ಮಂಡ್ಯ | ಕೆಆರ್‌ಎಸ್ ಅಣೆಕಟ್ಟೆಯ ಹಳೆಯ ಕ್ರಸ್ಟ್‌ಗೇಟ್‌ ಕಡಿಮೆ ಬೆಲೆಗೆ ಮಾರಾಟ: ರೈತ ಮುಖಂಡರ ಆರೋಪ

Date:

Advertisements

ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ನಿರ್ಮಾಣಗೊಂಡ ಕನ್ನಂಬಾಡಿ ಅಣೆಕಟ್ಟೆಯ ಐತಿಹಾಸಿಕ ಕ್ರಸ್ಟ್‌ಗೇಟ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಅಣೆಕಟ್ಟು ನಿರ್ಮಾಣ ಆಗುವಾಗ 150 ಕ್ರೆಸ್ಟ್ ಗೇಟ್‌ಗಳನ್ನು ಅಳವಡಿಸಲಾಗಿತ್ತು. ಇತ್ತೀಚೆಗೆ ಇವುಗಳನ್ನು ಬದಲಾವಣೆ ಮಾಡಲಾಗಿದೆ. ಹಳೆಯ ಗೇಟ್‌ಗಳನ್ನು ಮಾಣಿಕೇಶ್ವರಿ ಸಂಸ್ಥೆಗೆ ಕೆ.ಜಿ.ಗೆ ₹6ರಂತೆ ಮಾರಾಟ ಮಾಡಲಾಗಿದೆ ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್. ಕೆಂಪೂಗೌಡ ಆರೋಪಿಸಿದ್ದಾರೆ.

ಈ ದಿನ.ಕಾಮ್ ಜೊತೆಗೆ ಮಾತನಾಡಿದ ಅವರು, “ಇಂತಹ ಐತಿಹಾಸಿಕ ಮಹತ್ವವುಳ್ಳ ಗೇಟ್‌ಗಳನ್ನು ಇಷ್ಟು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂಬುದು ದುಃಖದ ಸಂಗತಿಯಾಗಿದೆ. 150 ಗೇಟ್‌ಗಳ ಒಟ್ಟು ತೂಕ 608 ಟನ್ ಇದೆ. ಈ ಗೇಟ್‌ಗಳನ್ನು ಕೇವಲ ₹6 ಕಿಲೋ ದರದಲ್ಲಿ ಮಾರಾಟ ಮಾಡಲಾಗುತ್ತಿದೆ‌. ಇದು ಅತ್ಯಂತ ಕಡಿಮೆ ದರ. ಇದಕ್ಕೆ ಮಾರುಕಟ್ಟೆಯಲ್ಲಿ ಹಳೆಯ ಕಬ್ಬಿಣದ ದರವೇ ಸುಮಾರು ₹40 ಕೆ.ಜಿ. ಇದೆ. ಈ ಮಾರಾಟದಿಂದ ಸರ್ಕಾರಕ್ಕೆ ದೊಡ್ಡ ನಷ್ಟವಾಗುತ್ತದೆ” ಎಂದು ಅಸಹನೆ ವ್ಯಕ್ತಪಡಿಸಿದರು.

“ಈ ಐತಿಹಾಸಿಕ ಕ್ರಸ್ಟ್ ಗೇಟ್‌ಗಳನ್ನು ಮ್ಯೂಸಿಯಂನಲ್ಲಿ ಇರಿಸಿ ಮುಂದಿನ ಪೀಳಿಗೆಗೆ ಪರಿಚಯ ಮಾಡಿಕೊಡಬೇಕು. ಕನ್ನಂಬಾಡಿ ಬೃಂದಾವನದಲ್ಲಿ ಸಾಕಷ್ಟು ಜಾಗ ಲಭ್ಯವಿದೆ. ಅಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಬಳಸಿದ ಹಳೆಯ ವಸ್ತುಗಳನ್ನು ಪ್ರದರ್ಶನಕ್ಕಾಗಿ ಇರಿಸಬೇಕು. ಇದು ನಮ್ಮ ಇತಿಹಾಸವನ್ನು ಸಂರಕ್ಷಿಸಲು ಹಾಗೂ ನಾವು ಶತಮಾನದಿಂದ ಹೆಮ್ಮೆಯಿಂದ ಬಳಸಿಕೊಂಡು ಬಂದಿರುವ ಅಣೆಕಟ್ಟಿನ ಮಹತ್ವವನ್ನು ಗುರುತಿಸಲು ಸರಿಯಾದ ನಡೆಯಾಗಿದೆ” ಎಂದು ಅಭಿಪ್ರಾಯಿಸಿದರು.

