ಮಂಡ್ಯ | ಮಹರ್ಷಿ ವಾಲ್ಮೀಕಿ ಒಂದು ಸಮುದಾಯಕ್ಕೆ ಸೀಮಿತರಲ್ಲ: ಜಿಲ್ಲಾಧಿಕಾರಿ ಡಾ. ಕುಮಾರ

Date:

ಭಾರತದ ಸಂಸ್ಕೃತಿಯನ್ನು ಉಳಿಸಿರುವ ಮಹರ್ಷಿ ವಾಲ್ಮೀಕಿಯವರು ಜಗತ್ತು ಕಂಡ ಮಹಾನ್ ಚೇತನ. ವಾಲ್ಮೀಕಿಯವರು ಕೇವಲ ಒಂದು ಸಮುದಾಯದವರಿಗೆ ಸೀಮಿತವಾದವರಲ್ಲ. ಅವರ ತತ್ವ, ಆದರ್ಶ ಮತ್ತು ಚಿಂತನೆಗಳನ್ನು ಪ್ರತಿಯೊಬ್ಬರು ಪಾಲಿಸಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಅಭಿಪ್ರಾಯಪಟ್ಟರು.

- Advertisement -

ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಂಡ್ಯ ನಗರದ ಕಲಾಮಂದಿರದಲ್ಲಿ ನಡೆದ ಮಹರ್ಷಿ ವಾಲ್ಮೀಕಿಯವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

“ವಾಲ್ಮೀಕಿಯವರು ಸಾಮಾನ್ಯರಾಗಿ ಜನಿಸಿ ಅಸಾಮಾನ್ಯವಾಗಿ ಸಾಧನೆ ಮಾಡಿದವರು. ಅವರು ರಚಿಸಿರುವ ಬೃಹತ್ ವಾಲ್ಮೀಕಿ ರಾಮಾಯಣ ಗ್ರಂಥ ಇಂದಿಗೂ ಎಲ್ಲರ ಮನೆ ಹಾಗೂ ಮನಗಳಲ್ಲಿ ಚಿರಪರಿಚಿತ. ಅವರು ಶ್ಲೋಕ ಮತ್ತು ಕೃತಿಗಳನ್ನು ರಚಿಸುವ ಮೂಲಕ ಸಂಸ್ಕೃತಿ, ಸಂಸ್ಕಾರ, ಪರಂಪರೆ, ಜೀವನದ ಮೌಲ್ಯ ಮತ್ತು ಮಾನವೀಯತೆಯನ್ನು ಜಗತ್ತಿಗೆ ಸಾರಿದ್ದಾರೆ. ಭಾರತದ ಬೃಹತ್ ಮಹಾಕಾವ್ಯಗಳಾದ ಮಹಾಭಾರತ ಮತ್ತು ರಾಮಾಯಣ ಸೂರ್ಯ-ಚಂದ್ರ ಇರುವವರೆಗೂ ಶಾಶ್ವತ. ವಾಲ್ಮೀಕಿಯವರು ತಮ್ಮ ಕೃತಿಯಲ್ಲಿ ಮಾನವೀಯತೆ, ರಾಮರಾಜ್ಯ ಮತ್ತು ಪ್ರಜಾರಾಜ್ಯ ಕುರಿತಂತೆ ಪ್ರತಿಯೊಂದು ವಿಷಯಗಳ ಬಗ್ಗೆಯೂ ತಿಳಿಸಿದ್ದಾರೆ ಎಂದರೆ ತಪ್ಪಾಗುವುದಿಲ್ಲ. ಹಿರಿಯರು ಇಂದಿನ ನಮ್ಮ ಮಕ್ಕಳಿಗೆ ಮತ್ತು ಯುವ ಪೀಳಿಗೆಗೆ ರಾಮಾಯಣದ ಮಹತ್ವವನ್ನು ತಿಳಿಸಿ” ಎಂದು ಕರೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ ಮಾತನಾಡಿ, “ಅಕ್ಷರ ಜ್ಞಾನವಿದ್ದರೆ ಯಾರು ಯಾವ ಸಾಧನೆ ಬೇಕಾದರೂ ಸಾಧಿಸಬಹುದು ಹಾಗೂ ಸಮಾಜಕ್ಕೆ ಮಾದರಿಯಾಗಿ ಎಂದಿಗೂ ಅಳಿಯದ ಹೆಸರಾಗಿ ಉಳಿಯಬಹುದು ಎಂಬುವುದಕ್ಕೆ ಮಹರ್ಷಿ ವಾಲ್ಮೀಕಿಯವರು ನಿದರ್ಶನ. ವಾಲ್ಮೀಕಿ ಜಯಂತಿ ಅಂಗವಾಗಿ ಜಿಲ್ಲೆಯಲ್ಲಿನ ಪ್ರತಿ ಮಕ್ಕಳಿಗೂ ವಿದ್ಯಾಭ್ಯಾಸವನ್ನು ಒದಗಿಸುವ ನಿಟ್ಟಿನಲ್ಲಿ ಜಿಲ್ಲೆಯ ಪ್ರತಿಯೊಬ್ಬರು ಹೆಚ್ಚಿನ ಪಾತ್ರ ನಿಭಾಯಿಸುತ್ತೇವೆ” ಎಂದು ಹೇಳಿದರು.

