ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ನಾಡೋಜ ಡಾ ಮಹೇಶ್ ಜ್ಯೋಷಿ ಆದೇಶದ ಮೇರೆಗೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಘಟಕಕ್ಕೆ ಎಂ ಬಿ ಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಈ ಹಿಂದೆ ಶ್ರೀರಂಗಪಟ್ಟಣ ತಾಲೂಕು ಅಧ್ಯಕ್ಷರಾಗಿ ಬಿ ಮಂಜುನಾಥ್ ನಾಮನಿರ್ದೇಶನಗೊಂಡಿದ್ದರು. ಅವರನ್ನು ಡಿಸೆಂಬರ್ 20, 21 ಮತ್ತು 22ರಂದು ಮಂಡ್ಯದಲ್ಲಿ ನಡೆಯುತ್ತಿರುವ 47ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕಾರ್ಯದರ್ಶಿಗಳನ್ನಾಗಿ ನಾಮನಿರ್ದೇಶನ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅವರ ಸ್ಥಾನಕ್ಕೆ ಕೆಆರ್‌ಎಸ್‌ನ ಎಂ ಬಿ ಕುಮಾರ್ ಅವರ ನಾಮನಿರ್ದೇಶನ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಪ್ರಸ್ತಾವನೆ ಪರಿಶೀಲಿಸಿದ ಜಿಲ್ಲಾ ಕಾರ್ಯಕಾರಿ ಸಮಿತಿ ಒಪ್ಪಿಗೆ ನೀಡಿದ್ದು, ಇನ್ನು ಮುಂದಿನ ಆದೇಶದವರೆಗೆ ತಾಲೂಕು ಅಧ್ಯಕ್ಷ ಸ್ಥಾನದಲ್ಲಿ ಕಾರ್ಯನಿರ್ವಹಿಸಲು ಎಂ ಬಿ ಕುಮಾರ್ ಅವರಿಗೆ ಸೂಚನೆ ನೀಡಲಾಗಿದೆ.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ಪಿಎಸ್‌ಐ ಪರಶುರಾಮ ಪ್ರಕರಣ: ಎಸ್‌ಸಿ-ಎಸ್‌ಟಿ ಸರ್ಕಾರಿ ನೌಕರರ ಸಂಘದಿಂದ ಮೌನ ಪ್ರತಿಭಟನೆ
ಜಿಲ್ಲಾ ಸಂಚಾಲಕಿ ಮೀರಾ ಶಿವಲಿಂಗಯ್ಯ, ಗೌರವ ಕಾರ್ಯದರ್ಶಿಗಳಾದ ಕೃಷ್ಣೇಗೌಡ ಹುಸ್ಕೂರು, ವಿ ಶ್ರೀಹರ್ಷ, ಕಸಾಪ ಕೋಶಾಧ್ಯಕ್ಷ ಬಿ ಎಂ ಅಪ್ಪಾಜಪ್ಪ ಸೇರಿದಂತೆ ಶ್ರೀರಂಗಪಟ್ಟಣ ಕಸಾಪ ಪದಾಧಿಕಾರಿಗಳು ನೂತನ ಅಧ್ಯಕ್ಷ ಎಂ ಬಿ ಕುಮಾರ್ ಅವರನ್ನು ಅಭಿನಂದಿಸಿದ್ದಾರೆ.