ಮಂಡ್ಯ | ಚುನಾವಣೆಯಲ್ಲಿ ಕೊಟ್ಟ ಹಣ ಹಂಚಿಲ್ಲದವರು ವಾಪಸ್ ಕೊಡಿ: ನಾರಾಯಣಗೌಡ

Date:

ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬಿಜೆಪಿ ಆತ್ಮಾವಲೋಕನ ಸಭೆ ನಡೆಸಿದ್ದು, ತನ್ನ ಸೋಲಿಗೆ ಕಾರಣಗಳೇಂದು ಚರ್ಚಿಸಿದೆ. ಇಂತದ್ಧೇ ಚರ್ಚೆಯಲ್ಲಿ ಮಾತನಾಡಿರುವ ಮಾಜಿ ಸಚಿವ ಕೆ.ಸಿ ನಾರಾಯಣಗೌಡ, “ನಾನು ಕೊಟ್ಟಿದ್ದ ಹಣವನ್ನು ಸರಿಯಾಗಿ ಹಂಚಿಕೆ ಮಾಡಿಲ್ಲ. ಹಂಚಿಕೆಯಾಗದ ಹಣ ಯಾರ ಬಳಿ ಇದೆಯೋ, ಅವರು ಅದನ್ನು ಹಿಂದಿರುಗಿಸಿ” ಎಂದು ಸಭೆಯಲ್ಲಿ ಬಹಿರಂಗವಾಗಿಯೇ ಹೇಳಿದ್ದಾರೆ. ಆ ಮೂಲಕ ತಾವು ಮತದಾರರಿಗೆ ಆಮಿಷವೊಡ್ಡಿದ್ದಾಗಿ ಒಪ್ಪಿಕೊಂಡಿದ್ದಾರೆ.

ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ನಾರಾಯಣಗೌಡ ಸ್ಪರ್ಧಿಸಿದ್ದ ಹೀನಾಯವಾಗಿ ಸೋಲುಂಡಿದ್ದರು. ಸೋಲಿನ ಬಳಿಕ, ತಮ್ಮ ಸೋಲಿಗೆ ಕಾರಣಗಳನ್ನು ಚರ್ಚಿಸಲು ಕೆ.ಆರ್ ಪೇಟೆಯಲ್ಲಿ ಆತ್ಮಾವಲೋಕನ ಸಭೆ ಕರೆಸಿದ್ದರು.

ಸಭೆಯಲ್ಲಿ ಮಾತನಾಡಿದ ಅವರು, “ಸರಿಯಾಗಿ ಹಣ ಹಂಚಿಕೆಯಾದ ಕಾರಣ ಸೋತಿದ್ದೇವೆ. ಚುನಾವಣೆ ವೇಳೆ ನಾನು ಕೊಟ್ಟಿದ್ದ ಹಣವನ್ನು ಕೆಲವರು ಮತದಾರರಿಗೆ ಹಂಚಿಕೆ ಮಾಡಿಲ್ಲ. ಅಂತಹವರು ಹಣ ಇಟ್ಟುಕೊಂಡಿದ್ದರೆ ನಮ್ಮ ಟ್ರಸ್ಟ್​​​ಗೆ ಕೊಟ್ಟುಬಿಡಿ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಚುನಾವಣೆಯಲ್ಲಿ ಸೋತಿದ್ದೇನೆಂದು ಕ್ಷೇತ್ರಬಿಟ್ಟು ಹೋಗುವವನು ನಾನಲ್ಲ. ನಾನು ಎಲ್ಲಿಗೂ ಓಡಿ ಹೋಗಲ್ಲ. ಇಲ್ಲಿಯೇ ಇರುತ್ತೇನೆ. ನಾನು ಸತ್ತರೂ ಇಲ್ಲೇ ಮಣ್ಣಾಗುತ್ತೇನೆ” ಎಂದು ಅವರು ಹೇಳಿದ್ದಾರೆ.

“ರಾಜಕೀಯ ಜೀವನದಲ್ಲಿ ಸೋಲು-ಗೆಲುವು ಎರಡನ್ನೂ ಸಮಾನವಾಗಿ ಕಂಡಿದ್ದೇನೆ. ಸಚಿವನಾಗಿಯೂ ಕೆಲಸ ಮಾಡಿದ್ದೇನೆ. ನಾನು ಮಾಡಿದ ಕೆಲಸಗಳ ಬಗ್ಗೆ ಆತ್ಮತೃಪ್ತಿಯಿದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಎಫ್‌ಪಿಒಗಳೊಂದಿಗೆ ಸೃಜನಾತ್ಮಕ ಹೆಜ್ಜೆಯನ್ನಿಡಲು ರೈತರಿಗೆ ಕರೆ

ಶೋಷಣೆ ಮುಕ್ತ ಕೃಷಿ ಪರಿಸರ ಹಾಗೂ ಸುಸ್ಥಿರ ಆದಾಯದ ಮೂಲಗಳನ್ನು ಸೃಜಿಸಲು...

ಉಡುಪಿ | ನೆರೆ ಪೀಡಿತ ಪ್ರದೇಶಗಳಿಗೆ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ

ಮಳೆ, ಪ್ರವಾಹದಿಂದ ಯಾವುದೇ ಅನಾಹುತ ಸಂಭವಿಸದಂತೆ ಉಡುಪಿ ಜಿಲ್ಲಾಡಳಿತ ದಿನದ 24...

ರಾಯಚೂರು | ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ ಪ್ರಗತಿಪರ ಸಂಘಟನೆಗಳ ಒತ್ತಾಯ

ಸರ್ಕಾರ, ನಿರ್ಲಕ್ಷ್ಯ ಧೋರಣೆ ಬಿಟ್ಟು ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ...

ಕಲಬುರಗಿ | ಸಿಮೆಂಟ್‌ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು; 2 ತಿಂಗಳಲ್ಲಿ 4ನೇ ದುರಂತ

ಸಿಮೆಂಟ್‌ ಕಾರ್ಖಾನೆಯಲ್ಲಿ ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ,...