ಮಂಡ್ಯ | ಗಣೇಶ ಹಬ್ಬದ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಎಸ್‌ಪಿ ಶೋಭಾರಾಣಿ ಖಡಕ್‌ ವಾರ್ನಿಂಗ್‌

Date:

ಗಣೇಶ ಹಬ್ಬದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮಂಡ್ಯ ಜಿಲ್ಲಾ ಪೊಲೀಸ್ ಇಲಾಖೆ ಹೈ ಅಲರ್ಟ್ ಘೋಷಿಸಿದ್ದು, ಜಿಲ್ಲಾದ್ಯಂತ ಹಲವು ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಗಣೇಶ ಮೂರ್ತಿಗಳನ್ನು ಕೂರಿಸುವವರು ಅನುಮತಿ ಪಡೆಯುವಂತೆ ಸೂಚನೆ ನೀಡಲಾಗಿದೆ.

- Advertisement -

2024ರಲ್ಲಿ ನಾಗಮಂಗಲ ಹಾಗೂ ಕಳೆದ ವರ್ಷ ಮದ್ದೂರಿನಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಮೂರ್ತಿ ಮೇಲೆ ಕಲ್ಲು ತೂರಿದ್ದರಿಂದ ಗಲಭೆ ಸೃಷ್ಟಿಯಾಗಿತ್ತು. ಈ ಘಟನೆಗಳಿಂದ ಎಚ್ಚೆತ್ತುಕೊಂಡಿರುವ ಮಂಡ್ಯ ಎಸ್​ಪಿ ಶೋಭಾರಾಣಿ, ಮದ್ದೂರಿನಲ್ಲಿ ಸಾರ್ವಜನಿಕರು ಹಾಗೂ ಮುಖಂಡರೊಂದಿಗೆ ಎರಡನೇ ಸುತ್ತಿನ ಶಾಂತಿ ಸಭೆ ನಡೆಸಿ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಗಣೇಶ ಹಬ್ಬ ಹತ್ತಿರವಾಗುತ್ತಿದ್ದಂತೆ ಮಂಡ್ಯ ಪೊಲೀಸರು ಹೈ ಅಲರ್ಟ್ ಆಗಿದ್ದು, ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಯಾಗದಂತೆ ಕಟ್ಟೆಚ್ಚರ ವಹಿಸಿದ್ದಾರೆ. ಶಾಂತಿ ಸಭೆಗಳ ಮೂಲಕ ಜನರಿಗೆ ಅರಿವು ಮೂಡಿಸಿ ಗಣೇಶೋತ್ಸವದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ವಹಿಸಿದ್ದಾರೆ.

ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಿದ್ದು, ಸಮಾಜಘಾತುಕ ಶಕ್ತಿಗಳ ಪ್ರತಿಯೊಂದು ಚಲನವಲನದ ಮೇಲೂ ಪೊಲೀಸರು ನಿಗಾ ವಹಿಸಿದ್ದಾರೆ. ಡಿಜೆ ನಿಷೇಧ, ಎನ್​ಒಸಿ ಪ್ರಮಾಣಪತ್ರ, ಗಣೇಶ ಪ್ರತಿಷ್ಠಾಪನೆ ವೇಳೆ ಸಿಸಿ ಕ್ಯಾಮರಾಗಳ ಅಳವಡಿಸಿಕೆ ಸೇರಿದಂತೆ ಹಲವು ಕಠಿಣ ನಿಯಮಗಳನ್ನು ಜಾರಿ ಮಾಡಲಾಗಿದೆ. ಗಣೇಶ ಕೂರಿಸುವವರು ಕಡ್ಡಾಯವಾಗಿ ಅನುಮತಿ ಪಡೆಯಲು ಪೊಲೀಸರು ಸೂಚಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಬಸವ, ಅಂಬೇಡ್ಕರ್ ತತ್ವಗಳು ಸಮಸಮಾಜಕ್ಕೆ ದಾರಿ: ಆಲ್ಕೋಡ ಹನಮಂತಪ್ಪ

