ಮಂಡ್ಯ | ಬೇಬಿ ಬೆಟ್ಟದಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ರೈತಸಂಘದಿಂದ ಪ್ರತಿಭಟನೆ

Date:

ಮಂಡ್ಯ ಪಟ್ಟಣದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಜನಪರ ಸಂಘಟನೆಗಳು ಕೆ.ಆರ್.ಎಸ್ ಅಣೆಕಟ್ಟೆಯ ವ್ಯಾಪ್ತಿಯಲ್ಲಿ ಟ್ರಯಲ್ ಬ್ಲಾಸ್ಟ್ ವಿರೋಧಿಸಿ ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನೆಯಲ್ಲಿ ಮಾತನಾಡಿದ ರಾಜ್ಯ ರೈತ ಸಂಘದ ಮುಖಂಡ ಹುಲ್ಲೇಗೆರೆ ಹರೀಶ್, “ಟ್ರಯಲ್ ಬ್ಲಾಸ್ಟಿನ ಉದ್ದೇಶ ಸರ್ಕಾರ ಹೇಳುವಂತೆ ಮೇಲ್ನೋಟಕ್ಕೆ ಗಣಿಗಾರಿಕೆಗೆ ಬಗ್ಗೆ ತೀರ್ಮಾನ ಮಾಡಲು ಅಲ್ಲ. ಡಿಸ್ನಿಲ್ಯಾಂಡ್ ಯೋಜನೆಯನ್ನು ಜಾರಿ ಮಾಡಲು ತೆರೆಮರೆಯಲ್ಲಿ ಸಿದ್ದತೆ ನಡೆಸುವಂತೆ ಕಾಣುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಅಣೆಕಟ್ಟು ಸುರಕ್ಷತಾ ಕಾಯಿದೆ ಜಾರಿ ಮಾಡುವಂತೆ ಬೋರಾಪುರ ಶಂಕರೇಗೌಡ ಒತ್ತಾಯಿಸಿದರು.

IMG 20240705 WA0615

ಕೆ.ಆರ್.ಎಸ್.ಅಣೆಕಟ್ಟೆಯ 20.ಕಿ.ಮೀ.ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಷೇಧಿಸಬೇಕು ಹಾಗೂ 2021ರ ಅಣೆಕಟ್ಟು ಸುರಕ್ಷತಾ ಮಸೂದೆ ಅನ್ವಯ ತಾಂತ್ರಿಕ ಪರಿಣಿತರ ಸಮಿತಿ ರಚಿಸಬೇಕು ಎಂದು ರೈತರು ಒತ್ತಾಯಿಸಿದರು.

ಅಕ್ರಮ ಗಣಿಗಾರಿಕೆಯ ಲಾಭಗಳ ಮೇಲೆ ಕಣ್ಣಿಟ್ಟಿರುವ ಗಣಿ ಮಾಲೀಕರು ಪರವಾನಗಿಯಲ್ಲಿ ವಿಧಿಸಿರುವ ನಿಯಮಗಳನ್ನು ಉಲ್ಲಂಘಿಸಿ, ಕಳ್ಳತನದಿಂದ ಗಣಿಗಾರಿಕೆ ಚಟುವಟಿಕೆಗಳನ್ನು ಮುಂದುವರೆಸಿದ್ದಾರೆ ಹಾಗೂ ತಮ್ಮ ಗಣಿಗಾರಿಕೆಯನ್ನು ತಡೆ ಇಲ್ಲದೆ ನಡೆಸಲು ನ್ಯಾಯಾಲಯದ ನೆರವು ಪಡೆಯುವ ದುಸ್ಸಾಹಸ ಮಾಡುತ್ತಿದ್ದಾರೆ. ಇದರ ಪರಿಣಾಮವಾಗಿ ಟ್ರಯಲ್ ಬ್ಲಾಸ್ಟ್ ನಡೆಸಲು ಜಿಲ್ಲಾಡಳಿತ ಮುಂದಾಗಿರುವುದು ಖಂಡನೀಯ ವಿಚಾರ ಎಂದು ಪ್ರತಿಭಟನಾ ನಿರತ ರೈತ ಮುಖಂಡರು ತಿಳಿಸಿದರು.

ಮಂಡ್ಯ ಜಿಲ್ಲೆ ಹಾಗೂ ಕರ್ನಾಟಕದ ಕೋಟ್ಯಾಂತರ ಜನರ ಜೀವನಾಡಿ ಆಗಿರುವ ಕೆ ಆರ್ ಎಸ್ ರಕ್ಷಣೆಗಾಗಿ ಅಕ್ರಮ ಗಣಿಗಾರಿಕೆ ಚಟುವಟಿಕೆಗಳನ್ನು ಶಾಶ್ವತವಾಗಿ ನಿಷೇಧಿಸಬೇಕು. ನಿರಂತರ ಹೋರಾಟಗಳನ್ನು ನಡೆಸುತ್ತಿದ್ದರೂ ಸರ್ಕಾರ ಮತ್ತು ಜಿಲ್ಲಾಡಳಿತ ಕೋಟ್ಯಂತರ ಜನರ ಆತಂಕವನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿದರು.

