ಮಂಡ್ಯದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಐವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ನಡೆದಿದೆ.
ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿಯ ಮುಖ್ಯರಸ್ತೆಯಲ್ಲಿ ಕಾರು ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿದ್ದು, ಅಪಘಾತ ಸಂಭಿವಿಸಿದೆ. ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೃತರನ್ನು ಮಂಡ್ಯ ನಗರದವರು ಎಂದು ಹೇಳಲಾಗಿದೆ. ಆದರೆ, ಇನ್ನೂ, ಮೃತರ ಗುರುತುಗಳು ಪತ್ತೆಯಾಗಿಲ್ಲ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮಂಡ್ಯ ಮೂಲದವರಾದ ಮೂವರು ಪುರುಷರು ಮತ್ತು ಇಬ್ಬರು ಮಹಿಳೆಯರು ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ, ಅಪಘಾತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.