ಮಂಡ್ಯ | ಕೇರಳದ ಓಣಂ ಲಾಟರಿಯಲ್ಲಿ ₹25 ಕೋಟಿ ಗೆದ್ದ ಪಾಂಡವಪುರದ ಬೈಕ್ ಮೆಕ್ಯಾನಿಕ್!

Date:

ಕೇರಳದ ಬಹು ನಿರೀಕ್ಷಿತ ತಿರುವೋಣಂ ಬಂಪರ್ ಲಾಟರಿಯ ಡ್ರಾ ಬುಧವಾರ ಮಧ್ಯಾಹ್ನ ನಡೆದಿದೆ. ಒಟ್ಟಾರೆ 500 ಮೌಲ್ಯದ ಟಿಕೆಟ್​ಗಳಲ್ಲಿ ಅತ್ಯಧಿಕ ಮೊತ್ತದ ಬಹುಮಾನ 25 ಕೋಟಿ ರೂ. ಆಗಿದೆ. ಇನ್ನು ಎರಡನೇ ಬಹುಮಾನದ ರೂಪವಾಗಿ ತಲಾ 20 ಮಂದಿಗೆ 2 ಕೋಟಿ ಬಹುಮಾನ ನೀಡಲಾಗುತ್ತಿದೆ. ಮೂರನೇ ಬಹುಮಾನ ತಲಾ 20 ಮಂದಿಗೆ 50 ಲಕ್ಷ ನಗದು ಬಹುಮಾನವನ್ನು ಹೊಂದಿದೆ.

- Advertisement -

ಇನ್ನು ಈ ಟಿಕೆಟ್​ನ ಬಂಪರ್​ ಮೊತ್ತದ ಬಹುಮಾನವೂ ವಯನಾಡಿನ ಬತ್ತೇರಿಯಲ್ಲಿರುವ ಎನ್‌ಜಿಆರ್ ಲಾಟರಿ ಮಾರಾಟ ಮಾಡಿದ ಟಿಕೆಟ್‌ಗೆ ಬಹುಮಾನ ಬಂದಿದೆ. ಈ ಲಾಟರಿಯನ್ನು ಖರೀದಿಸಿದ್ದ ಕರ್ನಾಟಕದ ಮಂಡ್ಯ ಜಿಲ್ಲೆಯ ಪಾಂಡವಪುರ ವ್ಯಕ್ತಿಗೆ ಒಲಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...
LATTERY
ಅಲ್ತಾಫ್ ಪಾಷಾ ಖರೀದಿಸಿದ್ದ ಲಾಟರಿ

ಮಂಡ್ಯ ಜಿಲ್ಲೆ ಪಾಂಡವಪುರ ಪಟ್ಟಣದ ನಿವಾಸಿಯಾಗಿರುವ ಅಲ್ತಾಫ್ ಪಾಷಾಗೆ ಕೇರಳ‌ದ ಬಂಪರ್ ಲಾಟರಿ ಹೊಡೆದಿದೆ. ವೃತ್ತಿಯಲ್ಲಿ ಬೈಕ್​ ಮೆಕ್ಯಾನಿಕ್ ಆಗಿರುವ ಅಲ್ತಾಫ್​ ಪಾಷಾ, ಲಾಟರಿಯಲ್ಲಿ ಬರೋಬ್ಬರಿ 25 ಕೋಟಿ ರೂಪಾಯಿ ಗೆದ್ದಿದ್ದಾರೆ.

ಇದನ್ನು ಓದಿದ್ದೀರಾ? ಶಿವಮೊಗ್ಗ | ‘ವಡ್ಡರ್ಸೆ ರಘುರಾಮ ಶೆಟ್ಟಿ’ ಪ್ರಶಸ್ತಿ: ಆಯ್ಕೆ ಸಮಿತಿಗೆ ಪತ್ರಕರ್ತ ಎನ್. ರವಿಕುಮಾರ್ ನೇಮಕ

ಇತ್ತೀಚೆಗಷ್ಟೆ ಕೇರಳದಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಹೋಗಿದ್ದಾಗ ₹500 ರೂ ಕೊಟ್ಟು ಲಾಟರಿ ಖರೀದಿ ಮಾಡಿದ್ದರು. ಇನ್ನು ತಾನು ಖರೀದಿ ಮಾಡಿದ ಲಾಟರಿ ಟಿಕೆಟ್‌ಗೆ ಬಹುಮಾನ ಬಂದಿರುವ ವಿಚಾರ ತಿಳಿಯುತ್ತಿದ್ದಂತೆ ಅಲ್ತಾಫ್ ಕೇರಳಕ್ಕೆ ಹೊರಟಿರುವುದಾಗಿ ಅವರ ಕುಟುಂಬಿಕರು ಮಾಹಿತಿ ನೀಡಿದ್ದಾರೆ.

ಇದೀಗ ಕೇರಳಕ್ಕೆ ‌ಪ್ರಯಾಣ ಮಾಡಿದ್ದು, ಲಾಟರಿ ಹಣ ಪಡೆಯುವ ಪ್ರಕ್ರಿಯೆಯನ್ನು ಪೂರೈಸಿ ಹಣವನ್ನು ಪಡೆದುಕೊಳ್ಳಲಿದ್ದಾರೆ. ಎಲ್ಲ ತೆರಿಗೆಗಳನ್ನು ಕಡಿತಗೊಳಿಸಿದ ನಂತರ ಅಲ್ತಾಫ್​ ಪಾಷಾ ಅವರಿಗೆ ₹12.8 ಕೋಟಿ ಸಿಗಲಿದೆ ಎಂದು ತಿಳಿದುಬಂದಿದೆ.

ಕೇರಳದ ಓಣಂ ಹಬ್ಬದ ₹25 ಕೋಟಿ ಮೌಲ್ಯದ ಲಾಟರಿ ಹೊಡೆಯುವ ಈ ಮೂಲಕ, ಬೈಕ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಮಂಡ್ಯದ ಅಲ್ತಾಫ್ ಈಗ, ರಾತ್ರೋರಾತ್ರಿ ಕೋಟ್ಯಧಿಪತಿ ಆಗಿದ್ದಾರೆ.

WhatsApp Image 2024 10 10 at 6.29.55 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...