸಾರುವುದರ ಜತೆಗೆ ಜಾತೀಯತೆಯ ವಿರುದ್ಧ ಜನಜಾಗೃತಿ ಮೂಡಿಸಿದರು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಮೂಡ ಅಧ್ಯಕ್ಷ ಬಿ.ಪಿ. ಪ್ರಕಾಶ್, ವಿಜಯಲಕ್ಷ್ಮಿ ರಘುನಂದನ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ವಿ. ನಂದೀಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಮಹೇಶ್, ಸಂದೇಶ್, ಮುಖಂಡರಾದ ಅಸ್ಮತ್, ಅಮ್ಜದ್ ಪಾಷಾ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ಸಮಾಜದ ಮುಖಂಡರು ಹಾಗೂ ಗಣ್ಯರು ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಡೆದ ಗೀತಗಾಯನ ಕಾರ್ಯಕ್ರಮವು ನೆರೆದಿದ್ದವರ ಗಮನ ಸೆಳೆಯಿತು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ |ಸಂವಿಧಾನವೇ ಭಾರತದ ನಿಜವಾದ ಹಬ್ಬ ;ನ್ಯಾಯಾಧೀಶ ಅರವಿಂದ ಹಾಗರಗಿ

ಜಾತಿ, ಧರ್ಮದ ಭೇದ ಮರೆತು ಒಗ್ಗಟ್ಟಿನಿಂದ ಬದುಕುವ ಸಂದೇಶ ಸಾರುವ ಮೂಲಕ...

ವಿಜಯಪುರ |ಕನಕದಾಸ ಚಿಂತನೆ ಜಾತಿ ಮೀರಿದ ಮಾನವೀಯತೆಯ ಸಂದೇಶ; ಡಾ ಔದ್ರಾಮ

ಕನಕದಾಸ ಭಕ್ತಿ, ಸಮಾನತೆ ಮತ್ತು ಮಾನವೀಯತೆಯ ಸಂದೇಶಗಳನ್ನು ಜಯಂತಿ ಆಚರಣೆಗೆ ಸೀಮಿತಗೊಳಿಸದೆ,...

ಮಂಗಳೂರು | ಸಂವಿದಾನ ದಿನಾಚರಣೆ: ವಿಶೇಷ ಕಾರ್ಯಪಡೆಯಿಂದ ಸ್ವಚ್ಚತಾ ಕಾರ್ಯ

ಸಂವಿಧಾನ ದಿನಾಚರಣೆ ಹಿನ್ನೆಲೆಯಲ್ಲಿ ವಿಶೇಷ ಕಾರ್ಯಪಡೆ, ಮಂಗಳೂರು ಘಟಕದ ವತಿಯಿಂದ ಪಣಂಬೂರು...

ಬೆಳಗಾವಿ | ಆಸ್ತಿ ವಿವಾದದ ಕಲಹ : ಜೀವಾಪುರ ಗ್ರಾಮದಲ್ಲಿ ಜೋಡಿ ಕೊಲೆ!

ಆಸ್ತಿ ವಿಚಾರವಾಗಿ ಗುಂಪುಗಳ ಮಧ್ಯೆ ಉಂಟಾದ ಕಲಹ ವಿಕೋಪಕ್ಕೆ ತಿರುಗಿ ಇಬ್ಬರನ್ನು...