ಮಂಡ್ಯ | ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಪ್ರೊ. ಜೆಪಿ, ಡಾ. ಲತಾ, ಸತೀಶ್ ಜವರೇಗೌಡ ಆಯ್ಕೆ

Date:

Advertisements

ಮಂಡ್ಯದ ಕುವೆಂಪು ಕಲಾನಿಕೇತನ ಸಂಸ್ಥೆಯ ವತಿಯಿಂದ ಕನ್ನಡ ನಾಡು-ನುಡಿ, ನೆಲ-ಜಲ, ಸಾಹಿತ್ಯ ಮತ್ತು ಸಂಘಟನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಸಮಾಜ ಸೇವಾ ಮುಖಿಯಾಗಿ ಕಾರ್ಯ ನಿರ್ಹಿಸುತ್ತಿರುವ ಸಾಧಕರಿಗೆ ನೀಡಲಾಗುವ ‘ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್’ ಹೆಸರಿನ ವಿವಿಧ ಪ್ರಶಸ್ತಿಗೆ ನಾಡಿನ ಮೂರು ಮಂದಿ ಗಣ್ಯರು ಆಯ್ಕೆಯಾಗಿದ್ದಾರೆ.

ಮಂಡ್ಯದ ಕರ್ನಾಟಕ ಸಂಘದ ಅಧ್ಯಕ್ಷ, ಕ್ರಿಯಾಶೀಲ ಸಂಘಟಕ, ರಂಗಕರ್ಮಿ ಹಾಗೂ ವಿಶ್ರಾಂತ ಕನ್ನಡ ಪ್ರಾಧ್ಯಾಪಕ ಪ್ರೊ.ಬಿ. ಜಯಪ್ರಕಾಶ್ ಗೌಡ ಅವರನ್ನು ‘ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದ್ದು, ಈ ಪ್ರಶಸ್ತಿಯ ಹತ್ತು ಸಾವಿರ ನಗದು, ಬೆಳ್ಳಿ ಪದಕ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿದೆ.

ಮಂಡ್ಯ

ಅದೇ ರೀತಿ ಸಮಕಾಲೀನ ಕನ್ನಡ ಸಾಹಿತ್ಯ ಸಂದರ್ಭದಲ್ಲಿ ಏಳು ಮಹಾಕಾವ್ಯಗಳನ್ನು ರಚಿಸಿರುವ ಮಂಡ್ಯದ ಸುಪುತ್ರಿಯಾಗಿರುವ ಮೈಸೂರಿನ ನಿವಾಸಿ ಹಿರಿಯ ಕವಯಿತ್ರಿ ಹಾಗೂ ಕಾದಂಬರಿಗಾರ್ತಿ ಡಾ. ಲತಾ ರಾಜಶೇಖರ ಅವರನ್ನು ‘ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾಹಿತ್ಯ ರತ್ನ ಪ್ರಶಸ್ತಿ’ಗೂ ಮತ್ತು ಮಂಡ್ಯ ಜಿಲ್ಲಾ ಯುವ ಬರಹಗಾರರ ಬಳಗದ ಸಂಸ್ಥಾಪಕ ಅಧ್ಯಕ್ಷ ಹಾಗೂ ಯುವ ಸಾಹಿತಿ‌ ಮಂಗಲ ಟಿ. ಸತೀಶ್ ಜವರೇಗೌಡ ಅವರನ್ನು ‘ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾಂಸ್ಕೃತಿಕ ಪ್ರಶಸ್ತಿ’ಗೂ ಆಯ್ಕೆ ಮಾಡಲಾಗಿದೆ.

Advertisements

ಇದನ್ನು ಓದಿದ್ದೀರಾ? ಮಂಗಳೂರು | ಸ್ನೇಹಿತರೊಂದಿಗೆ ಸಮುದ್ರದಲ್ಲಿ ಈಜಲು ಬಂದ ಯುವಕ ನೀರುಪಾಲು

ಅ. 27ರಂದು ಸಂಜೆ 4 ಗಂಟೆಗೆ ಮೈಸೂರು ನಗರದ ಪಾರಂಪರಿಕ ಸಭಾ ಭವನ ಜಗನ್ಮೋಹನ ಅರಮನೆಯಲ್ಲಿ ನಡೆಯಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141ನೇ ಜಯಂತಿ ಮತ್ತು ಸಾಂಸ್ಕೃತಿಕ ಉತ್ಸವದಲ್ಲಿ ಈ ಮೂರು ಮಂದಿ ಸಾಂಸ್ಕೃತಿಕ ಮತ್ತು ಸಾಹಿತ್ಯಕ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕಲಾನಿಕೇತನದ ಅಧ್ಯಕ್ಷ ಕುವೆಂಪು ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X