ಮಂಡ್ಯ | ಖಾಲಿಯಾಗುತ್ತಿದೆ ಕೆಆರ್‌ಎಸ್‌ ನೀರು; ರೈತರಲ್ಲಿ ಆಂತಕ

Date:

ಮಂಡ್ಯ ಜಿಲ್ಲೆಯ ರೈತರ ಜೀವನಾಡಿಯಾಗಿರುವ ಕೆಆರ್‌ಎಸ್ ಅಣೆಕಟ್ಟೆಯಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಮೈಸೂರು, ಬೆಂಗಳೂರು, ಮಂಡ್ಯ, ರಾಮನಗರ ಜಿಲ್ಲೆಗಳ ರೈತರಲ್ಲಿ ಆತಂಕ ಉಂಟುಮಾಡಿದೆ.

ಕೆಆರ್‌ಎಸ್‌ನಲ್ಲಿ ನೀರಿನ ಮಟ್ಟ 74 ಅಡಿಗೆ ಕುಸಿದರೆ ಕುಡಿಯುವ ಉದ್ದೇಶಕ್ಕೆ ಮಾತ್ರ ನೀರು ಬಳಸಿಕೊಳ್ಳಲಾಗುವುದು ಎಂದು ಅಣೆಕಟ್ಟೆ ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್ ವೇಳೆಗೆ ಅಣೆಕಟ್ಟೆಗೆ ಒಳಹರಿವು ಹೆಚ್ಚಾಗದಿದ್ದರೆ ಕಬ್ಬು ಬೆಳೆಗಾರರು ಸಂಕಷ್ಟಕ್ಕೆ ಸಿಲುಕುವ ಭೀತಿ ಎದುರಾಗಿದೆ. ಗುರುವಾರ ಅಣೆಕಟ್ಟೆಯ ನೀರಿನ ಮಟ್ಟ 85.84 ಅಡಿ ಇತ್ತು. ಜಲಾಶಯಕ್ಕೆ 629 ಕ್ಯೂಸೆಕ್ ನೀರಿನ ಒಳಹರಿವು ಇದೆ. ಆದರೆ, ವಿಶ್ವೇಶ್ವರಯ್ಯ ನಾಲೆಗೆ 1,252 ಕ್ಯೂಸೆಕ್ ನೀರು ಸೇರಿದಂತೆ 2,336 ಕ್ಯೂಸೆಕ್ ಹೊರಹರಿವು ಇತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನೀರಿನ ಮಟ್ಟ 74 ಅಡಿಗೆ ಕುಸಿದ ನಂತರ ಕುಡಿಯುವ ಉದ್ದೇಶಕ್ಕಾಗಿ ಮಾತ್ರ ನೀರನ್ನು ಬಳಸಲಾಗುತ್ತದೆ” ಎಂದು ಕೆಆರ್‌ಎಸ್ ಅಣೆಕಟ್ಟೆಯ ಅಧೀಕ್ಷಕ ಎಂಜಿನಿಯರ್ ಆನಂದ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಅಂಕಿಅಂಶಗಳ ಪ್ರಕಾರ, ಮಾರ್ಚ್ 1 ಮತ್ತು ಮೇ 17 ರ ನಡುವೆ, ಕೊಡಗು ಸೇರಿದಂತೆ ಕಾವೇರಿಯ ಮುಖ್ಯ ಜಲಾನಯನ ಪ್ರದೇಶದಲ್ಲಿ 45% ನಷ್ಟು ಮಳೆಯಾಗಿದೆ. ಕಾವೇರಿಯ ಮುಖ್ಯ ಉಪನದಿ ಹೇಮಾವತಿ ಹುಟ್ಟುವ ಜಿಲ್ಲೆ ಚಿಕ್ಕಮಗಳೂರಿನಲ್ಲಿ 20% ಮಳೆ ಕೊರತೆ ಉಂಟಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಎಚ್‌ಡಿಕೆ ಹೇಳಿಕೆಗೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರ ಖಂಡನೆ

ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು...

ಕಲಬುರಗಿ | ಪ್ರಜಾಪ್ರಭುತ್ವದ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌ಗೆ ಬೆಂಬಲ: ದಸಂಸ

2024ರ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವ ಉಳಿವಿಗಾಗಿ ರಾಜ್ಯಾದ್ಯಂತ ಕಾಂಗ್ರೆಸ್‌...

ದಾವಣಗೆರೆ | ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ: ಪ್ರಾಂಶುಪಾಲ ಕಲ್ಲೇಶ್‌

ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ. ಅದರ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ...

ರಾಯಚೂರು | ಎಚ್‌ಡಿಕೆಯಿಂದ ಮಹಿಳೆಯರಿಗೆ ಅವಮಾನ, ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಜೆಡಿಎಸ್ ರಾಜ್ಯಾಧ್ಯಕ್ಷ...