ಮಂಡ್ಯ | ಕನ್ನಡಹಬ್ಬ ಸಂಭ್ರಮ: ಅಕ್ಷರ ಜಾತ್ರೆಗೆ ಕವನ, ಸಾಧಕರಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

Date:

Advertisements

ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಫಿಲಂಸ್ಸ್, ಕನ್ನಂಬಾಡಿ ದಿನಪತ್ರಿಕೆ ಇವರ ಸಂಯುಕ್ತಾಶ್ರಯದಲ್ಲಿ ಕನ್ನಡಹಬ್ಬ ಸಂಭ್ರಮ ಅಂಗವಾಗಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಿಮಿತ್ತ ನವೆಂಬರ್ 17ರ ಭಾನುವಾರದಂದು ಮಂಡ್ಯ ನಗರ ಗಾಂಧಿಭವನದಲ್ಲಿ 9ನೇ ಕನ್ನಡ ಅಕ್ಷರ ಜಾತ್ರೆಯನ್ನು ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆಸಕ್ತರಿಂದ ಕವಿಗೋಷ್ಠಿಗೆ ಕವನವನ್ನು ಹಾಗೂ ಸಾಧಕರಿಂದ ವಿವಿಧ ಪ್ರಶಸ್ತಿಗೆ ಅರ್ಜಿಯನ್ನು ಆಹ್ವಾನಿಸಿದೆ.

ಆಸಕ್ತರು 20 ಸಾಲಿನ ಎರಡು ಕವನಗಳು, ಕಿರು ಪರಿಚಯ, ಪೋಟೋ, ಮೊಬೈಲ್ ಸಂಖ್ಯೆ ಹಾಗೂ ವಿಳಾಸವನ್ನು ಆಕ್ಟೋಬರ್ 25ರೊಳಗೆ ವ್ಯಾಟ್ಸಪ್ ಮೂಲಕ ಕಳುಹಿಸಬೇಕು.

ಕವನಗಳು ಯಾವುದಾದರೂ ವಿಷಯವನ್ನು ಒಳಗೊಂಡಿರಬಹುದು. ಆಯ್ಕೆಯಾದ ಕವಿತೆಗಳನ್ನು ಪುಸ್ತಕ ರೂಪದಲ್ಲಿ ಹೊರತರಲಾಗುವುದು. ಐವತ್ತು ಮಂದಿ ಕವಿಗಳಿಗೆ ಕವಿಗೋಷ್ಠಿಯಲ್ಲಿ ಅವಕಾಶ ಕಲ್ಪಿಸಲಾಗುವುದು. ಇಪ್ಪತ್ತು ಉತ್ತಮ ಕವನಗಳಿಗೆ ಕಾವ್ಯಶ್ರೀ, ಇಪ್ಪತ್ತು ಮಂದಿ ಸಾಧಕರಿಗೆ ‘ಕನ್ನಡರತ್ನ, ಐದು ಮಂದಿಗೆ ‘ಕರ್ನಾಟಕ ಸೇವಾರತ್ನ’ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

Advertisements

ಇದನ್ನು ಓದಿದ್ದೀರಾ? ರಾಮನಗರ | ಕಸಾಪದಿಂದ ಅಗಲಿದ ಉದ್ಯಮಿ ರತನ್ ಟಾಟಾಗೆ ನುಡಿನಮನ

ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರು ಸ್ವವಿವರದೊಂದಿಗೆ ಅರ್ಜಿಯನ್ನು ವ್ಯಾಟ್ಸಪ್ ಮೂಲಕ ಕಳುಹಿಸಬೇಕು. ಜೀವಮಾನದಲ್ಲಿ ಅತ್ಯುತ್ತಮ ಸಾಹಿತ್ಯ ಸೇವೆ ಮಾಡಿದ ಸಾಧಕರನ್ನು 9ನೇ ಕನ್ನಡ ಅಕ್ಷರ ಜಾತ್ರೆ ಸಮ್ಮೇಳನಾಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.

ಹೆಚ್ಚಿನ ವಿವರಕ್ಕಾಗಿ ಕವನಗಳು ಮತ್ತು ಪ್ರಶಸ್ತಿಗೆ ವಿವರಗಳನ್ನು ಎಸ್.ಕೃಷ್ಣಸ್ವರ್ಣಸಂದ್ರ ವ್ಯಾಟ್ಸಾಪ್ ನಂ-9448424380ಗೆ ಕಳುಹಿಸಬೇಕಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X