ಮಂಡ್ಯ | ಮಹಿಳೆಯರಿಗೆ ಸಮಾನತೆ ನೀಡಿದ ನಾಡುಗಳು ಮುಂಚೂಣಿಯಲ್ಲಿವೆ: ನ್ಯಾ. ಬಿ ಟಿ ವಿಶ್ವನಾಥ್‌

Date:

“ಹೆಣ್ಣೊಂದು ಕಲಿತರೆ, ಶಾಲೆಯೊಂದು ತೆರೆದಂತೆ” ಎಂಬ ನಾಣ್ಣುಡಿಯಂತೆ ಎಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ನೀಡಲಾಗಿದೆಯೋ ಆ ನಾಡುಗಳು ಪ್ರಗತಿಯತ್ತ ದಾಪುಗಾಲು ಹಾಕುತ್ತಿವೆ ಎಂದು ನ್ಯಾ. ಬಿ ಟಿ ವಿಶ್ವನಾಥ್ ಅಭಿಪ್ರಾಯಪಟ್ಟರು.

- Advertisement -

ಮೈಸೂರಿನ ಬನ್ನೂರು ಹೋಬಳಿಯ ಯಾಚೇನಹಳ್ಳಿಯಲ್ಲಿ ರಾಮಕೃಷ್ಣ ಸೇವಾ ಕೇಂದ್ರ ಟ್ರಸ್ಟ್‌ ಆಯೋಜಿಸಿದ್ದ ‘ವಿಶ್ವಮಾನವ ಮೌಲ್ಯ ಚಿಂತನ ಸತ್ಸಂಗ-15’ ಕಾರ್ಯಕ್ರಮದಲ್ಲಿ “ಮಹಿಳಾ ಪಾತ್ರ” ಕುರಿತ ವಿಚಾರ ಮಂಡನೆ ಮಾಡಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಮಹಿಳೆಯರಿಗೆ ಪುರುಷರಷ್ಟೇ ರಾಜಕೀಯ, ಹಣಕಾಸು ಹಾಗೂ ಸಾಮಾಜಿಕ ಸಮಾನತೆ ದೊರೆತರೆ ಮಾತ್ರ ವಿಶ್ವಮಾನವ ಧರ್ಮ ಸ್ಥಾಪನೆ ಸಾಧ್ಯ. ಉದಾಹರಣೆಗೆ, ಸ್ವೀಡನ್‌ನಿಂದ ಶೇ.45ರಷ್ಟು ಮಂದಿ ಮಹಿಳೆಯ ಪರವಾಗಿದ್ದು, ಅಲ್ಲಿ ಮಹಿಳೆಯರಿಗೆ ಸಮಾನ ಅವಕಾಶಗಳನ್ನು ನೀಡಲಾಗಿದೆ. ಇದರಿಂದ ಆ ನಾಡು ಪ್ರಗತಿಯತ್ತ ಸಾಗಲು ಸಾಧ್ಯವಾಯಿತು” ಎಂದು ವಿವರಿಸಿದರು.

“ಇಡೀ ನೆಲದಲ್ಲಿ ಯಹೂದಿ ಸಮುದಾಯದವರು ಶೇ.20ರಷ್ಟು ನೊಬೆಲ್‌ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಆದರೆ ಅವರ ಜನ ಎಣಿಕೆ ಕೇವಲ ಶೇ.1ರಷ್ಟು ಮಾತ್ರ. ಆದರೂ ನೊಬೆಲ್‌ ಪ್ರಶಸ್ತಿಗಳಲ್ಲಿ ಅತಿಹೆಚ್ಚು ಸಾಧನೆ ಮಾಡಿದ್ದಾರೆ. ಇದಕ್ಕೆ ಕಾರಣ, ಯಹೂದಿ ಸಮುದಾಯದಲ್ಲಿ ಮಹಿಳೆಯರಿಗೆ ಪುರುಷರಷ್ಟೇ ಸಮಾನ ಅವಕಾಶಗಳನ್ನು ನೀಡಲಾಗಿರುವುದು” ಎಂದು ಮಾಹಿತಿ ನೀಡಿದರು.

“ಇಡೀ ವಿಶ್ವದಲ್ಲಿ ಡೆನ್ಮಾರ್ಕ್, ಇಟಲಿ, ಆಸ್ಟ್ರೇಲಿಯಾ, ಯುನೈಟೆಡ್ ಸ್ಟೇಟ್ಸ್, ಟರ್ಕಿ, ಮೆಕ್ಸಿಕೋ ಹಾಗೂ ಜರ್ಮನಿಯಂತಹ 10 ನಾಡುಗಳಲ್ಲಿ ಮಹಿಳೆಯರಿಗೆ ಹೆಚ್ಚು ಸಮಾನತೆ ನೀಡಲಾಗಿದೆ. ಇದರಿಂದಾಗಿ ಈ ನಾಡುಗಳು ಪ್ರಗತಿ ಸಾಧಿಸಲು ಸಾಧ್ಯವಾಗಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಜಾತಿಯ ಗೋಡೆಗಳನ್ನು ಕೆಡವಿ, ಸೇತುವೆ ಕಟ್ಟುವ ಕೆಲಸ ಆಗಬೇಕಿದೆ: ಸಾಣೇಹಳ್ಳಿ ಸ್ವಾಮೀಜಿ

ಶ್ರೀರಾಮಕೃಷ್ಣ ಸೇವಾ ಕೇಂದ್ರ ಟ್ರಸ್ಟಿನ ಶ್ರೀನಾದಾನಂದನಾಥ ಅಧ್ಯಕ್ಷತೆ ವಹಿಸಿದ್ದರು. ಅಪರ ಜಿಲ್ಲಾಧಿಕಾರಿ ಡಾ. ಎಚ್ ಎಲ್ ನಾಗರಾಜ್, ಕೆ ಜಿ ವಿಜಯಕುಮಾರ್, ಡಾ. ಮಾದೇಶ್, ಎಂಜಿನಿಯರ್ ಜಿ ಎನ್ ಕೆಂಪರಾಜು, ಡಾ. ಆದಿತ್ಯಗೌಡ, ‘ನುಡಿ ಕರ್ನಾಟಕ’ದ ಸಂಪಾದಕ ಎನ್. ನಾಗೇಶ್, ಸಂತೋಷ್, ಟಿ ಡಿ ನಾಗರಾಜ್, ವೈರಮುಡಿ, ಪಾವನಿ, ನೆಲದನಿ ಬಳಗದ ಮಂಗಲ ಲಂಕೇಶ್, ಸುಬ್ರಮಣ್ಯ ಸೇರಿದಂತೆ ಬಹುತೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...