ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿರುವ ಡಾ ಹೆಚ್ ಎಲ್ ನಾಗರಾಜು ಅವರು ತಮ್ಮ ಹುದ್ದೆಯನ್ನು ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.
ಕೆಲವೇ ದಿನಗಳಲ್ಲಿ ಕೆಲಸ ಬಿಟ್ಟು ಸರ್ಕಾರಿ ಹುದ್ದೆಯಿಂದ ನಿವೃತ್ತಿ ಪಡೆದು ಸನ್ಯಾಸ ದೀಕ್ಷೆ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ.
ವಿಶ್ವ ಒಕ್ಕಲಿಗರ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಅವರೊಂದಿಗೆ ಸಂಪರ್ಕದಲ್ಲಿರುವ ಅವರು, ಈ ಹಿಂದೆಯೂ ಆಂದರೆ 2011ರಲ್ಲಿ ತಹಶೀಲ್ದಾರ್ ಆಗಿದ್ದ ಅವರು, ಆದಿಚುಂಚನಗಿರಿ ಮಠದಲ್ಲಿ ಸ್ವಾಮೀಜಿಯಾಗಿ ದೀಕ್ಷೆ ಪಡೆದಿದ್ದರು.
ಇದನ್ನು ಓದಿದ್ದೀರಾ? ಮದ್ದೂರು | ಮಣ್ಣಿನ ಆರೋಗ್ಯ, ರೈತರ ಕಲ್ಯಾಣಕ್ಕೆ ಸರ್ಕಾರ ಗಮನಹರಿಸಲಿ: ಚಂದನ್ ಗೌಡ
‘ನಿಶ್ಚಲಾನಂದನಾಥ’ ಎಂದು ಹೆಸರು ಬದಲಾವಣೆ ಮಾಡಿಕೊಂಡಿದ್ದರು. ಆದರೆ ಹಿತೈಷಿಗಳು, ಸಾರ್ವಜನಿಕರ ಒತ್ತಾಯಕ್ಕೆ ಮಣಿದು ಸನ್ಯಾಸತ್ವ ತ್ಯಜಿಸಿ ಮತ್ತೆ ಅಧಿಕಾರ ವಹಿಸಿಕೊಂಡಿದ್ದರು. ಈಗ ಮತ್ತೆ ಸನ್ಯಾಸತ್ವ ಸ್ವೀಕರಿಸಲಿದ್ದಾರೆ ಎಂದು ತಿಳಿದುಬಂದಿದೆ.