ಮಂಡ್ಯ | ಒಳಮೀಸಲಾತಿ ಜಾರಿಗೆ ಆಗ್ರಹ: ಮಾದಿಗ ಸಮುದಾಯದಿಂದ ಪ್ರತಿಭಟನೆ

Date:

Advertisements

ಮಂಡ್ಯ ನಗರದಲ್ಲಿ ಮಾದಿಗ ಸಮುದಾಯದ ಸಹಸ್ರಾರು ಜನರು ಅ.16ರ ಬುಧವಾರ ಬೀದಿಗಿಳಿದು ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದರು.

2023ರ ಕರ್ನಾಟಕ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿರುವ ಆರು ಗ್ಯಾರಂಟಿಗಳಲ್ಲಿ 6ನೇ ಗ್ಯಾರಂಟಿಯಾಗಿ ಒಳಮೀಸಲಾತಿಯನ್ನು ಜಾರಿಗೆ ತರಬೇಕೆಂದು ಸಮುದಾಯದವರು ಒತ್ತಾಯಿಸಿದರು.

ಪ್ರತಿಭಟನೆಯ ಮೆರವಣಿಗೆ ಮಂಡ್ಯ ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಿಂದ ಆರಂಭವಾಯಿತು. ಸಾವಿರಾರು ಜನ ತಮಟೆ, ನಗಾರಿಗಳೊಂದಿಗೆ ನೀಲಿ ಬಾವುಟಗಳನ್ನು ಹಿಡಿದು, ಘೋಷಣೆಗಳನ್ನು ಮೊಳಗಿಸಿದರು.

Advertisements

ಈ ಪ್ರತಿಭಟನೆಯಲ್ಲಿ ಮಂಡ್ಯ ಜಿಲ್ಲೆಯ ಎಲ್ಲಾ ಏಳು ತಾಲೂಕುಗಳಿಂದ ಜನರು ಭಾಗವಹಿಸಿದ್ದರು. ಪ್ರತಿಭಟನಾಕಾರರು 6ನೇ ಗ್ಯಾರಂಟಿಯನ್ನು ಜಾರಿಗೆ ತರಬೇಕೆಂದು ಆಗ್ರಹಿಸುತ್ತಾ, ರಾಜ್ಯದಲ್ಲಿ ಆಗಲೇ ಬಾಕಿಯಿರುವ ಮೀಸಲಾತಿ ಹುದ್ದೆಗಳನ್ನು ಹಾಗು ಇತರೆ ನೇಮಕಾತಿಗಳನ್ನು ಕೂಡಲೇ ರದ್ದುಪಡಿಸಲು ಸರ್ಕಾರಕ್ಕೆ ಒತ್ತಾಯ ಮಾಡಿದರು.

ಮಂಡ್ಯ 25

ಜಾತಿ ಜನಗಣತಿ ವರದಿಯನ್ನು ಮುನ್ನೆಲೆಗೆ ತಂದು ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಗೊಂದಲ ಸೃಷ್ಟಿಸುತ್ತಿರುವುದು ಸಂವಿಧಾನದ ವಿರುದ್ಧ ನಡೆಯುತ್ತಿರುವ ಅಪಚಾರವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಜಾತಿ ಜನಗಣತಿ ವರದಿಯು ಎಸ್ ಸಿ ಒಳಮೀಸಲಾತಿ ವರ್ಗೀಕರಣಕ್ಕೆ ಯಾವುದೇ ಸಂಬಂಧವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂಬಂಧ, ಎಸ್ ಸಿ ಮತ್ತು ಎಸ್ ಟಿ ಸಮುದಾಯಗಳಿಗೆ ಸಂಬಂಧಿಸಿದ ಮೂರು ಆಯೋಗಗಳ ವರದಿ ಮತ್ತು ಇತರ ಕಾನೂನಾತ್ಮಕ ದತ್ತಾಂಶಗಳು ಸರಕಾರದ ಕೈಯಲ್ಲಿವೆ. ಇವುಗಳ ಆಧಾರದ ಮೇಲೆ ಸುಪ್ರೀಂ ಕೋರ್ಟ್ ಏಳು ನ್ಯಾಯಮೂರ್ತಿಗಳ ಪೂರ್ಣ ಪೀಠ ತೀರ್ಪನ್ನು ಅನುಸರಿಸಿ ಒಳಮೀಸಲಾತಿಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಲಾಯಿತು.

ಪ್ರತಿಭಟನೆಯಲ್ಲಿ ನಿವೃತ್ತ ನ್ಯಾಯಾಧೀಶರಾದ ಶ್ಯಾಮ್ ಪ್ರಸಾದ್ ಹೆಚ್.ಸಿ, ಮುಖಂಡರಾದ ಅನ್ನದಾನಿ ಸಿ, ಎನ್.ಆರ್. ಚಂದ್ರಶೇಖರ್, ಸಿ.ಕೆ. ಪಾಪಯ್ಯ, ಕನ್ನಲಿ ಕೆಂಪಣ್ಣ, ನಂಜುಂಡ ಮೌರ್ಯ, ಅರಕೆರೆ ಸಿದ್ದರಾಜು, ಎಲೆಚಾಕನಹಳ್ಳಿ ಸ್ವಾಮಿ, ಕೃಷ್ಣ, ರಾಜು, ಶ್ರೀನಿವಾಸ್ ಬಸರಾಳು, ಅಂಬೂಜೀ, ಮಾರಸಿಂಗನಹಳ್ಳಿ ಬಸವರಾಜು, ಶಿವಕುಮಾರ್ ಹುನುಗನಹಳ್ಳಿ, ಸ್ವಾಮಿ ಹಟ್ನ್, ಎಲೆಚಾಲಕನಹಳ್ಳಿ ಗವಿ ಮತ್ತಿತರರು ಭಾಗವಹಿಸಿದ್ದರು.

ಮಂಡ್ಯ1 4
ಮಂಡ್ಯ2
ಮಂಡ್ಯ4
Irshad Venoor
Website |  + posts

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಇರ್ಷಾದ್ ವೇಣೂರು
ಇರ್ಷಾದ್ ವೇಣೂರುhttps://eedina.com
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

Download Eedina App Android / iOS

X