“ಮಂಡ್ಯ ಜಿಲ್ಲೆಯಲ್ಲಿ ಈ ಹಿಂದೆ ಯಾವುದೇ ಅಹಿತಕರ ಘಟನೆಗಳು ನಡೆದಿರಲಿಲ್ಲ. ಹಿಂದಿನ ಗಲಭೆಗಳಲ್ಲಿ ಅಕ್ಕಪಕ್ಕದ ಜಿಲ್ಲೆಗಳಿಂದ ಕಿಡಿಗೇಡಿಗಳು ಬಂದು ಕಲ್ಲು ತೂರಾಟ ನಡೆಸಿರುವುದು ಕಂಡುಬಂದಿತ್ತು. ಹಾಗಾಗಿ ಈ ಬಾರಿ ಅಪರಿಚಿತರು ಹಾಗೂ ಹೊರಗಿನ ವ್ಯಕ್ತಿಗಳ ಬಗ್ಗೆ ಸಾರ್ವಜನಿಕರು ಸದಾ ಜಾಗರೂಕರಾಗಿರಬೇಕು. ಹಬ್ಬವನ್ನು ಸೌಹಾರ್ದಯುತವಾಗಿ, ಶಾಂತಿಯುತವಾಗಿ ಆಚರಿಸಬೇಕು. ಉತ್ಸವ ಸಮಿತಿಯವರು ಮತ್ತು ಸಾರ್ವಜನಿಕರು ಪೊಲೀಸರಿಗೆ ಸಹಕರಿಸಬೇಕು. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸಿದರೆ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಸ್​ಪಿ ಶೋಭಾರಾಣಿ ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ ಸೇರಿ ಎಲ್ಲಾ ಉತ್ಸವಗಳಲ್ಲಿ ಆನೆಗಳ ಬಳಕೆ ನಿಷೇಧಿಸಿ, ರೋಬೋಟಿಕ್ ಆನೆ ಬಳಸಿ: ಅರಣ್ಯ ಸಚಿವರಿಗೆ ಮನವಿ

ನಾಡಹಬ್ಬ ಮೈಸೂರು ದಸರಾ ಮತ್ತು ಜಿಲ್ಲಾವಾರು ದಸರಾ ಆಚರಣೆಗಳು ಸೇರಿದಂತೆ ಯಾವುದೇ...

ಔರಾದ(ಬಿ) ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್ ಆಯ್ಕೆ

ಭಾರತೀಯ ಜನತಾ ಪಕ್ಷದ ಔರಾದ(ಬಿ) ಮಂಡಲದ ನೂತನ ಅಧ್ಯಕ್ಷರಾಗಿ ಅನಿರುದ್ಧ ವಾಡೇಕರ್...

ಆಂಧ್ರಪ್ರದೇಶ | ರಸ್ತೆ ಕಾಮಗಾರಿ ವೇಳೆ ಜೆಲಾಟಿನ್ ಸ್ಫೋಟ; ಶಾಲಾ ಶಿಕ್ಷಕಿ ಸೇರಿದಂತೆ ಹಲವರ ಸಾವು

ರಸ್ತೆ ಕಾಮಗಾರಿಗಾಗಿ ಬಳಸಲಾಗುತ್ತಿದ್ದ ಜೆಲಾಟಿನ್ ಸ್ಟಿಕ್‌ಗಳು ಅನಿರೀಕ್ಷಿತವಾಗಿ ಸ್ಫೋಟಗೊಂಡು, ಶಾಲಾ ಶಿಕ್ಷಕಿಯೊಬ್ಬರು...

ರಾಯಚೂರು | ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಣೆ ಆರೋಪ: ಮೂವರು ಪೊಲೀಸ್ ವಶಕ್ಕೆ

ನಗರದ 13ನೇ ವಾರ್ಡ್‌ನ ಮಾರುತಿ ನಗರ ಸ್ಮಶಾನದಲ್ಲಿ ಹೂತು ಹಾಕಿದ ಶವಗಳ...