ಮಂಡ್ಯ | 5 ತಿಂಗಳಲ್ಲಿ 3ನೇ ಬಾರಿ ವಿದೇಶ ಪ್ರವಾಸ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ ವಿರುದ್ಧ ಆಕ್ರೋಶ

Date:

ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಬರದ ನಡುವೆಯೂ ವಿದೇಶ ಪ್ರವಾಸ ಕೈಗೊಂಡಿದ್ದಾರೆ. ಗೆದ್ದ 5 ತಿಂಗಳಲ್ಲಿ ಮೂರನೇ ಬಾರಿ ಅಮೆರಿಕಕ್ಕೆ ಹಾರಿದ್ದು, ಕ್ಷೇತ್ರದ ಜನರ ಸಮಸ್ಯೆ ಕೇಳುವವರಿಲ್ಲದಂತಾಗಿದೆ ಎಂದು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಅವರು ಅಮೆರಿಕಾದಲ್ಲಿನ ತಮ್ಮ ಕಂಪನಿ ಮಾರಿ ಹುಟ್ಟೂರಲ್ಲೇ ಇರುವುದಾಗಿ ಚುನಾವಣೆ ವೇಳೆ ಭರವಸೆ ನೀಡಿದ್ದರು. ಈ ಹಿಂದೆ ಹೋಗಿ ವಾಪಸ್ ಬಂದ ಬಳಿಕ ಕ್ಷೇತ್ರದ ಜನರ ಬಳಿ ಕ್ಷಮೆಯಾಚಿಸಿ ಮತ್ತೆ ವಿದೇಶಕ್ಕೆ ಹೋಗಲ್ಲ‌ ಎಂದಿದ್ದರು. ಆದರೆ ಮತ್ತೆ ಕೆಲವೇ ದಿನಗಳಲ್ಲಿ ಅಮೆರಿಕಾಕ್ಕೆ ತೆರಳಿದ್ದಾರೆಂಬ ಆರೋಪ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಕಳೆದ ಆಗಸ್ಟ್‌ ತಿಂಗಳಲ್ಲೂ ವಿದೇಶಕ್ಕೆ ತೆರಳಿ ಸ್ವಾತಂತ್ರ್ಯ ದಿನಾಚರಣೆಗೆ ಗೈರಾಗಿದ್ದರು. ಶಾಸಕರ ಅನುಪಸ್ಥಿತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆದಿತ್ತು. ಈಗ ಮತ್ತೆ ಒಂದು ವಾರದ ಹಿಂದೆ ಅಮೆರಿಕಾಕ್ಕೆ ಹೋಗಿರುವ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕನ್ನಡ ರಾಜ್ಯೋತ್ಸವಕ್ಕೂ ಗೈರಾಗಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಕಾರವಾರ | ಶೈಕ್ಷಣಿಕ ಸಹಾಯಧ ಬಿಡುಗಡೆಗೆ ಒತ್ತಾಯಿಸಿ ಮಕ್ಕಳ ಪತ್ರ

“ಕಾವೇರಿ ಸಮಸ್ಯೆ, ಬರ, ವಿದ್ಯುತ್‌ ಸಮಸ್ಯೆ ಸೇರಿದಂತೆ ರೈತರು ಸಾಲು ಸಾಲು ಸಮಸ್ಯೆಗಳನ್ನು  ಎದುರಿಸುತ್ತಿದ್ದರೂ ಶಾಸಕ ದರ್ಶನ್ ಪುಟ್ಟಣ್ಣಯ್ಯ ಮಾತ್ರ ಅವಕ್ಕೂ ತಮಗೂ ಸಂಬಂಧವಿಲ್ಲದಂತೆ ತಿರುಗುತ್ತಿದ್ದಾರೆ. ಒಮ್ಮೆ ವಿದೇಶಕ್ಕೆ ಹೋದರೆ ತಿಂಗಳುಗಟ್ಟಲೆ ಕ್ಷೇತ್ರಕ್ಕೆ ಬರುವುದಿಲ್ಲ. ಇಲ್ಲೇ ಇದ್ದು ಜನರ ಸಮಸ್ಯೆಗೆ ಸ್ಪಂದಿಸಲು ಅವರನ್ನು ಗೆಲ್ಲಿಸಿದ್ದೇವೆ. ಆದರೆ, ವೈಯಕ್ತಿಕ ಕಾರಣಗಳನ್ನು ನೀಡಿ ಶಾಸಕರು ಪದೇ ಪದೆ ವಿದೇಶಕ್ಕೆ ಹೋಗುತ್ತಿದ್ದಾರೆ. ಸಮಸ್ಯೆಗಳನ್ನು ಯಾರ ಬಳಿಯೂ ಹೇಳಿಕೊಳ್ಳಲಾಗದೆ ರೈತರು ಕಂಗಾಲಾಗಿದ್ದಾರೆ‌. ಶಾಸಕರು ವಿದೇಶ ಮರೆತು ಕ್ಷೇತ್ರದಲ್ಲಿ ಉಳಿದುಕೊಂಡು ಜನಪರ ಕೆಲಸಗಳನ್ನು ಮಾಡಬೇಕು” ಎಂದು ಕ್ಷೇತ್ರದ ಜನರು ಪಟ್ಟುಹಿಡಿದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...