ಲಿಂಗಾನುಪಾತದಲ್ಲಿ ಮಂಡ್ಯಕ್ಕೆ ಕಡೆಯ ಸ್ಥಾನ; ಹೆಣ್ಣು ಭ್ರೂಣ ಹತ್ಯೆ ಕಾರಣ?

Date:

ಲಿಂಗಾನುಪಾತದಲ್ಲಿ ಮಂಡ್ಯವು ಅತೀ ಹಿಂದುಳಿದಿದೆ. ಮಂಡ್ಯದಲ್ಲಿ ಗಂಡು ಮತ್ತು ಹೆಣ್ಣು ಮಕ್ಕಳ ಸಂಖ್ಯೆಯಲ್ಲಿ ಭಾರೀ ವ್ಯತ್ಯಾಸವಿದೆ ಎಂಬುದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಕೆಎಸ್‌ಸಿಪಿಸಿಆರ್) ಬಿಡುಗಡೆ ಮಾಡಿರುವ ವರದಿಯಿಂದ ಬಹಿರಂಗವಾಗಿದೆ. 2023ನೇ ವರ್ಷಕ್ಕೆ ಸಂಬಂಧಿಸಿದ ಅಂಕಿಅಂಶದಲ್ಲಿ ಜಿಲ್ಲೆಯಲ್ಲಿ 1,000 ಪುರುಷರಿಗೆ 887 ಮಹಿಳೆಯರಿದ್ದಾರೆ ಎಂದು ವರದಿ ವಿವರಿಸಿದೆ.

- Advertisement -

ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆಯ ಎಸ್ ಮಾದೇಶ್ವರನ್ ಮತ್ತು ಬಿಪಿ ವಾಣಿ ಅವರು ಕರ್ನಾಟಕದಲ್ಲಿ ಲಿಂಗಾನುಪಾತದ ಅಧ್ಯಯನ ನಡೆಸಿದ್ದಾರೆ. ಅವರ ಅಧ್ಯಯನ ವರದಿಯನ್ನು ಕೆಎಸ್‌ಸಿಪಿಸಿಆರ್‌ ಬಿಡುಗಡೆ ಮಾಡಿದೆ. “ಮಂಡ್ಯ, ಬಾಗಲಕೋಟೆ, ಬೀದರ್, ಚಿಕ್ಕಬಳ್ಳಾಪುರ ಹಾಗೂ ಕಲಬುರಗಿ ಸೇರಿದಂತೆ ಹಲವಾರು ಜಿಲ್ಲೆಗಳು ಕಡಿಮೆ ಲಿಂಗಾನುಪಾತವನ್ನು ಹೊಂದಿವೆ. ಈ ಜಿಲ್ಲೆಗಳು ಜನನದ ಸಮಯದಲ್ಲಿ 900ಕ್ಕಿಂತ ಕಡಿಮೆ ಲಿಂಗಾನುಪಾತವನ್ನು ಹೊಂದಿರುವ ಜಿಲ್ಲೆಗಳಾಗಿವೆ” ಎಂದು ವರದಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಮಂಡ್ಯ ಜಿಲ್ಲೆಯಲ್ಲಿ 2023ರಲ್ಲಿ ಲಿಂಗಾನುಪಾತವು 887 ಆಗಿತ್ತು. ಅದಕ್ಕೂ ಹಿಂದಿನ – 2020ರಲ್ಲಿ 884, 2021ರಲ್ಲಿ 873 ಹಾಗೂ 2022ರಲ್ಲಿ 877 ಆಗಿತ್ತು ಎಂಬುದನ್ನು ವರದಿ ವಿವರಿಸಿದೆ.

“2023ರಲ್ಲಿ ಬಾಗಲಕೋಟೆ 919, ಬೀದರ್‌ 920, ಕಲಬುರಗಿ 910 ಹಾಗೂ ಚಿಕ್ಕಬಳ್ಳಾಪುರ 937 ಲಿಂಗಾನುಪಾತವನ್ನು ಹೊಂದಿವೆ. ಈ ಜಿಲ್ಲೆಗಳಲ್ಲಿಯೂ 2022ರಲ್ಲಿ ಲಿಂಗಾನುಪಾತವು 900ಕ್ಕಿಂತ ಕಡಿಮೆಯಾಗಿತ್ತು” ಎಂದು ವರದಿ ತಿಳಿಸಿದೆ.

ಭಾರತದ ಲಿಂಗಾನುಪಾತವು ಜನನದ ಸಮಯದಲ್ಲಿ 1,000 ಪುರುಷರಿಗೆ 950 ಮಹಿಳೆಯರನ್ನು ಹೊಂದಿರಬೇಕೆಂಬ ಗುರಿಯನ್ನು ಹೊಂದಿದೆ. ಆದಾಗ್ಯೂ, ಈ ಪ್ರಮಾಣದ ಲಿಂಗಾನುಪಾತವನ್ನು ಸಾಧಿಸಲಾಗಿಲ್ಲ. ಕೇರಳ ಮಾತ್ರವೇ ಲಿಂಗಾನುಪಾತದಲ್ಲಿ ಪ್ರಗತಿ ಸಾಧಿಸಿದೆ. ಅಲ್ಲಿ, 1,000 ಪುರುಷರಿಗೆ 1,080 ಮಹಿಳೆಯರಿದ್ದಾರೆ.

ಲಿಂಗಾನುಪಾತದಲ್ಲಿನ ಭಾರೀ ವ್ಯತ್ಯಾಸಕ್ಕೆ ಹೆಣ್ಣು ಭ್ರೂಣ ಹತ್ಯೆ ಪ್ರಮುಖ ಕಾರಣವೆಂದು ಹೇಳಲಾಗಿದೆ. ಇತ್ತೀಚೆಗೆ, ಮಂಡ್ಯದಲ್ಲಿ ಹೆಣ್ಣು ಭ್ರೂಣ ಪತ್ತೆಯ ಜಾಲ ಬೆಳಕಿಗೆ ಬಂದಿತ್ತು. ಇಂತಹ ಜಾಲಗಳಿಂದ ಹೆಣ್ಣು ಭ್ರೂಣ ಹತ್ಯೆಗಳು ಹೆಚ್ಚಾಗಿ ನಡೆದಿವೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ತೀವ್ರ ಮಳೆ ಕೊರತೆಯಿಂದ ಕೂಡಿದ್ದ ಮುಂಗಾರು ಹಂಗಾಮು ಕೊನೆಗೊಂಡಿದೆ. ಹಿಂಗಾರು ಆರಂಭವಾಗಿದೆ....

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17ರಂದು ಬ್ರಹ್ಮಾವರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

ಉಡುಪಿ ಜಿಲ್ಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಕರಾವಳಿ ಭಾಗದ ಜನರ ಬಹುದಿನಗಳ...