ಮಂಡ್ಯ | ಕಾವೇರಿ ನದಿಗೆ 3 ಲಕ್ಷ ಕ್ಯುಸೆಕ್ ನೀರು ಬಿಡುಗಡೆ; ಎಚ್ಚರಿಕೆಯಿಂದಿರಲು ಸೂಚನೆ

Date:

ಕಾವೇರಿ ಜಲಾನಯನ ಪ್ರದೇಶವಾದ ಕೊಡಗಿನಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಕನ್ನಂಬಾಡಿ ಅಣೆಕಟ್ಟೆಗೆ ಭಾರೀ ಪ್ರಮಾಣದಲ್ಲಿ ಒಳಹರಿವು ಬರುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯ ಹಾಗೂ ಕಬಿನಿ ಜಲಾಶಯದಿಂದ 2 ಲಕ್ಷ ಕ್ಯುಸೆಕ್‌ಗೂ ಹೆಚ್ಚು ಹೊರಹರಿವು ನೀರನ್ನು ನದಿಗೆ ಬಿಡುಗಡೆ ಮಾಡಲಾಗಿದ್ದು, ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ನೀಡಿದೆ.

- Advertisement -

ಕನ್ನಂಬಾಡಿಯಿಂದ ಸುಮಾರು 1,50,000 ಕ್ಯುಸೆಕ್, ಹೇಮಾವತಿಯಿಂದ 1 ಲಕ್ಷ ಕ್ಯುಸೆಕ್ ಹಾಗೂ ಕಬಿನಿ ಜಲಾಶಯದಿಂದ ಈಗಾಗಲೇ 80,000 ಕ್ಯುಸೆಕ್‌ಗೂ ಹೆಚ್ಚಿನ ಹೊರಹರಿವು ನೀರನ್ನು ಕಾವೇರಿ ನದಿಗೆ ಬಿಡಲಾಗಿದ್ದು, ಈ ಪ್ರಮಾಣವೂ ಸುಮಾರು 3,00,000 ಕ್ಯುಸೆಕ್‌ಗಿಂತ ಅಧಿಕವಾಗುವ ಸಂಭವವಿರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...
1001137701

ಮಂಡ್ಯ, ಮೈಸೂರು, ಮತ್ತು ಚಾಮರಾಜನಗರ ಜಿಲ್ಲೆಯ ಜನರು ಹಾಗೂ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ಸುರಕ್ಷತೆಗೆ ಎಚ್ಚರಿಕೆ ವಹಿಸಿ, ಸರಿಯಾದ ಮುನ್ನೆಚ್ಚರಿಕೆಯಿಂದ ಸುರಕ್ಷಿತ ಜಾಗಗಳಿಗೆ ತೆರಳುವಂತೆ ಕಾವೇರಿ ನದಿ ಪಾತ್ರದಲ್ಲಿನ ಸಾರ್ವಜನಿಕರು ಸ್ವಯಂ ಮುಂಜಾಗ್ರತೆ ವಹಿಸಲು ತಿಳಿಸಲಾಗಿದೆ.

ಕಾವೇರಿ ನದಿ ಪಾತ್ರಕ್ಕೆ ಇಲ್ಲವೇ ತಗ್ಗು ಪ್ರದೇಶಗಳಿಗೆ ಭೇಟಿ ನೀಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ನದಿಪಾತ್ರದಲ್ಲಿ ಮತ್ತು ತಗ್ಗು ಪ್ರದೇಶಗಳಲ್ಲಿರುವ ರೈತರು ಕೃಷಿ ಚಟುವಟಿಕೆಗಳಿಗೆ ಹೋಗದಂತೆ ಹಾಗೂ ಜಾನುವಾರುಗಳನ್ನು ಬಿಡದಿರಲು ಸೂಚಿಸಿದೆ.

ನದಿಪಾತ್ರದಲ್ಲಿ ಮತ್ತು ಸೇತುವೆ ಇನ್ನಿತರ ಪ್ರೇಕ್ಷಣಿಯ ಸ್ಥಳಗಳಿಗೆ ಭೇಟಿ ನೀಡುವುದು, ನೀರಿನಲ್ಲಿ ಈಜುವುದು ಹಾಗೂ ಸೆಲ್ಫಿ ತೆಗೆಯುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ ಹಾಗೂ ಅಪಾಯಕಾರಿ ಸ್ಥಳಗಳಲ್ಲಿ ಅಳವಡಿಸಿರುವ ಸೂಚನಾ ಫಲಕಗಳನ್ನು ಗಮನಿಸಲು ಸೂಚಿಸಲಾಗಿದೆ.

ತಾಲೂಕು ಆಡಳಿತದ ವತಿಯಿಂದ ಈಗಾಗಲೇ ಮುನ್ನೆಚ್ಚರಿಕಾ ಕ್ರಮವಾಗಿ ಕೈಗೊಂಡಿರುವ ಕ್ರಮವನ್ನು ವ್ಯಾಪಕ ಪ್ರಚಾರ ಮಾಡಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಕಬ್ಬು ಬೆಳೆಗಾರರು ಹುಬ್ಬಳ್ಳಿಗೆ ಪಾದಯಾತ್ರೆ; ಕೇಂದ್ರ ಸಚಿವರ ಅಣಕು ಶವಯಾತ್ರೆ

ಕಬ್ಬಿಗೆ ಪ್ರತಿ ಟನ್‌ಗೆ ₹5500 ನೀಡಬೇಕು. ಎಮ್.ಎಸ್.ಪಿ. ದರ 31ರೂ ಇದ್ದದ್ದು,...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...