ಮಂಡ್ಯ | ನಗರಕೆರೆಯಲ್ಲಿ ಚಿರತೆ ಪ್ರತ್ಯಕ್ಷ; ಆತಂಕಗೊಂಡ ಕೃಷಿಕರು

Date:

ನಗರಕೆರೆ ಗ್ರಾಮದ ತೊರೆ ಮಾಲದಲ್ಲಿನ ಪ್ರದೇಶದಲ್ಲಿ ಚಿರತೆಯೊಂದು ತನ್ನ ಮರಿಯೊಂದಿಗಿರುವುದು ಕಂಡುಬಂದಿದೆ. ಚಿರತೆ ಪ್ರತ್ಯಕ್ಷವಾಗಿರುವುದನ್ನು ಕಂಡ ರೈತರು ಆತಂಕಗೊಂಡಿದ್ದಾರೆ.

- Advertisement -

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನಗರಕೆರೆ ಗ್ರಾಮದಲ್ಲಿ ಕಳೆದ ಹದಿನೈದು ದಿನಗಳಿಂದ ಚಿರತೆ ಇರುವಿಕೆಯ ಸುದ್ದಿ ಹರಡಿತ್ತು. ಆದರೂ ಯಾವತ್ತಿಗೂ ಚಿರತೆ ಮುಖಾಮುಖಿಯಾಗಿರಲಿಲ್ಲ. ನಿನ್ನೆ ಮಧ್ಯಾಹ್ನ ರೈತ ಎನ್ ಎಲ್ ಬಲರಾಮು ಅವರ ಪುತ್ರ ಚಿರಾಗ್ ಅವರು ತೋಟದ ಕಡೆ ಹೋದಾಗ, ಚಿರತೆ ತನ್ನ ಮರಿಯೊಂದಿಗೆ ಇರುವುದನ್ನು ಅತಿ ಸನಿಹದಲ್ಲೇ ಕಂಡಿದ್ದಾರೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇತರೆ ರೈತರನ್ನು ಕರೆದು ಚಿರತೆ ಇರುವುದನ್ನ ತೋರಿಸಿದ್ದು, ಎಚ್ಚರಿಕೆಯಿಂದ ಇರುವಂತೆ ತಿಳಿಸಲಾಗಿದೆ. ಜತೆಗೆ ಮುಂಜಾಗೃತಾ ಕ್ರಮವಾಗಿ ಚಿರತೆ ಇರುವ ಕುರಿತು ಆರಣ್ಯ ಇಲಾಖೆ ಅಧಿಕಾರಿ ಗವಿಯಪ್ಪ ಅವರಿಗೆ ಮಾಹಿತಿ ನೀಡಿದ್ದಾರೆ.

ರೈತರಿಂದ ಸುದ್ದಿ ತಿಳಿದ ಗವಿಯಪ್ಪ ಮಂಗಳವಾರ ಬೆಳಿಗ್ಗೆಯೇ ತಮ್ಮ ಸಿಬ್ಬಂದಿಯನ್ನು ನಗರಕೆರೆಯಲ್ಲಿನ ಚಿರತೆ ಕಂಡ ಸ್ಥಳಕ್ಕೆ ಕಳುಹಿಸಿಕೊಡುವುದಾಗಿ ಹೇಳಿದ್ದು, ರೈತರು ಎಚ್ಚರಿಕೆಯಿಂದ ಇರುವಂತೆ ಸಲಹೆ ನೀಡಿದ್ದಾರೆ.

ಈ ಪ್ರದೇಶದಲ್ಲಿ ಕಾಡು ಹಂದಿ ಮುಳ್ಳು ಹಂದಿಗಳ ಹಾವಳಿ ವಿಪರೀತವಾಗಿದ್ದು, ಆಹಾರ ಹರಸಿ ಬಂದ ಚಿರತೆ
ಇಲ್ಲೇ ಬೀಡು ಬಿಟ್ಟಿರುವುದಾಗಿ ಇಲ್ಲಿನ ರೈತ ಮುಖಂಡರಾದ ಎನ್ ಎಸ್ ಪ್ರಸನ್ನಕುಮಾರ್, ಮಲ್ಲಿಕಾರ್ಜುನ ಧನಂಜಯ್ಯ ಕುಮಾರ್ ಸೇರಿದಂತೆ ಮತ್ತಿತರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿದ್ದೀರಾ? ಶ್ರೀನಿವಾಸಪುರ ಮಾವಿನ ಮಾರುಕಟ್ಟೆ ಮತ್ತೆ ಸಜ್ಜು; ಮೇ 15ರಿಂದ ಆರಂಭ

ಚಿರತೆ ಇಲ್ಲಿ ನೆಲೆಸಿರುವುದರಿಂದ ಈ ಭಾಗದ ಕೃಷಿಕರು, ಕುರಿಗಾಹಿಗಳ ಸುರಕ್ಷತೆಗೆ ಧಕ್ಕೆ ಬಂದಿದೆ. ಈ ಮೊದಲು ಈ ಪ್ರದೇಶದಲ್ಲಿ ಜಮೀನಿನ ಕಾವಲಿಗೆ ಕಟ್ಟಿದ್ದ ನಾಯಿಯನ್ನು ಚಿರತೆ ಹೊತ್ತೊಯ್ದಿತ್ತು. ಆಗ ಅರಣ್ಯ ಇಲಾಖೆಯವರು ಬೋನ್ ಇರಿಸಿ ಕಾರ್ಯಾಚರಣೆ ಮಾಡಿದ್ದರು. ಚಿರತೆ ಸೆರೆ ಸಿಕ್ಕಿರಲಿಲ್ಲ. ಇದೀಗ ಅರಣ್ಯ ಇಲಾಖೆ ಕಾರ್ಯಚರಣೆ ಯಶಸ್ವಿಯಾಗಿ ಈ ಭಾಗದ ರೈತರ ಆತಂಕ‌ ದೂರಾಗುವುದೇ ಕಾಯ್ದು ನೋಡಬೇಕು ಎನ್ನುತ್ತಿದ್ದಾರೆ ನಗೆಕೆರೆ ಗ್ರಾಮಸ್ಥರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...