ಮಂಡ್ಯ | ಮೈಶುಗರ್ ಭ್ರಷ್ಟಾಚಾರ; ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ ರೈತ ಸಂಘ

Date:

ಮಂಡ್ಯದ ಸಂಜಯ ವೃತ್ತದಲ್ಲಿ ಶನಿವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ, ಮೈಶುಗರ್ ಕಾರ್ಖಾನೆಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಪ್ರತಿಭಟನೆ ನಡೆಸಿದರು.

- Advertisement -

ಕಬ್ಬಿನ ಬಾಕಿ ಹಣ ₹1.40 ಕೋಟಿ ರೂಪಾಯಿಯನ್ನು ರೈತರಿಗೆ ನೀಡಬೇಕು. ಈಗಾಗಲೇ ಕಾರ್ಖಾನೆಯಲ್ಲಿ ಕಬ್ಬು ಅರೆಯುವುದು ನಿಲ್ಲಿಸಲಾಗಿದೆ. ಕೂಡಲೇ ಸ್ವಚ್ಛತೆ ಹಾಗೂ ದುರಸ್ಥಿ ಕಾರ್ಯ ನಡೆಸಬೇಕು, ಇದುವರೆಗೆ ಮಾಡದೆ ಇರುವುದು ಸರಿಯಲ್ಲ, ಕೂಡಲೇ ಕ್ರಮ ವಹಿಸಿ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಭ್ರಷ್ಟಾಚಾರ ಸಂಬಂಧ ತನಿಖೆಗೆ ನೇಮಕವಾಗಿರುವ ಸಮಿತಿಯಲ್ಲಿ ಜಿಲ್ಲೆಯಾದ್ಯಂತ ಒಬ್ಬರೇ ಒಬ್ಬರು ರೈತರು ಇಲ್ಲದಿರುವುದು ಶೋಚನಿಯ. ಭ್ರಷ್ಟಾಚಾರದ ಪ್ರಮುಖ ಆರೋಪಿ ಮೈಶುಗರ್ ಕಾರ್ಖಾನೆ ಅಧ್ಯಕ್ಷ ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ರನ್ನು
ಪದಚ್ಯುತಿಗೊಳಿಸದೆ ನಿಸ್ಪಕ್ಷಪಾತ ತನಿಖೆ ನಡೆಸಲು ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭ್ರಷ್ಟಾಚಾರದಿಂದಾಗಿ ಕಾರ್ಖಾನೆ ನಷ್ಟದ ಸುಳಿಯಲ್ಲಿದೆ, ಭ್ರಷ್ಟಾಚಾರ ನಡೆಸಿದವರ ವಿರುದ್ಧ ತನಿಖೆ ಕೈಗೊಳ್ಳಲು ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ನೇತೃತ್ವದ ಉನ್ನತ ಮಟ್ಟದ ತನಿಖಾ ಸಮಿತಿ ರಚಿಸಬೇಕು. ಹಿಂದಿನ ಅಧ್ಯಕ್ಷ ನಾಗರಾಜಪ್ಪ ಅವರ ಆಸ್ತಿ ಮುಟ್ಟುಗೋಲಿಗೆ ಹೈಕೋರ್ಟ್ ಆದೇಶ ನೀಡಿದ್ದರು ಇದುವರೆಗೆ ಸರ್ಕಾರ ಆದೇಶ ಹೊರಡಿಸಿಲ್ಲ ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಹೆಣ್ಣುಮಕ್ಕಳ ಸುರಕ್ಷತೆ, ಹಕ್ಕು, ಆಶಯಗಳಿಗೆ ‘ಅಪ್ತಗೆಳತಿ’ ಪೂರಕ: ಶಾಸಕ ಎ ಆರ್ ಕೃಷ್ಣಮೂರ್ತಿ

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಸುನಂದಾ ಜಯರಾಮ್, ಜಿಲ್ಲಾಧ್ಯಕ್ಷ ಇಂಡವಾಳು ಚಂದ್ರಶೇಖರ್, ಬನ್ನೂರು ನಾರಾಯಣ, ಕೆ. ಬೋರಯ್ಯ, ಬೂದನೂರು ಪುಟ್ಟಸ್ವಾಮಿ, ಕೀಳಘಟ್ಟ ನಂಜುಂಡಯ್ಯ, ಎಸ್. ಕೆ. ರಾಜುಗೌಡ, ರಾಜೇಂದ್ರ, ಮಂಜೇಶ್ ಗೌಡ, ಎಂ. ಬಿ. ನಾಗಣ್ಣಗೌಡ, ಎಂ. ಎನ್. ಚಂದ್ರು, ಸಾತನೂರು ವೇಣುಗೋಪಾಲ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ, SIR ನಿಲ್ಲಿಸಿ; ಸಿಪಿಐಎಂ-ಸಿಪಿಐ ಪ್ರತಿಭಟನೆ 

ತಪ್ಪಾಗಿ ಹೊರಗಿಡಲಾದವರ ಮತದಾನ ಹಕ್ಕುಗಳನ್ನು ಮರುಸ್ಥಾಪಿಸಿ. ಭಾರತ ಚುನಾವಣಾ ಆಯೋಗದ ವಿಶ್ವಾಸಾರ್ಹತೆಯನ್ನು...

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...