ಮಂಡ್ಯ | ಶಿಕ್ಷಣದಿಂದ ಮಾತ್ರ ದೇಶದಲ್ಲಿ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯ: ಎನ್ ಚಲುವರಾಯಸ್ವಾಮಿ

Date:

ದೇಶದ ಭದ್ರತೆ ಮತ್ತು ಸಮಾನತೆಯನ್ನು ಕಾಪಾಡುವ ನಿಟ್ಟಿನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಭಾರತಕ್ಕೆ ಬೃಹತ್ ಲಿಖಿತ ಸಂವಿಧಾನವನ್ನು ನೀಡಿದ್ದು, ವಿಶ್ವವೇ ಅದನ್ನು ಒಪ್ಪಿಕೊಂಡಿರುವುದು ಹೆಮ್ಮೆಯ ಸಂಗತಿ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.

- Advertisement -

ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಸಂವಿಧಾನವು ಎಲ್ಲಾ ವರ್ಗಗಳಿಗೆ ಸಮಾನತೆ ಮತ್ತು ಸ್ವಾತಂತ್ರ್ಯದ ಹಕ್ಕು ನೀಡಿದ್ದು, ಅದು ಅಂಬೇಡ್ಕರ್ ಅವರ ಮಹತ್ವದ ಕೊಡುಗೆ ಎಂದು ಹೇಳಿದರು. ಶಿಕ್ಷಣವು ವ್ಯಕ್ತಿಯ ಬದುಕಿಗೆ ದಾರಿದೀಪವಾಗಿದ್ದು, ಸಮಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಪ್ರಮುಖ ಸಾಧನ ಎಂದರು.

ಶಿಕ್ಷಣವು ಕೇವಲ ಉದ್ಯೋಗಕ್ಕೆ ಸೀಮಿತವಾಗದೆ, ದೇಶದ ಇತಿಹಾಸ ಮತ್ತು ಸಂವಿಧಾನದ ಅರಿವು ಮೂಡಿಸಬೇಕು. ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ವಿವಿಧ ಯೋಜನೆಗಳನ್ನು ಜಾರಿಗೆ ತಂದಿದ್ದು, ಐದು ಗ್ಯಾರಂಟಿ ಯೋಜನೆಗಳಿಂದ ಶೇ.70ರಷ್ಟು ಜನರಿಗೆ ಪ್ರಯೋಜನವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಶಾಸಕ ಪಿ. ರವಿಕುಮಾರ್ ಗಣಿಗ ಮಾತನಾಡಿ, ಅಂಬೇಡ್ಕರ್ ಅವರು ಕೇವಲ ದಲಿತ ಸಮುದಾಯದ ನಾಯಕರಲ್ಲ, ವಿಶ್ವಕ್ಕೆ ದಾರಿದೀಪವಾದ ಮಹಾನ್ ಚಿಂತಕರಾಗಿದ್ದಾರೆ. ಇಂದು ಕೆನಡಾ, ಯುರೋಪ್ ಸೇರಿದಂತೆ ವಿಶ್ವದಾದ್ಯಂತ ಅಂಬೇಡ್ಕರ್ ಜಯಂತಿ ಆಚರಿಸಲಾಗುತ್ತಿದೆ ಎಂದರು.

ಸಂವಿಧಾನ ಬದ್ಧವಾಗಿ ದೇಶವನ್ನು ಮುನ್ನಡೆಸಬೇಕು, ಶಾಂತಿ ಮತ್ತು ಸಮಾನತೆಯ ಮೌಲ್ಯಗಳನ್ನು ಹಳ್ಳಿಗಳ ಮಟ್ಟಕ್ಕೂ ತಲುಪಿಸಬೇಕು ಎಂದು ಕರೆ ನೀಡಿದರು. ಜಿಲ್ಲೆಯಲ್ಲಿ ಅಂಬೇಡ್ಕರ್ ಭವನಗಳ ಪೂರ್ಣತೆಗೆ ₹2 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಹೇಳಿದರು.

ಮುಖ್ಯ ಭಾಷಣಕಾರರಾಗಿ ಮಾತನಾಡಿದ ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಹಿರಿಯ ಪ್ರಾಧ್ಯಾಪಕ ಡಾ. ಡಿ. ಆನಂದ್ ಅವರು, ಅಂಬೇಡ್ಕರ್ ಅವರ ಬಹುಮುಖ ವ್ಯಕ್ತಿತ್ವವನ್ನು ಯುವಜನತೆ ಅರ್ಥಮಾಡಿಕೊಳ್ಳಬೇಕು ಎಂದರು. ಹಿಂದೂ ಕೋಡ್ ಬಿಲ್ ಮೂಲಕ ಮಹಿಳೆಯರಿಗೆ ಆಸ್ತಿ ಹಕ್ಕು, ವಿಚ್ಛೇದನ ಮತ್ತು ಸಮಾನ ಹಕ್ಕುಗಳನ್ನು ನೀಡಲು ಅವರು ಹೋರಾಟ ನಡೆಸಿದ ವಿಚಾರವನ್ನು ವಿವರಿಸಿದರು.

ಮಹಿಳಾ ಶಿಕ್ಷಣ, ಸಾಮಾಜಿಕ ನ್ಯಾಯ ಮತ್ತು ಜಾತಿ ವ್ಯವಸ್ಥೆ ವಿರುದ್ಧ ಹೋರಾಟದ ಮೂಲಕ ಅಂಬೇಡ್ಕರ್ ಅವರು ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್. ನಂದಿನಿ ಅವರು ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಏ.15ರಂದು ಮಂಡ್ಯಕ್ಕೆ ಪ್ರಧಾನಿ ಮೋದಿ ಭೇಟಿ; ‘ಭೈರವೈಕ್ಯ’ ಮಂದಿರ ಉದ್ಘಾಟನೆ

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಮೈಸೂರು ಸಕ್ಕರೆ ಕಂಪನಿ ಅಧ್ಯಕ್ಷ ಸಿ.ಡಿ. ಗಂಗಾಧರ್, ಜಿಲ್ಲಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಪಿ. ಪ್ರಕಾಶ್, ಅಪರ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಸೇರಿದಂತೆ ಹಲವು ಗಣ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...