ಮಂಡ್ಯ | ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ಸ್ಥಳದಲ್ಲೇ ಯುವತಿ ಸಾವು

Date:

  • ಮೈಸೂರಿಗೆ ಪ್ರವಾಸಕೆಂದು ತೆರಳಿದ್ದ ಬೈಕ್‌ ಸವಾರರು
  • ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಂಗಳೂರು – ಮೈಸೂರು ಎಕ್ಸ್ಪ್ರೆಸ್‌ ವೇ ಪ್ರಾರಂಭವಾದಾಗಿನಿಂದ ಒಂದಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿದೆ. ಕಳೆದ ಮೂರ್ನಾಲ್ಕು ದಿನಗಳ ಹಿಂದೆ ನಡೆದಿದ್ದ ಅಪಘಾತದಲ್ಲಿ ತಾಯಿ – ಮಗ ಮೃತಪಟ್ಟಿದ್ದ ಸುದ್ದಿ ಹಸಿರಿರುವಾಗಲೇ ಮತ್ತೊಂದು ಅಪಘಾತ ಸಂಭವಿಸಿದ್ದು, ಯುವತಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರಿನ ಟಿಸಿಎಸ್ ಕಂಪನಿಯಲ್ಲಿ ಉದ್ಯೋಗಿಗಳಾಗಿದ್ದ ಇಬ್ಬರು ಭಾನುವಾರ ರಜಾ ದಿನವಾಗಿದ್ದರಿಂದ ಮೈಸೂರಿಗೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದಾಗ ಬೈಕ್‌ ನಿಯಂತ್ರಣ ತಪ್ಪಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಬಳಿ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಬೈಕ್‌ನ ಹಿಂಬದಿ ಕುಳಿತಿದ್ದ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಬೈಕ್ ಓಡಿಸುತ್ತಿದ್ದ ಯುವಕನ ಸ್ಥಿತಿ ಚಿಂತಾಜನಕವಾಗಿದ್ದು, ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿದೆ.

ಮೃತಪಟ್ಟ ಯುವತಿಯ ಶವವನ್ನು ಮದ್ದೂರು ಸಾರ್ವಜನಿಕ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಮದ್ದೂರು ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮೃತಪಟ್ಟ ಯುವತಿ ಪ್ರಿಯಾಂಕ ರಾಜು(32) ತಮಿಳುನಾಡು ಮೂಲದವಳಾಗಿದ್ದು, ಬೈಕ್‌ ಓಡಿಸುತ್ತಿದ್ದ ಯುವಕ ಹಾಸನದ ದಾಸನಕೊಪ್ಪಲು ನಿವಾಸಿ ಲಕ್ಷ್ಮೀನಾರಾಯಣ ಎನ್ನಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಎಂ ಕಚೇರಿಯ ಗಮನ ಸೆಳೆದ ಉಳ್ಳಾಲ ನಗರಸಭೆಯ ಕಸದ ವಾಹನ: ವಿಡಿಯೋ ವೈರಲ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚೆಗೆ(ನ.27) ನಡೆಸಿದ ಜನಸ್ಪಂದನಕ್ಕೆ ಅಭೂತಪೂರ್ವವಾದ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸತತ...

ಬೆಳಗಾವಿ | ಇಂಗ್ಲಿಷ್‌ ಬ್ಯಾನರ್ ಹರಿದು ಕರವೇ ಕಾರ್ಯಕರ್ತರ ಆಕ್ರೋಶ; ವಶಕ್ಕೆ ಪಡೆದ ಪೊಲೀಸರು

ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್ 4ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅದಕ್ಕೂ ಮುನ್ನ...

ಬೆಂಗಳೂರು | ಬ್ರ್ಯಾಂಡ್‌ ಹೆಸರು ಬಳಸಿ ನಕಲಿ ಬಟ್ಟೆ ತಯಾರು: ಸಿಸಿಬಿ ದಾಳಿ

ಅರ್ಮಾನಿ, ಲಿವೈಸ್, ಅಲ್ಲೆನ್ ಸೊಲ್ಲಿ, ಬುರ್ಬೆರಿ ಲೆದರ್ ಟ್ಯಾಗ್ಸ್, ಪೋಲೊ, ಎಲ್​ಪಿ...

ಮಂಡ್ಯ | ರಸ್ತೆಯಲ್ಲಿ ಸಂಚರಿಸುವ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

ಬೈಕ್​​ನಲ್ಲಿ ಬಂದು ರಸ್ತೆಯಲ್ಲಿ ಓಡಾಡುವ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ...