ಮಂಡ್ಯ | ರೇಷ್ಮೆ ಮನೆಗೆ ಬೆಂಕಿಹಚ್ಚಿದ ಕಿಡಿಗೇಡಿಗಳು; ದೂರು ದಾಖಲು

Date:

Advertisements

ರೇಷ್ಮೆ ಸಾಕಣೆ ಮನೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ಲಕ್ಷಾಂತರ ರೂಪಾಯಿ ಮೌಲ್ಯದ ರೇಷ್ಮೆ ಗೂಡು, ಚಂದ್ರಿಕೆ, ಕೃಷಿ ಉಪಕರಣ ಹಾಗೂ ರಸಗೊಬ್ಬರ ಸುಟ್ಟುಹೋಗಿರುವ ಘಟನೆ ಮಂಡ್ಯ ಮಳವಳ್ಳಿ ತಾಲೂಕು ಹೊಂಬೇಗೌಡನದೊಡ್ಡಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ನಾಗರಾಜು ಎಂಬ ರೈತನಿಗೆ ಸೇರಿದರೆ ರೇಷ್ಮೆ ಮನೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದೆ. ಗ್ರಾಮದ ಹೊರವಲಯದ ತಮ್ಮ ಜಮೀನಿನಲ್ಲಿ ರೇಷ್ಮೆ ಮನೆಗೆ ನಿರ್ಮಿಸಿಕೊಂಡು, ರೇಷ್ಮೆ ಮತ್ತು ಹೈನುಗಾರಿಕೆಯೊಂದಿಗೆ ನಾಗರಾಜು ಜೀವನ ನಡೆಸುತ್ತಿದ್ದರು.

ಕಳೆದ ಮೂರು ದಿನಗಳಿಂದ ರೇಷ್ಮೆ ಹುಳು ಹಣ್ಣಾಗಿ ಗೂಡು ಬಿಟ್ಟಿದ್ದವು. ಸೋಮವಾರ ರಾತ್ರಿ 9 ಗಂಟೆಯವರೆಗೂ ನಾಗರಾಜು ರೇಷ್ಮ ಮನೆಯಲ್ಲಿ ಇದ್ದು ಕೆಲಸ ಮಾಡುತ್ತಿದ್ದರು. ಮನೆಗೆ ಊಟಕ್ಕೆ ತೆರಳಿದ್ದ ಅವರು, ಮಳೆಯಿಂದ ವಾಪಸ್ಸಾಗಿರಲಿಲ್ಲ.

Advertisements

ತಡ ರಾತ್ರಿ ಯಾರು ಇಲ್ಲದ ವೇಳೆ ದುಷ್ಕರ್ಮಿಗಳು ರೇಷ್ಮೆ ಮನೆಗೆ ಬೆಂಕಿ ಹಚ್ಚಿದ್ದಾರೆ. ಬೆಂಕಿ ಹತ್ತಿ ಉರಿಯುತ್ತಿರುವುದನ್ನು ನೋಡಿದ ಸ್ಥಳೀಯರು ನಸುಕಿನ ಮೂರುಗಂಟೆ ಸುಮಾರಿಗೆ, ನಾಗರಾಜಗೆ ಕರೆ ಮಾಡಿ ತಿಳಿಸಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆಯಲ್ಲಿ 150 ಚಂದ್ರಿಕೆ ರೇಷ್ಮೆ ಗೂಡು, ರೇಷ್ಮೆ ಮನೆಯ ಗೋಡೆ, ಶೀಟ್‌ಗಳು, 20ಮೂಟೆ ರಸಗೊಬ್ಬರ ಬೆಂಕಿಗೆ ಸುಟ್ಟುಹೋಗಿವೆ. ನಸುಕಿನಲ್ಲಿ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಮಂಗಳವಾರ ರೇಷ್ಮೆ ಗೂಡು ಬಿಚ್ಚಬೇಕಾಗಿತ್ತು, ಅಷ್ಟರಲ್ಲಿ ಯಾರೂ ಕಿಡಿಗೇಡಿಗಳು ಬೆಂಕಿ ಹೆಚ್ಚಿದ್ದಾರೆ. ಸಾಲ ಮಾಡಿ ರೇಷ್ಮೆ ಮನೆ ನಿರ್ಮಿಸಿದ್ದೆ. ಬೆಂಕಿ ಇಟ್ಟು ನಮ್ಮ ಬದುಕನ್ನೇ ನಾಶ ಮಾಡಿದ್ದಾರೆ. ಬೆಂಕಿ ಹಚ್ಚಿರುವ ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ವಿಧಿಸಿ ಎಂದು ನಾಗರಾಜು ಕಣ್ಣೀರಾಗುತ್ತಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X