ಮಂಡ್ಯ | ಮತ್ತೆ ತಮಿಳುನಾಡಿಗೆ ನೀರು; ನೀರಿಗಿಳಿದು ರೈತರ ಪ್ರತಿಭಟನೆ

Date:

Advertisements

ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನವೆಂಬರ್‌ 1ರಿಂದ 15 ದಿನಗಳ ಕಾಲ ಪ್ರತಿದಿನ 2,600 ಕ್ಯೂಸೆಕ್‌ ನೀರು ಹರಿಸಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ ಶಿಫಾರಸು ಮಾಡಿದೆ. ಸಮತಿಯ ನಿರ್ಧಾರವನ್ನು ವಿರೋಧಿಸಿ ಭೂಮಿತಾಯಿ ಹೋರಾಟ ಸಮಿತಿಯ ರೈತರು ಸೋಮವಾರ ಸಂಜೆ ಕಾವೇರಿ ನದಿಗಿಳಿದು ಪ್ರತಿಭಟನೆ ನಡೆಸಿದರು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸೋಪಾನಕಟ್ಟೆ ಬಳಿ ನದಿಯಲ್ಲಿ ನಿಂತು ಅರ್ಧ ತಾಸು ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ, ಕಾವೇರಿ ನೀರು ನಿಯಂತ್ರಣ ಸಮಿತಿ, ಸಚಿವರು ಮತ್ತು ಸಂಸದರ ವಿರುದ್ಧ ಘೋಷಣೆ ಕೂಗಿದರು. ರಾಜ್ಯ ಸರ್ಕಾರ ನೀರು ಬಿಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಲೇಬೇಕು ಎಂದು ಆಗ್ರಹಿಸಿದರು.

“ರಾಜ್ಯದಲ್ಲಿ ತೀವ್ರ ಸ್ವರೂಪದ ಬರಗಾಲ ಆವರಿಸಿರುವ ಸಂಕಷ್ಟದ ಸಂದರ್ಭದಲ್ಲಿ ರಾಜ್ಯದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುವಂತೆ ಶಿಫಾರಸು ಮಾಡಿರುವ ಕಾವೇರಿ ನೀರು ನಿರ್ವಹಣಾ ಸಮಿತಿಯ ಕ್ರಮ ಅವೈಜ್ಞಾನಿಕವಾಗಿದೆ. ಅಲ್ಲಿನ ಜಲಾಶಯಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿ ತಿಳಿಯದೆ ಶಿಫಾರಸು ಮಾಡುವುದು ಸರಿಯಲ್ಲ. ಅಧಿಕಾರಿಗಳು ರಾಜ್ಯದ ಪರ ಸಮರ್ಪಕ ಮಾಹಿತಿ ಒದಗಿಸುವಲ್ಲಿ ವಿಫಲರಾಗಿದ್ದಾರೆ” ಎಂದು ರೈತ ನಾಯಕ ಕೆ.ಎಸ್‌. ನಂಜುಂಡೇಗೌಡ ಆಕ್ರೋಶ ವ್ಯಕ್ತಪಡಿಸಿದರು.

Advertisements

“ಕೆಆರ್‌ಎಸ್‌ ಅಣೆಕಟ್ಟೆಯಿಂದ ಕಟ್ಟು ಪದ್ದತಿಯಲ್ಲಿ ನೀರು ಕೊಡಲೂ ಹಿಂದೇಟು ಹಾಕುವ ಸರ್ಕಾರ ತಮಿಳುನಾಡು ಸರ್ಕಾರ ಕೇಳಿದಾಗಲೆಲ್ಲ ಧಾರಾಳವಾಗಿ ನೀರು ಹರಿಸುತ್ತಿದೆ. ಇಲ್ಲಿಯ ಕೆಲವೆಡೆ ಬೆಳೆಗಳು ಒಣಗುತ್ತಿವೆ. ಕೆಲವೆಡೆ ಭತ್ತದ ಬೆಳೆ ಕಾಳು ಕಟ್ಟುವ ಹಂತದಲ್ಲಿದೆ. ಇಂತಹ ಭತ್ತದ ಬೆಳೆಗೆ ನೀರು ಕೊಡದೆ ಸರ್ಕಾರ ಸತಾಯಿಸುತ್ತಿದೆ. ಇಂತಹ ರೈತ ವಿರೋಧಿ ಸರ್ಕಾರಕ್ಕೆ ಜನರು ತಕ್ಕ ಬುದ್ಧಿ ಕಲಿಸಬೇಕು” ಎಂದು ಭೂಮಿತಾಯಿ ಹೋರಾಟ ಸಮಿತಿ ಅಧ್ಯಕ್ಷ ಬಿ ಸಿ ಕೃಷ್ಣೇಗೌಡ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕೋಲಾರ | ಕಾಂಗ್ರೆಸ್‌ ಮುಖಂಡನ ಕೊಲೆ; ಶ್ರೀನಿವಾಸಪುರ ಬಂದ್

ಪ್ರತಿಭಟನೆಯಲ್ಲಿ ಪುಟ್ಟಮಾದು, ಕೆಂಪೇಗೌಡ, ಮಹೇಶ್‌, ಡಿ ಎಂ ರವಿ, ಡಿ ಆರ್‌ ಸೋಮೇಶ್‌, ದೊಡ್ಡಪಾಳ್ಯ ಜಗದೀಶ್‌, ಹನಿಯಂಬಾಡಿ ನಾಗರಾಜು, ಕೆ ಶೆಟ್ಟಹಳ್ಳಿ ಮಹಲಿಂಗು, ದರಸಗುಪ್ಪೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ರವಿಲಕ್ಷ್ಮಣ, ಕಿರಂಗೂರು ಮಹದೇವು, ದೊಡ್ಡೇಗೌಡನಕೊಪ್ಪಲು ರವಿ, ಚಾಮಪ್ಪ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X