Advertisements

ಹೀಗಾಗಿ, ಗೇಟ್‌ಗಳನ್ನು ಮಾರಾಟ ಮಾಡಬೇಕಾದ ಅಗತ್ಯತೆ ಏನು ಎಂಬುದಕ್ಕೆ ನೀರಾವರಿ ಇಲಾಖೆಯ ಅಧಿಕಾರಿಗಳು ಸ್ಪಷ್ಟೀಕರಣ ನೀಡಬೇಕೆಂದು ಅವರು ಒತ್ತಾಯಿಸಿದರು.

“ಈ ಗೇಟ್‌ಗಳ ಬದಲಾವಣೆಗೆ ಸಂಬಂಧಿಸಿದ ಎಲ್ಲ ಮಾಹಿತಿಗಳನ್ನು ಸರಕಾರವು ಬಹಿರಂಗ ಮಾಡಬೇಕು ಮತ್ತು ಈ ಮಾರಾಟವನ್ನು ತಕ್ಷಣವೇ ನಿಲ್ಲಿಸಬೇಕು. ನಮ್ಮ ಮನವಿಗೆ ಸ್ಪಂದಿಸದಿದ್ದರೆ, ನಾವು ಹೋರಾಟವನ್ನು ತೀವ್ರಗೊಳಿಸುತ್ತೇವೆ” ಎಂದು ಎಚ್ಚರಿಸಿದರು.

ಇದಕ್ಕೆ ಸಂಬಂಧಪಟ್ಟಂತೆ ಜಲಸಂಪನ್ಮೂಲ ಇಲಾಖೆ ಹಾಗೂ ಸರ್ಕಾರಕ್ಕೆ ಪತ್ರ ಬರೆಯಲಾಗಿದ್ದು, ಗೇಟ್‌ಗಳನ್ನು ಮಾರಾಟ ಮಾಡದಂತೆ ಮನವಿ ಸಲ್ಲಿಸಲಾಗಿದೆ ಎಂದರು.

ಇದನ್ನು ಓದಿದ್ದೀರಾ? ಮಂಡ್ಯ | ಯುವಜನರಿಗೆ ಗಾಂಧಿ ಚಿಂತನೆಯನ್ನು ತಿಳಿಸುವ ಅಗತ್ಯವಿದೆ: ಡಾ. ಬಿ.ಸಿ. ಬಸವರಾಜು

ಕೆಆರ್‌ಎಸ್‌ನ ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಇಂಜಿನಿಯರ್ ಜಯಂತ್‌ರಿಗೆ ಈದಿನದಿಂದ ಕರೆ ಮಾಡಿ ಇದರ ಬಗ್ಗೆ ಮಾತಾಡಿಸಿದಾಗ, “ಹಳೆಯ ಕ್ರಸ್ಟ್‌ ಗೇಟನ್ನು ಮಾರಾಟ ಮಾಡುವ ಯೋಜನೆ ಇಲ್ಲ. ಹಳೆಯ ಗೇಟುಗಳನ್ನು ನಮ್ಮ ಇಲಾಖೆಯ ಸುಪರ್ದಿಯಲ್ಲಿ ಸಂರಕ್ಷಿಸಿ ಇಡಲಾಗಿದೆ. ರೈತರು ಆತಂಕ ಪಡುವ ಅಗತ್ಯ ಇಲ್ಲ” ಎಂದು ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X