ಮಂಡ್ಯ | ಮರಕ್ಕೆ ಡಿಕ್ಕಿ ಹೊಡೆದ ಕೆಎಸ್ಆರ್‌ಟಿಸಿ ಬಸ್; ಐವರ ಸ್ಥಿತಿ ಗಂಭೀರ

Date:

ಕೆಎಸ್ಆರ್‌ಟಿಸಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಸುಮಾರು 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನಲ್ಲಿ ನಡೆದಿದೆ.

- Advertisement -

ತಾಲೂಕಿನ ಅಲೇನಹಳ್ಳಿಯಿಂದ ಕೆ.ಆರ್‌ ಪೇಟೆ ತೆರಳುತ್ತಿದ್ದ ಬಸ್‌, ಕುಂದಹಳ್ಳಿ ಬಳಿ ಮರಕ್ಕೆ ಡಿಕ್ಕಿ ಹೊಡೆದು, ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಬಸ್‌ನಲ್ಲಿ ಹೆಚ್ಚಿನ ಪ್ರಯಾಣಿಕರು ವಿದ್ಯಾರ್ಥಿಗಳೇ ಇದ್ದರು. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಕೆ.ಆರ್‌ ಪೇಟೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ನೀಡಲಾಗುತ್ತಿದೆ.

ಗಾಯಗೊಂಡರವಲ್ಲಿ ಐವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಮೈಸೂರಿಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಕೆ.ಆರ್ ಪೇಟೆ ಬಳಿ ಮರಕ್ಕೆ ಬಸ್‌ ಡಿಕ್ಕಿಹೊಡೆದಿದೆ. ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂಬ ಸುದ್ದಿ ಕೇಳಿ ತೀವ್ರ ಆಘಾತ ಉಂಟಾಯಿತು. ತಕ್ಷಣವೇ ವೈದ್ಯಾಧಿಕಾರಿಗಳೊಂದಿಗೆ ಮಾತನಾಡಿ ಮಾಹಿತಿ ಪಡೆದಿದ್ದೇನೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಗಾಯಾಳುಗಳು ಶೀಘ್ರವೇ ಚೇತರಿಸಿಕೊಳ್ಳುವಂತಾಗಲೆಂದು ಹಾರೈಸುತ್ತೇನೆ” ಎಂದು ಮಂಡ್ಯ ಪೊಲೀಸ್ ವರಿಷ್ಠಾಧಿಕಾರಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...