ಮಂಡ್ಯ | ಕೆ ಆರ್ ಪೇಟೆ ಪುರಸಭೆ ಉಪಾಧ್ಯಕ್ಷರಾಗಿ ಸೌಭಾಗ್ಯ ಉಮೇಶ್ ಆಯ್ಕೆ

Date:

Advertisements

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ಪುರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸೌಭಾಗ್ಯ ಉಮೇಶ್ ಅವರು ಗೆಲುವು ಸಾಧಿಸಿದ್ದು, ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.

ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಕಲ್ಪನಾ ಅವರು ಸ್ಪರ್ಧಿಸಿದ್ದರು. ಮತದಾನದ ಪ್ರಕ್ರಿಯೆಯಲ್ಲಿ ಸೌಭಾಗ್ಯ ಪರವಾಗಿ ಒಬ್ಬ ಪಕ್ಷೇತರ ಮತ್ತು ಮೂವರು ಜೆಡಿಎಸ್ ಸದಸ್ಯರು ಸೇರಿದಂತೆ 9 ಮಂದಿ ಕಾಂಗ್ರೆಸ್ ಸದಸ್ಯರು ಸೇರಿದಂತೆ ಒಟ್ಟು 13 ಮತಗಳನ್ನು ಪಡೆದರು. ಮತ್ತೊಂದೆಡೆ, ಕಲ್ಪನಾ ಅವರು 11 ಮತಗಳನ್ನು ಮಾತ್ರ ಪಡೆದ ಕಾರಣ, ಅವರು ಎರಡು ಮತಗಳ ಅಂತರದಿಂದ ಸೋಲನುಭವಿಸಿದರು.

ಜೆಡಿಎಸ್ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ಪಕ್ಷೇತರ ಸದಸ್ಯ ಶಾಮಿಯಾನ ತಿಮ್ಮೇಗೌಡ ಕೂಡಾ ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದರು. ಅಲ್ಲದೆ, ಜೆಡಿಎಸ್ ಶಾಸಕ ಮಂಜು ಅವರ ಕಟ್ಟಾ ಬೆಂಬಲಿಗರಾದ ಹೊಸಹೊಳಲು ಅಶೋಕ್, ಇಂದ್ರಾಣಿ ವಿಶ್ವನಾಥ್ ಮತ್ತು ಪದ್ಮಾರಾಜು ಆಪ್ತಮಿತ್ರರಾಗಿದ್ದರೂ ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಮತ ಚಲಾಯಿಸಿದರು. ಇದು ವಿಶೇಷವೆನಿಸಿತು.‌

Advertisements
ಕೃಷ್ಣರಾಜ ಪೇಟೆ

ಚುನಾವಣೆ ಪ್ರಕ್ರಿಯೆಯಲ್ಲಿ ರಾಜ್ಯ ಉಚ್ಛನ್ಯಾಯಾಲಯದಲ್ಲಿ ಅಧ್ಯಕ್ಷ ಸ್ಥಾನಕ್ಕೆ ತಡೆಯಾಜ್ಞೆ ಪಡೆದಿದ್ದ ಕಾಂಗ್ರೆಸ್ ಹಿರಿಯ ಸದಸ್ಯ ಕೆ ಸಿ ಮಂಜುನಾಥ್ ಕೂಡಾ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಸೌಭಾಗ್ಯ ಪರವಾಗಿ ಮತ ಚಲಾಯಿಸಿದರು. ಆದರೆ ಅವರು ಚುನಾವಣಾ ಫಲಿತಾಂಶ ಸಂಭ್ರಮಾಚರಣೆಯಲ್ಲಿ ಭಾಗವಹಿಸದೆ ಸಭೆಯಿಂದ ಹೊರನಡೆದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಪರಿಶಿಷ್ಟ ಸಮುದಾಯದವರ ಮೇಲೆ ದೌರ್ಜನ್ಯ; ಭೀಮಸೇನೆ ಕರ್ನಾಟಕ ತಪ್ಪಿತಸ್ತರ ವಿರುದ್ಧ ಕ್ರಮಕ್ಕೆ ಆಗ್ರಹ

ಚುನಾವಣಾ ಕರ್ತವ್ಯವನ್ನು ತಹಶೀಲ್ದಾರ್ ಆದರ್ಶ್‌ ನಿರ್ವಹಿಸಿದ್ದು, ಚುನಾವಣಾ ಸಹಾಯಕರಾಗಿ ಚೀಫ್ ಆಫೀಸರ್ ರಾಜು ಕೆ ವಠಾರ ಮತ್ತು ಚುನಾವಣೆ ಶಾಖೆ ಶಿರಸ್ತೇದಾರ್ ಹರೀಶ್ ಕೆಲಸ ನಿರ್ವಹಿಸಿದರು. ಚುನಾವಣಾ ಫಲಿತಾಂಶ ಪ್ರಕಟಗೊಂಡ ಬಳಿಕ, ಕಾಂಗ್ರೆಸ್ ಕಾರ್ಯಕರ್ತರು ಮತ್ತು ಮುಖಂಡರು ಸಂಭ್ರಮಾಚರಣೆ ನಡೆಸಿದರು.

ಈ ಸಂದರ್ಭದಲ್ಲಿ, ಮಾಜಿ ಶಾಸಕ ಕೆ ಬಿ ಚಂದ್ರಶೇಖರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹರಳಹಳ್ಳಿ ವಿಶ್ವನಾಥ್, ಕಾಂಗ್ರೆಸ್ ನಾಯಕ ಬಿ ಎಲ್ ದೇವರಾಜು ಮತ್ತು ಪಕ್ಷದ ಅನೇಕ ಪ್ರಮುಖ ನಾಯಕರು ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X