ರಾಜ್ಯ ಕರ್ನಾಟಕ ರೈತ ಸಂಘದ ಬಡಗಲಪುರ ನಾಗೇಂದ್ರ, ಸುನೀತಾ ಪುಟ್ಟಣಯ್ಯ, ಎ.ಎಲ್.ಕೆಂಪೇಗೌಡ, ಆಣಿಗೆರೆ ಮಲ್ಲಯ್ಯ, ಶಂಕರಯ್ಯ ತುಮಕೂರು, ಪ್ರಸನ್ನಗೌಡ, ಬೋರಾಪುರ ಶಂಕರೇಗೌಡ, ಕೆ.ಟಿ.ಗೋವಿಂದೇಗೌಡ, ಕೆ ಆರ್ ಪೇಟೆ ಜಯರಾಮಣ್ಣ, ರವೀಂದ್ರ, ಗೆಜ್ಜಲಗೆರೆ ಶಂಕರಯ್ಯ, ಸಿಐ‌ಟಿಯುವಿನ ಕುಮಾರಿ, ಮಹಿಳಾ ಮುನ್ನಡೆಯ ಪೂರ್ಣಿಮಾ, ಕೋಕಿಲ ಪಾಂಡವಪುರ, ಪ್ರಿಯಾ ರಮೇಶ್, ಕನ್ನಡ ಪರ ಸಂಘಟನೆಗಳ ಮುಖಂಡರು ಹಾಜರಿದ್ದರು.

ರೈತ ಸಂಘದ ಒತ್ತಾಯ ಹೀಗಿದೆ;

1. ಅಣೆಕಟ್ಟು ಸುರಕ್ಷತಾ ಮಸೂದೆ 2021 ರ ಪ್ರಕಾರ ಕೂಡಲೇ ಅಣೆಕಟ್ಟು ಸುರಕ್ಷತಾ ಸಮಿತಿ ರಚಿಸುವುದು.

2. ಪಾರಂಪರಿಕ ಹಾಗೂ ಹಳೆಯ ಕಟ್ಟಡವಾದ ಕೆ ಆರ್ ಎಸ್ ರಕ್ಷಣೆಗಾಗಿ ಟ್ರಯಲ್ ಬ್ಲಾಸ್ಟ್ ನಡೆಸುವುದನ್ನು ಸ್ಥಗಿತಗೊಳಿಸುವುದು.

3.ಅರಣ್ಯ, ಪರಿಸರ, ಸ್ಪೋಟಕ ಕಾಯ್ದೆಗಳನ್ನು ಉಲ್ಲಂಘಿಸಿ ಅಕ್ರಮವಾಗಿ ನಡೆಸಲಾಗಿರುವ ಗಣಿಗಾರಿಕೆ ಚಟುವಟಿಕೆಗಳಿಗೆ ಗಣಿ ಮಾಲೀಕರಿಂದ ಬಾಕಿ ಇರುವ ರಾಜಧನವನ್ನು ಕೂಡಲೇ ವಸೂಲಿ ಮಾಡುವಂತೆ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಡಿಸಿಸಿ ಬ್ಯಾಂಕ್ ಪುನಶ್ಚೇತನಕ್ಕೆ ಕ್ರಮ: ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಎಸ್.ರವಿ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್)...

​ಚಿಂತಾಮಣಿ | ಎನ್‌ಡಿಎ ಅಭ್ಯರ್ಥಿ ಪರ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಮತಬೇಟೆ;ವಕೀಲರ ಭೇಟಿ ಮಾಡಿದ ಜೆ.ಕೆ. ಕೃಷ್ಣಾರೆಡ್ಡಿ

ಚಿಂತಾಮಣಿ ನಗರದ ನ್ಯಾಯಾಲಯದಲ್ಲಿ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಎನ್‌ಡಿಎ...

ರಾಯಚೂರು | ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಅ.24ರಿಂದ ಬೃಹತ್ ಪಾದಯಾತ್ರೆ

ರೈತರು, ಕೃಷಿ ಕೂಲಿಕಾರರು ಹಾಗೂ ಗ್ರಾಮೀಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ...

ಹಾವೇರಿ ವಿವಿಯಲ್ಲಿ ಆಯುಧಪೂಜೆ ಕಡ್ಡಾಯ; ಸಾಹಿತಿಗಳು, ಶಿಕ್ಷಣ ತಜ್ಞರು ಖಂಡನೆ

ಹಾವೇರಿ ವಿಶ್ವವಿದ್ಯಾಲಯದ ಕುಲಸಚಿವರು ಎಲ್ಲ ಅಧ್ಯಯನ ವಿಭಾಗಗಳ ಶಿಕ್ಷಕ/ ಶಿಕ್ಷಕೇತರ ಸಿಬ್ಬಂದಿ...