ಮಂಡ್ಯ | ತಮಿಳುನಾಡಿಗೆ ನೀರು ಬಿಡದಂತೆ ಆಹೋರಾತ್ರಿ ಧರಣಿ

Date:

Advertisements

ಕಾವೇರಿ ನೀರು ನಿರ್ವಹಣಾ ಸಮಿತಿಯ ತೀರ್ಮಾನವು ರಾಜ್ಯದ ರೈತ ವಿರೋಧಿಯಾಗಿದೆ. ಸರ್ಕಾರವು ರಾಜ್ಯದಿಂದ ತಮಿಳುನಾಡಿಗೆ ನೀರು ಹರಿಸದೆ, ರಾಜ್ಯದ ರೈತರನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಆಹೋರಾತ್ರಿ ಸತ್ಯಾಗ್ರಹ ಆರಂಭಿಸಿದ್ದಾರೆ.

ಮಂಡ್ಯ ಜಿಲ್ಲೆ ಕೆಆರ್‌ಎಸ್‌ ಆಣೆಕಟ್ಟೆಯ ಬಳಿ ಬುಧವಾರ ಮಧ್ಯಾಹ್ನದಿಂದ ಆಹೋರಾತ್ರಿ ಸತ್ಯಾಗ್ರಹ ಆರಂಭಿಸಲಾಗಿದೆ. ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮತ್ತು ಶಾಸಕ ದರ್ಶನ್ ಪುಣ್ಣಯ್ಯಣ್ಣ ನೇತೃತ್ವದಲ್ಲಿ ಸತ್ಯಾಗ್ರಹಿಗರು ಮೈಸೂರು ನೀರಾವರಿ ದಕ್ಷಿಣ ವಲಯ ಮುಖ್ಯ ಅಭಿಯಂತರರು ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

“ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ನೀರಾವರಿ ಜಲಾಶಯಗಳಿಗೆ ಒಳಹರಿವು ಕಡಿಮೆಯಾಗಿದೆ. ಅಲ್ಲದೆ ಈವರೆಗೆ ಜಲಾಶಯಗಳ ನೀರಿನ ಶೇಖರಣೆಯೂ ಕಡಿಮೆ ಇರುವುದು ಕಳವಳಕಾರಿಯಾಗಿದೆ. ಹಾಗಾಗಿ ಕಾವೇರಿ ಜಲಾನಯನ ಪ್ರದೇಶದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸಬಾರದು” ಎಂದು ಆಗ್ರಹಿಸಿದರು.

Advertisements

“ಉಪಯೋಗಿಸಲು ಸಾಧ್ಯವಿರುವ ನೀರು ಕಡಿಮೆ ಇದೆ. ಕಾವೇರಿ ನೀರು ನಿರ್ವಹಣಾ ಸಮಿತಿಯ ನಿರ್ದೇಶನದಂತೆ ರಾಜ್ಯದ ಜಲಾಶಯಗಳಿಂದ ತಮಿಳುನಾಡಿಗೆ 15 ದಿನಗಳವರೆಗೆ 5 ಸಾವಿರ ಕ್ಯೂಸೆಕ್‌ ನೀರು ಹರಿಸಿದರೆ ಅಚ್ಚುಕಟ್ಟಿನಲ್ಲಿ ಬೆಳೆದಿರುವ ಫಸಲು ಉಳಿಸುವುದಿರಲಿ, ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಮುರಾರ್ಜಿ ದೇಸಾಯಿ ಹಾಸ್ಟೆಲ್‌ ಅವ್ಯವಸ್ಥೆಗೆ ವಿದ್ಯಾರ್ಥಿಗಳ ಖಂಡನೆ

“ತಮಿಳುನಾಡಿಗೆ ನೀರು ಹರಿಸದಿರಲು ಸ್ಪಷ್ಟ ತೀರ್ಮಾನ ಮಾಡಿ, ಕಾನೂನು ಹೋರಾಟಕ್ಕೆ ಮುಂದಾಗಬೇಕು. ಸ್ಪಷ್ಟ ಸಂಕಷ್ಟ ಸೂತ್ರದ ಮಾನದಂಡ ಇರದೇ ಇರುವುದು ಈ ಸಮಸ್ಯೆಗೆ ಮೂಲ ಕಾರಣವಾಗಿದೆ. ಸ್ಪಷ್ಟ ಸಂಕಷ್ಟ ಸೂತ್ರವನ್ನು ರೂಪಿಸಲು ತಾವು ಕೇಂದ್ರದ ಮೇಲೆ ಒತ್ತಡ ಹೇರಬೇಕು. ಅಗತ್ಯ ಇರುವ ಇತರೆ ಎಲ್ಲ ಕ್ರಮಗಳನ್ನು ಅನುಸರಿಸಿ ರಾಜ್ಯದ ರೈತರನ್ನು ರಕ್ಷಿಸಲೇಬೇಕು” ಎಂದು ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ರೈತಸಂಘದ ಮಂಡ್ಯ ಜಿಲ್ಲಾಧ್ಯಕ್ಷ ಕೆಂಪುಗೌಡ, ಯುವ ಮುಖಂಡ ಪ್ರಸನ್ನ ಎನ್ ಗೌಡ ಸೇರಿದಂತೆ ಬಹುತೇಕ ರೈತರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X