ಮಂಡ್ಯ | ಅಂಬೇಡ್ಕರ್ ಪುತ್ಥಳಿ ಎದುರು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರೇಮಿಗಳು

Date:

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯುವ ಪ್ರೇಮಿಗಳು, ಪ್ರಜ್ಞಾವಂತರ ವೇದಿಕೆ, ದಸಂಸ, ಬೌದ್ಧ ಮಹಾ ಸಭಾ ಮುಖಂಡರ ನೆರವಿನೊಂದಿಗೆ ಶ್ರೀರಂಗಪಟ್ಟಣದ ಅಂಬೇಡ್ಕರ್ ಪುತ್ಥಳಿ ಎದುರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

- Advertisement -

ಸಕಲೇಶಪುರ ತಾಲೂಕಿನ ಯುವ ಪ್ರೇಮಿಗಳು ಅಂತರ್ಜಾತಿ ವಿವಾಹವಾಗಿದ್ದು, ಪೋಷಕರ ಭಯಕ್ಕೆ ಊರು ಬಿಟ್ಟು ಬಂದಿದ್ದು, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣಕ್ಕೆ ಬಂದು ಸೇರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸಕಲೇಶಪುರ ಪಟ್ಟಣದ ಕುಶಾಲ್‌ ನಗರ, ಟಿಎಂಸಿ ಕಾಲೊನಿಯ ಯುವಕ ಪ್ರಜ್ವಲ್‌ ದಲಿತ ಸಮುದಾಯದವರಾಗಿದ್ದು, ಸೇರಿದ್ದು, ತಾಲೂಕಿನ ಮಾಗಡಿ ಹಲಸುಲಿಗೆ ಗ್ರಾಮದ ಯುವತಿ ಸಂಜನಾ ಒಕ್ಕಲಿಗ ಸಮುದಾಯದವರಾಗಿದ್ದಾರೆ.

ರಿಜಿಸ್ಟರ್‌ ಮ್ಯಾರೇಜ್

ಯುವ ಪ್ರೇಮಿಗಳು ಪರಸ್ಪರ ಒಬ್ಬರನ್ನೊಬ್ಬರು ಪ್ರೀತಿಸಿದ್ದರು. ಆದರೆ, ಮದುವೆಯಾಗಲು ತಮ್ಮ ಊರಿನಲ್ಲಿ ಜಾತಿ ಅಡ್ಡ ಬರುವ ಭಯದಿಂದ ಊರು ಬಿಟ್ಟು ಬಂದು ಕೆಅರ್‌ಎಸ್ ಬಳಿಯ ಅಕ್ಕನ ಮನೆಯಲ್ಲಿದ್ದರು. ಸಂಘಟನೆಗಳ ಸಹಾಯ ಪಡೆದು, ವಯಸ್ಕರರಾಗಿರುವ ಹಿನ್ನಲೆಯಲ್ಲಿ ಸ್ಥಳೀಯ ಮುಖಂಡರೆಲ್ಲರೂ ಸೇರಿ ಇಬ್ಬರಿಗೂ ಮದುವೆ ಮಾಡಿಸಿರುತ್ತಾರೆ. ಕಾನೂನು ಬದ್ದವಾಗಿ ವಿವಾಹ ನೋಂದಣಿಯೂ ಆಗಿದೆ.

ನವ ವಿವಾಹಿತ ಪ್ರಜ್ವಲ್ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ನಾನು ದಲಿತ ಸಮುದಾಯದವನಾಗಿದ್ದು, ಹುಡುಗಿ ಒಕ್ಕಲಿಗ ಸಮುದಾಯದವರು. ಹಾಗಾಗಿ ಅವರ ಮನೆಯವರು ಸಕಲೇಶಪುರ ಠಾಣೆಯಲ್ಲಿ ದೂರು ನೀಡಿದ್ದಾರೆ. ನಮಗೆ ಪ್ರಾಣ ಭಯವಿದೆ. ನಮಗೆ ರಕ್ಷಣೆ ಬೇಕು. ನಾವು ಮರಳಿ ಸಕಲೇಶಪುರಕ್ಕೆ ತೆರಳಿ ಜೀವನ ನಡೆಸುತ್ತೇವೆ. ಯಾರಿಂದಲೂ ನಮಗೆ ತೊಂದರೆ ಆಗದಂತೆ ರಕ್ಷಣೆ ಕೊಡಿಸಿ” ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ನೂಲಿ‌ ಚಂದಯ್ಯ ಜಯಂತಿ ಆಚರಣೆ

ಬೌದ್ಧ ಬಿಕ್ಕು ಬಂತಾಜೆ ಅವರ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಲ್ಲಿ ನಡೆದ ಸರಳ ವಿವಾಹದಲ್ಲಿ ದಸಂಸ
ನಂಜುಂಡ ಮೌರ್ಯ, ವಕೀಲ ಸಿ ಎಸ್ ವೆಂಕಟೇಶ್, ಬೌದ್ಧ ಮಹಾಸಭಾ ರಂಗಪ್ಪ, ಬಾಬು ಜಗಜೀವನ್ ರಾಂ
ಸಂಘಟನೆ ಅದ್ಯಕ್ಷ ಸಿದ್ದರಾಜು, ಜನವಾದಿ ಮಹಿಳಾ ಸಂಘಟನೆ ತಾಲೂಕು ಅಧ್ಯಕ್ಷೆ ಜಯಮ್ಮ ಸೇರಿದಂತೆ ಹಲವು ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...