- ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್
- ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು
ನಿಯಂಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ, ಇಬ್ಬರು ವಿದ್ಯಾರ್ಥಿಗಳು ನಾಲೆಗೆ ಬಿದ್ದು ಮೃತಪಟ್ಟಿರುವ ಘಟನೆ ಮಂಡ್ಯ ತಾಲೂಕಿನ ಭೂತನಹೊಸೂರು ಬಳಿ ನಡೆದಿದೆ.
ಪ್ರಜ್ವಲ್ (18) ಮತ್ತು ವರುಣ್ (14) ಮೃತ ವಿದ್ಯಾರ್ಥಿಗಳು. ಪ್ರಜ್ವಲ್ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುತ್ತಿದ್ದರೆ, ವರುಣ್ ಏಳನೇ ತರಗತಿ ವಿದ್ಯಾರ್ಥಿಯಾಗಿದ್ದ.
ಭೂತನಹೊಸೂರು ಗ್ರಾಮದಿಂದ ಮಂಡ್ಯಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಬದಿಯ ಕಾಲುವೆಗೆ ಬಿದ್ದಿದೆ. ವರುಣ್ ಹಿಂಬದಿ ಕುಳಿತಿದ್ದು, ಆತನೂ ಕಾಲುವೆಗೆ ಬಿದ್ದಿದ್ದಾನೆ. ಇಬ್ಬರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಜೇನು ದಾಳಿ; ಆಸ್ಪತ್ರೆಯಲ್ಲೇ ಪರೀಕ್ಷೆ ಬರೆದ ವಿದ್ಯಾರ್ಥಿಗಳು
ಎಎಸ್‌ಪಿ ಸಿ ಇ ತಿಮ್ಮಯ್ಯ, ಡಿವೈಎಸ್‌ಪಿ ಓಂಪ್ರಕಾಶ್, ಇನ್ಸ್‌ಪೆಕ್ಟರ್ ಸಿದ್ದಪ್ಪ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಶವಗಳನ್ನು ಹೊರತೆಗೆದಿದ್ದಾರೆ. ಮಂಡ್ಯ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.