ಮಂಡ್ಯ | ಮೆಡಿಕಲ್ ಕಾಲೇಜು ಒತ್ತುವರಿ ಹಗರಣ; ಹೈಕೋರ್ಟ್ ಎಜಿ ಮಧ್ಯಪ್ರವೇಶಕ್ಕೆ ಕರವೇ ಆಗ್ರಹ

Date:

ಸ್ಥಳೀಯ ಮಂಡ್ಯ ಮೆಡಿಕಲ್ ಕಾಲೇಜಿಗೆ ಸೇರಿದ ಸುಮಾರು 19 ಎಕರೆ ಅಮೂಲ್ಯ ಭೂಮಿಯನ್ನು ತಮಿಳು ಕಾಲೋನಿ ನಿವಾಸಿಗಳು ಸೇರಿದಂತೆ ಹಲವರು ಒತ್ತುವರಿ ಮಾಡಿಕೊಂಡಿದ್ದು, ಈ ಒತ್ತುವರಿಯನ್ನು ತೆರವುಗೊಳಿಸಲು ಹೈಕೋರ್ಟ್ ಅಡ್ವೊಕೇಟ್ ಜನರಲ್ ತುರ್ತಾಗಿ ಮಧ್ಯಪ್ರವೇಶಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡರ ಬಣ) ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಕೊಡುವ ಮೂಲಕ ಒತ್ತಾಯಿಸಿದೆ.

- Advertisement -

ಮೆಡಿಕಲ್ ಕಾಲೇಜಿಗೆ ಸೇರಿದ 19 ಎಕರೆ ಜಾಗದಲ್ಲಿ ಹಲವರು ಒತ್ತುವರಿ ಮಾಡಿಕೊಂಡಿದ್ದು, ಈ ಕುರಿತು ರಾಜ್ಯ ಹೈಕೋರ್ಟ್‌ನ ದ್ವಿಸದಸ್ಯ ಪೀಠವು ಒತ್ತುವರಿ ತೆರವುಗೊಳಿಸುವಂತೆ ಹತ್ತು ವರ್ಷಗಳ ಹಿಂದೆಯೇ ಆದೇಶ ನೀಡಿದೆ (WP 15637). ಆದರೆ, ತಮಿಳು ಕಾಲೋನಿ ನಿವಾಸಿಗಳು ಹೈಕೋರ್ಟ್‌ನ ಏಕಸದಸ್ಯ ಪೀಠದ ಮುಂದೆ ಹೊಸ ಪ್ರಕರಣ ದಾಖಲಿಸಿ (WP 18622/2023), ತೆರವುಗೊಳಿಸದಂತೆ ತಾತ್ಕಾಲಿಕ ತಡೆಯಾಜ್ಞೆ ತಂದಿದ್ದಾರೆ. ಈ ತಡೆಯಾಜ್ಞೆಯನ್ನು ತೆರವುಗೊಳಿಸುವಲ್ಲಿ ಆಡಳಿತ ವ್ಯವಸ್ಥೆಯು ವಿಫಲವಾಗಿದೆ ಎಂದು ವೇದಿಕೆ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

​ಕಾಲೇಜಿನ ಆವರಣದಲ್ಲಿ ಭೂಮಿ ಲಭ್ಯವಿಲ್ಲದ ಕಾರಣ ರಾಷ್ಟ್ರೀಯ ಮೆಡಿಕಲ್ ಕೌನ್ಸಿಲ್ (NMC) ಹೆಚ್ಚುವರಿಯಾಗಿ ನೀಡಬೇಕಿದ್ದ 50 ಮೆಡಿಕಲ್ ಸೀಟುಗಳನ್ನು ನಿರಾಕರಿಸಿದೆ. ಒತ್ತುವರಿಯಿಂದಾಗಿ ಮೆಡಿಕಲ್ ಕಾಲೇಜಿನ ಶೈಕ್ಷಣಿಕ ವಾತಾವರಣವು ದಿನೇ ದಿನೇ ಹದಗೆಡುತ್ತಿದೆ.

ಇದನ್ನೂ ಓದಿ: ಕೆ.ಆರ್.ಪೇಟೆ | ₹26.36 ಲಕ್ಷ ಹಣಕಾಸು ಅಕ್ರಮ; ಮಂದಗೆರೆ ಪಿಡಿಒ ಅಮಾನತು

ವ್ಯವಸ್ಥಿತವಾಗಿ ಹೋರಾಟ ನಡೆಸಿದರೆ ಮಾತ್ರ ಈ ಅಮೂಲ್ಯ ಭೂಮಿಯನ್ನು ಕಾಲೇಜಿನ ಶ್ರೇಯೋಭಿವೃದ್ಧಿಗಾಗಿ ಉಳಿಸಿಕೊಳ್ಳಲು ಸಾಧ್ಯವಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಈ ಕೂಡಲೇ ಅಡ್ವೊಕೇಟ್ ಜನರಲ್ ಅವರು ನ್ಯಾಯಾಲಯದಲ್ಲಿ ಮಧ್ಯಪ್ರವೇಶಿಸಿ ತಡೆಯಾಜ್ಞೆ ತೆರವುಗೊಳಿಸಲು ಕ್ರಮ ವಹಿಸಬೇಕು ಎಂದು ಕರವೇ ಜಿಲ್ಲಾಧ್ಯಕ್ಷ ಕೆ ಬಿ ಜಯರಾಮು ಹಾಗೂ ಪದಾಧಿಕಾರಿಗಳು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚಲುವರಾಯಸ್ವಾಮಿಗೆ ಮನವಿ ಸಲ್ಲಿಸಿದ್ದಾರೆ.

ಈ ಸಂದರ್ಭಗಳಲ್ಲಿ ವೇದಿಕೆಯ ಪದಾಧಿಕಾರಿಗಳಾದ ಎನ್ ರಾಜೇಂದ್ರ, ಗೋವಿಂದೇಗೌಡ, ಪುನೀತ್ ಬಿ ಸಿ, ವೆಂಕಟೇಗೌಡ, ಸಿ ಮುದ್ದೇಗೌಡ, ಸೋಮಶೇಖರ್ ಇನ್ನೂ ಮುಂತಾದವರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...

ಸ್ವಚ್ಛ ಮೈಸೂರು ನಿರ್ಮಾಣಕ್ಕೆ ನ್ಯಾಯಾಂಗ-ಪಾಲಿಕೆ ಸಾಥ್

ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಸುವ ಉದ್ದೇಶದಿಂದ ನ್ಯಾಯಾಂಗ ಇಲಾಖೆ...