ಮಂಡ್ಯ | ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ರಂಗನತಿಟ್ಟು ನಾವಿಕರು; ಕಾಯಮಾತಿಗೆ ಪ್ರಶಾಂತ್‌ ಮೆತಲ್‌ ಮನವಿ

Date:

ರಾಜ್ಯದ ಪ್ರಮುಖ ಪಾರಂಪರಿಕ ಪ್ರವಾಸಿ ಕೇಂದ್ರಗಳಲ್ಲಿ ಒಂದಾಗಿರುವ ರಂಗನತಿಟ್ಟು ಪಕ್ಷಿಧಾಮದಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ನಾವಿಕ(ಬೋಟ್‌ ಮ್ಯಾನ್‌)ರ ಹುದ್ದೆಯನ್ನು ಕಾಯಂಗೊಳಿಸಿ ಅವರಿಗೆ ಆರ್ಥಿಕ ಭದ್ರತೆ ಒದಗಿಸಬೇಕು ಎಂದು ರಾಜ್ಯ ಹೈಕೋರ್ಟ್‌ ವಕೀಲ ಪ್ರಶಾಂತ್‌ ಮೆತಲ್‌ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

- Advertisement -

“ಪಕ್ಷಿಧಾಮಕ್ಕೆ ಬರುವ ಪ್ರವಾಸಿಗರಿಂದ ರಾಜ್ಯಸರ್ಕಾರಕ್ಕೆ ಪ್ರತಿ ತಿಂಗಳು ₹45ರಿಂದ ₹50 ಲಕ್ಷ ಆದಾಯ ಬರುತ್ತಿದೆ. ಈ ಕೇಂದ್ರದ ಯಶಸ್ಸಿನಲ್ಲಿ ನಾವಿಕರ ಪಾತ್ರ ಮುಖ್ಯವಾಗಿದೆ. ಹೀಗಿದ್ದರೂ ಆರ್ಥಿಕ ಭದ್ರತೆಯಿಲ್ಲದೆ ಅವರು ಪರದಾಡುವಂತಾಗಿದೆ. ಇದರಿಂದ ಅವರ ಆರ್ಥಿಕ ಭದ್ರತೆ, ಸಾಮಾಜಿಕ ಸಮಾನತೆ ಮತ್ತು ಬೆಳವಣಿಗೆಗೆ ಹಿನ್ನಡೆಯಾಗಿದೆ. ಇದು ಸರಿಯಾಗಬೇಕು” ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ಸುದ್ದಿ ಓದಿದ್ದೀರಾ? ರಾಯಚೂರು | ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಅಳವಡಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಕೆ ನಿತೀಶ್

“ಇದೇ ಇಲಾಖೆಯಡಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಆನೆ ಮಾವುತರಿಗೆ ಸರ್ಕಾರ ಶಾಶ್ವತ ಹುದ್ದೆ ನೀಡಿ ಎಲ್ಲ ಸೌಲಭ್ಯಗಳನ್ನು ನೀಡುತ್ತಿದೆ. ಆದರೆ ನಾವಿಕರು ತಮ್ಮ ಪ್ರಾಣ ಪಣಕ್ಕಿಟ್ಟು ಅನಿವಾರ್ಯವಾಗಿ ಕೆಲಸ ಮಾಡುತ್ತಿದ್ದಾರೆ. ಆದರೂ ಸರ್ಕಾರ ಇತ್ತ ಗಮನಹರಿಸುತ್ತಿಲ್ಲ. ಮಾನವೀಯತೆ ದೃಷ್ಟಿಯಿಂದಾದರೂ ʼನಾವಿಕ ಹುದ್ದೆʼಯನ್ನು ಖಾಯಂಗೊಳಿಸಿ ಸಾಮಾಜಿಕ ಮತ್ತು ಆರ್ಥಿಕ ನ್ಯಾಯ ಒದಗಿಸಿದ್ದೇ ಆದಲ್ಲಿ ಅವರೊಂದಿಗೆ ಅವರ ಕುಟುಂಬಗಳೂ ಸ್ವಾವಲಂಬಿಯಾಗಿ ಬದುಕು ನಡೆಸಲು ಅನುಕೂಲವಾಗುತ್ತದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿ ಕೂಡಲೇ ಅವರ ಸೇವಾ ನಿಯಮಗಳಲ್ಲಿ ಬದಲಾವಣೆ ತರಬೇಕು” ಎಂದು ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...

ಹಾವೇರಿ | ಗಾಂಧಿ ಕಂಡ ಕನಸನ್ನ ಸೌಹಾರ್ದಗೊಳಿಸೋಣ: ಬಸವರಾಜ ಪೂಜಾರ

"ಸರ್ಕಾರದ ಕಾರ್ಯಕ್ರಮದ ಭಾಗವಾಗಿ ಮಾತ್ರ ಗಾಂಧಿ ಜಯಂತಿ ಅತ್ಯಂತ ವಿಜೃಂಭಣೆಯಿಂದ ಆಚರಣೆ...