ಮಂಡ್ಯ | ಡೆತ್‌ನೋಟ್ ಬರೆದು ಮನೆಬಿಟ್ಟಿದ್ದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಪತ್ತೆ

Date:

“ಮನೆಯಲ್ಲಿ ತನ್ನ ಬಗ್ಗೆ ಅನುಮಾನಗಳು ಇದೆ. ಹಾಗಾಗಿ ನನಗೆ ಬದುಕಲು ಮನಸ್ಸಿಲ್ಲ. ನಾನು ಸಾಯಲು ಹೊರಟಿದ್ದೇನೆ” ಎಂದು ಪತ್ರ ಬರೆದಿಟ್ಟು, ಮನೆಯಿಂದ ನಾಪತ್ತೆಯಾಗಿದ್ದ ಮಂಡ್ಯ ಜಿಲ್ಲೆಯ ಶಾಲಾ ವಿದ್ಯಾರ್ಥಿನಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ.

- Advertisement -

ಮಂಡ್ಯ ಜಿಲ್ಲೆಯ ಲಿಖಿತ ಪಿ ಗೌಡ(13) ಎಂಬ ವಿದ್ಯಾರ್ಥಿನಿ ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿದ್ಯಾರ್ಥಿನಿ ಲಿಖಿತಾ ಬೆಂಗಳೂರಿನ ಕೇಂಗೇರಿ ಪ್ರದೇಶದ ವ್ಯಾಪ್ತಿಯಲ್ಲಿ ಪತ್ತೆಯಾಗಿದ್ದು, ಆಕೆ ಸುರಕ್ಷಿತವಾಗಿದ್ದಾಳೆ. ಮಂಡ್ಯಕ್ಕೆ ಕರೆತರಲಾಗಿದೆ ಎಂದು ಮಂಡ್ಯ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.

ಮಂಡ್ಯ ನಗರದ ಹೊಸಳ್ಳಿಯಿಂದ ಲಿಖಿತಾ ನಾಪತ್ತೆಯಾಗಿರುವ ಬಗ್ಗೆ ಮಂಡ್ಯ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಷಕರಾದ ಪ್ರಕಾಶ್ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಬಾಲಕಿಯ ಪತ್ತೆಗಾಗಿ ಮಂಡ್ಯ ಪೊಲೀಸರು ಮೂರು ತಂಡಗಳನ್ನು ರಚಿಸಿ ಹುಡುಕಾಟ ನಡೆಸಿದ್ದರು.

ಆಕೆಯ ವಿವರಗಳನ್ನು ಎಲ್ಲ ಪೊಲೀಸ್ ಠಾಣೆಗಳಿಗೆ ಕಳುಹಿಸಲಾಗಿತ್ತು.‌ ಪೊಲೀಸರು ಆಕೆಯ ಪತ್ತೆ ನಡೆಸುತ್ತಿರುವಾಗಲೇ ಕೆಂಗೇರಿ ರೈಲ್ವೆ ಸ್ಟೇಷನ್ ಸಮೀಪ ಆಟೋ ಚಾಲಕರೋರ್ವರಿಗೆ ಪತ್ತೆಯಾಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಬಾಲಕಿಯ ಫೋಟೊ ಹಾಗೂ ವಿಡಿಯೋ ಗಮನಿಸಿದ್ದ ರಿಕ್ಷಾ ಚಾಲಕ, ಬಾಲಕಿ ಪತ್ತೆಯಾಗಿರುವ ವಿಚಾರವನ್ನು ಕೆಂಗೇರಿ ಪೊಲೀಸರಿಗೆ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

ಪತ್ರದ ಮೂಲಕ ತನ್ನ ನೋವು ತಿಳಿಸಿದ್ದ ಬಾಲಕಿ

ತಾನು ಸಾಯುವುದಾಗಿ ಪತ್ರ ಬರೆದಿದ್ದ ಬಾಲಕಿ, ಪತ್ರದಲ್ಲಿ ತಾನು ಮನೆಯಲ್ಲಿ ಅನುಭವಿಸುತ್ತಿರುವ ನೋವನ್ನು ಬರೆದಿಟ್ಟಿದ್ದಾಳೆ.

“ನನ್ನ ಈ ನಿರ್ಧಾರಕ್ಕೆ ಅನುಮಾನ ಕಾರಣ. ನನ್ನ ನೋವು ಕೇಳುವವರು ಯಾರೂ ಇಲ್ಲ” ಎಂದು ಪೋಷಕರಿಗೆ ತಿಳಿಸಿದ್ದಾಳೆ. ಬಾಲಕಿ ಬರೆದಿರುವ ಪತ್ರದ ಪ್ರತಿ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿದ್ದು, “ಮಂಡ್ಯದಲ್ಲಿ ಮನೆ ಬಿಟ್ಟು ಹೋಗಿ ದುಡುಕಿನ ನಿರ್ಧಾರ ಮಾಡಿದ್ದ ಈ ಪುಟಾಣಿ ಹೆಣ್ಣು ಮಗಳು ವಾಪಾಸ್ ಸಿಕ್ಕಿ ತಮ್ಮ ತಂದೆ ತಾಯಿಯ ಮಡಿಲು ಸೇರಿದ್ದಾಳೆ. ದಯವಿಟ್ಟು ಪೋಷಕರು ಮಕ್ಕಳ ಮೇಲೆ ಒತ್ತಡ ಹಾಕಬೇಡಿ. ಮಕ್ಕಳ ಬೇಕು- ಬೇಡಗಳಿಗೂ ಪ್ರೀತಿಯಿಂದ ಸ್ಪಂದಿಸಿ. ಬಹಳ ಕಷ್ಟಪಟ್ಟು ಬೆಳೆಸಿರುತ್ತೀರಿ. ಎಳೆಯ ವಯಸ್ಸಿನ ಮಕ್ಕಳು ದುಡುಕಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇರುತ್ತದೆ. ಹಾಗಾಗಿ, ಪೋಷಕರು ಮಕ್ಕಳ ಮನಸ್ಸನ್ನು ಅರ್ಥ ಮಾಡಿಕೊಳ್ಳಬೇಕು” ಎಂದು ಹಲವಾರು ಮಂದಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...