ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದ ಸರ್ಕಾರಿ ಪಾಲಿಟಕ್ನಿಕ್ ಕಾಲೇಜಿನಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಹಾಗೂ ಕಳೆದ ಸಾಲಿನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ವಿದ್ಯಾರ್ಥಿಗಳನ್ನುದ್ದೇಶಿಸಿ ಸಮಾಜ ಸೇವಕ ಆರ್ ಟಿ ಓ ಮಲ್ಲಿಕಾರ್ಜುನ್ ಮಾತನಾಡಿ, “ವಿದ್ಯಾರ್ಥಿಗಳ ಸಮಯ ಅತ್ಯಮೂಲ್ಯವಾದದ್ದು, ಸಮಯ ವ್ಯರ್ಥ ಮಾಡದೆ ಕಲಿಕೆಗೆ ಪ್ರಾಮುಖ್ಯತೆ ನೀಡಬೇಕು. ಪ್ರತಿಯೊಬ್ಬ ವಿದ್ಯಾರ್ಥಿಯು ಸರ್ ಎಂ ವಿ ವಿಶ್ವೇಶ್ವರಯ್ಯನಂಥ ಮಹಾನ್ ನಾಯಕರಾಗಿ ಹೊರ ಹೊಮ್ಮಬೇಕು ಎಂದು ಕಿವಿಮಾತು ಹೇಳಿದರು.
ಇದನ್ನು ಓದಿದ್ದೀರಾ? ಮಂಡ್ಯ | ನೂತನ ಶುದ್ಧ ಕುಡಿಯುವ ನೀರಿನ ಘಟಕ, ಪ್ರಯೋಗಾಲಯ ಕಟ್ಟಡ ಕಾಮಗಾರಿ: ಗುದ್ದಲಿ ಪೂಜೆ
ಇದೇ ವೇಳೆ ಕಳೆದ ಸಾಲಿನಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕರಿಸಿ ಗೌರವಿಸಿ, ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರು, ವಿದ್ಯಾರ್ಥಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ: ರಂಗನಾಥ್ ಮಾಕವಳ್ಳಿ
