ಮಂಡ್ಯ | ಆಟೋ ಚಾಲಕನ ಮೇಲೆ ಪೊಲೀಸ್ ಪೇದೆ ದರ್ಪ

Date:

ನಡುರಸ್ತೆಯಲ್ಲೇ ಆಟೋ ಚಾಲಕನೊಬ್ಬನ ಮೇಲೆ ಪೊಲೀಸ್‌ ಕಾನ್ಸ್‌ಟೇಬಲ್‌ ಹಲ್ಲೆ ಮಾಡಿರುವ ಘಟನೆ ಮಂಡ್ಯ ನಗರದಲ್ಲಿ ಮಂಗಳವಾರ ನಡೆದಿದೆ. ಹಲ್ಲೆ ಮಾಡಿದ ಪೇದೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನೆಟ್ಟಿಗರು ಆಗ್ರಹಿಸಿದ್ದಾರೆ.

- Advertisement -

ಘಟನೆಯನ್ನು ಸ್ಥಳೀಯರೊಬ್ಬರು ವಿಡಿಯೋ ಮಾಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಮಂಡ್ಯ ಜಿಲ್ಲಾಸ್ಪತ್ರೆಯ ಎದುರು ಆಟೋ ಚಾಲಕ ಮತ್ತು ಪೊಲೀಸರು ತೆರಳುತ್ತಿದ್ದ ಬೈಕ್‌ ನಡುವೆ ಅಪಘಾತವಾಗಿದೆ. ಪೊಲೀಸ್‌ ಪೇದೆ ರಸ್ತೆಗೆ ಬಿದ್ದು, ಕಾಲಿಗೆ ಸಣ್ಣ ಪೆಟ್ಟಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಸ್ಥಳೀಯರು ಪೇದೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಆಟೋ ಚಾಲಕನಿಗೆ ಹೇಳಿದ್ದಾರೆ. ಅದರಂತೆ ಚಾಲಕ ಪೇದೆಯನ್ನು ಆಸ್ಪತ್ರೆಗೆ ಹೋಗೋಣ ಬನ್ನಿ ಎಂದು ಕರೆದಿದ್ದಾರೆ. ಆತ ಕರೆದಾಗ ಸಿಟ್ಟಿಗೆದ್ದ ಪೇದೆ, ಚಾಲಕನ ಕಪಾಳಕ್ಕೆ ಹೊಡೆದು, ಹೊಟ್ಟೆಗೆ ಮುಷ್ಠಿ ಹಿಡಿದು ಗುದ್ದಿದ್ದಾರೆ

ಮಾತ್ರವಲ್ಲದೆ, ಪೊಲೀಸ್‌ ಠಾಣೆಗೆ ಬರುವಂತೆ ಚಾಲಕನಿಗೆ ಸೂಚಿಸಿದ್ದಾರೆ. ಚಾಲಕ ಆಟೋ ಹತ್ತಿದ ಬಳಿಕ, ಮತ್ತೆ ಹಲ್ಲೆ ಮಾಡಿದ್ದಾರೆ. ಈ ದೃಶ್ಯಗಳು ವಿಡಿಯೋದಲ್ಲಿ ಸೆರೆಯಾಗಿವೆ.

ಚಾಲಕ ಮತ್ತು ಆಟೋವನ್ನು ಠಾಣೆಗೆ ಕರೆದೊಯ್ದಿದ್ದಾರೆ ಎಂದು ವಿಡಿಯೋ ಮಾಡಿದವರು ಮಾಹಿತಿ ನೀಡಿದ್ದಾರೆ.

ವಿಡಿಯೋ ಟ್ವಿಟರ್‌ನಲ್ಲಿ ವೈರಲ್‌ ಅಗಿದ್ದು, ಪೊಲೀಸರ ವಿರುದ್ಧ ಸಾರ್ವಜನಿಕರು ಕಿಡಿಕಾರಿದ್ದಾರೆ. “ಈ ದುರಂಕಾರಕ್ಕೆ ತಕ್ಕ ದಂಡ ಹಾಕ್ಲೆಬೇಕು ಅವರಿಗೆ, ಪೊಲೀಸ್ ಅಂದ್ರೇನು ಸರ್ವಧಿಕಾರಿಗಳ್ಳ, ಹೊಡೆಯೋ ಹಕ್ಕು ಯಾರು ಕೊಟ್ಟಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಟ್ಯಾಗ್‌ ಮಾಡಿರುವ ನೆಟ್ಟಿಗರು, “ಪೇದೆಯ ವಿರುದ್ಧ ತನಿಖೆ ನಡೆಸಿ, ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರ ಮೇಲೆ ಹಲ್ಲೆ ನಡೆಸುವ ಅಧಿಕಾರ ಪೊಲೀಸರಿಗಿಲ್ಲ. ಆತನನ್ನು ಅಮಾನತುಗೊಳಿಸಬೇಕು” ಎಂದು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...