ಇದನ್ನೂ ಓದಿ: ಮಂಡ್ಯ | ಶಿಕಾರಿಪುರ ಅಲೆಮಾರಿ ಹಕ್ಕಿಪಿಕ್ಕಿ ಸಮುದಾಯ ಜನರ ಬದುಕು ಅತಂತ್ರ

ಶ್ರೀರಂಗಪಟ್ಟಣದ ವಿದ್ಯಾಭಾರತಿ ಶಾಲೆಯ ದೈಹಿಕ ಶಿಕ್ಷಕ ಉಮೇಶ್ ಎಂ ಆರ್ ಮಾತನಾಡಿ, “ಪ್ರಸ್ತುತ ನಾವು ವಿದ್ಯಾವಂತರಾಗಿ ಸಮಾಜದಲ್ಲಿ ಜೀವನ ಸಾಗಿಸುತ್ತಿದ್ದು ಮಹರ್ಷಿ ವಾಲ್ಮೀಕಿಯವರನ್ನು ಒಂದು ಸಮುದಾಯಕ್ಕೆ ಸೀಮಿತ ಪಡಿಸುತ್ತಿರುವುದು ವಿಪರ್ಯಾಸದ ಸಂಗತಿ, ದೇಶದ ಮಹಾನ್ ವ್ಯಕ್ತಿಗಳನ್ನು ಕೇವಲ ಒಂದು ಜನಾಂಗ ಮತ್ತು ಸಮುದಾಯಕ್ಕೆ ಸೀಮಿತ ಪಡಿಸದೆ, ಅವರ ಆದರ್ಶ, ತತ್ವ ಹಾಗೂ ಪರೀತ್ಯಾಗಳನ್ನು ಪ್ರತಿಯೊಬ್ಬರೂ ತಮ್ಮ ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕು” ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಎಂ ವಿ ಪ್ರಕಾಶ್, ಉಪವಿಭಾಗಾಧಿಕಾರಿ ಶಿವಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೆ ಶ್ರೀನಿವಾಸ್, ನಗರಸಭೆ ಸದಸ್ಯ ಶ್ರೀಧರ್, ಹರೀಶ್, ಶಿವಲಿಂಗು, ಡಿ ದೇವರಾಜು ಅರಸ್ ಹಿಂದುಳಿದ ವರ್ಗಗಳ ವೇದಿಕೆ ಅಧ್ಯಕ್ಷ ಸಂದೇಶ್, ಸಮುದಾಯ ಮುಖಂಡರುಗಳಾದ ಚಂದ್ರನಾಯಕ್, ವೆಂಕಟೇಶ್ ನಾಯಕ್ ಸೇರಿದಂತೆ ಸಂಘ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...