ಮಂಡ್ಯ | ಒಂದೇ ತಿಂಗಳಲ್ಲಿ ಎರಡು ಚಿರತೆಗಳ ಸೆರೆ

Date:

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಚಿಕ್ಕಮರಳಿ ಗ್ರಾಮದಲ್ಲಿ ಗ್ರಾಮಸ್ಥರನ್ನು ಕಾಡುತ್ತಿದ್ದ ಚಿರತೆಯನ್ನು ಸೆರೆಹಿಡಿಯುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಒಂದೇ ಸ್ಥಳದಲ್ಲಿ ಒಂದು ತಿಂಗಳೊಳಗೆ ಸಿಕ್ಕಿಬಿದ್ದ ಎರಡನೇ ಚಿರತೆ ಇದಾಗಿದೆ. ಅರಣ್ಯ ಸಿಬ್ಬಂದಿ ಮೇ 6ರಂದು ಒಂದು ಚಿರತೆಯನ್ನು ಹಿಡಿದಿದ್ದರು.

ಗ್ರಾಮದಲ್ಲಿ ಚಿರತೆ ಹಾವಳಿಯ ಬಗ್ಗೆ ಮಾಹಿತಿ ಪಡೆದ ಅರಣ್ಯ ಅಧಿಕಾರಿಗಳು ಮೇ 6 ರಂದು ಒಂದು ಚಿರತೆಯನ್ನು ಹಿಡಿದಿದ್ದರು. ಮತ್ತೊಂದು ಚಿರತೆ ಇರುವಿಕೆಯ ಬಗ್ಗೆ ಪದೇ ಪದೆ ದೂರುಗಳು ಬಂದ ಬಳಿಕ ಅಧಿಕಾರಿಗಳು ಮತ್ತೆ ಚಿರತೆ ಹಿಡಿಯಲು ಬಲೆ ಬೀಸಿದರು. ಅದರಲ್ಲಿ ಹೆಣ್ಣು ಚಿರತೆಯನ್ನು ಸೋಮವಾರ ಸೆರೆಹಿಡಿಯಲಾಗಿದೆ.

ಈ ಸುದ್ದಿ ಓದಿದ್ದೀರಾ? ಸಾಲು ಮರದ ತಿಮ್ಮಕ್ಕ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಸಿ ಸಿಎಂ ಆದೇಶ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚಿರತೆಯನ್ನು ಹಿಡಿಯಲಾಗಿದೆ ಎಂಬ ಸುದ್ದಿ ಹರಡುತ್ತಿದ್ದಂತೆ, ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದರು. ಬಳಿಕ ಅರಣ್ಯ ಅಧಿಕಾರಿಗಳು ಬೋನನ್ನು ಮತ್ತೊಂದು ಸ್ಥಳಕ್ಕೆ ಸ್ಥಳಾಂತರಿಸಿದರು. ಅಲ್ಲಿ ಚಿರತೆಗೆ ಪ್ರಥಮ ಚಿಕಿತ್ಸೆ ನೀಡಲಾಯಿತು. ಬಂಡೀಪುರ ಅಥವಾ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಚಿರತೆಯನ್ನು ಬಿಡಲಾಗುವುದು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಏ.26ರಂದು ಸರ್ಕಾರಿ ಮತ್ತು ಖಾಸಗಿ ಬಸ್‌ಗಳ ಸಂಚಾರ ವ್ಯತ್ಯಯ ಸಾಧ್ಯತೆ

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಈ...

ಲೋಕಸಭಾ ಚುನಾವಣೆ | ಏಪ್ರಿಲ್ 26 ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ

ಲೋಕಸಭಾ ಚುನಾವಣೆ ಹಿನ್ನೆಲೆ, ಏಪ್ರಿಲ್ 26ರಂದು ನಮ್ಮ ಮೆಟ್ರೋ ಸೇವೆ ವಿಸ್ತರಣೆ...

ಕರಗ ಮಹೋತ್ಸವ: ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ; ಓರ್ವ ಸಾವು

ಕಳೆದ ಒಂದು ವಾರದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ...

ರಾಯಚೂರು | ಕಾಂಗ್ರೆಸ್ ಸರ್ಕಾರ ಮಹಿಳೆಯರ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ: ಶರಣಮ್ಮ ಕಾಮರೆಡ್ಡಿಬಸ

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಮಹಿಳೆಯರ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ...