ಇಂದು ವಿಶ್ವ ಜನಸಂಖ್ಯಾ ದಿನದ ಪ್ರಯುಕ್ತ ಮಂಡ್ಯ ಪಟ್ಟಣದಲ್ಲಿ ಮೈಸೂರಿನ ಶೇಷಾದ್ರಿಪುರಂ ಇಂಜಿನಿಯರಿಂಗ್ ಕಾಲೇಜಿನ ಎನ್‌ಎಸ್‌ಎಸ್ ಘಟಕ, ರೋಟರಿ ಕ್ಲಬ್ ಶ್ರೀರಂಗಪಟ್ಟಣ, ಅಚೀವರ್ಸ್ ಅಕಾಡೆಮಿ, ಹಾಗೂ ಶಾರದಾ ವಿಲಾಸ್ ಕಾನೂನು ಕಾಲೇಜಿನ ಎನ್ಎಸ್ಎಸ್ ಘಟಕದ ವತಿಯಿಂದ ಜಾಗೃತಿ ಜಾಥಾವನ್ನ ಹಮ್ಮಿಕೊಳ್ಳಲಾಯಿತು.
ಈ ಜಾಥಾಕ್ಕೆ ಶೇಷಾದ್ರಿಪುರಂ ಇಂಜಿನಿಯರಿಂಗ್ ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಹಾಗೂ ರಾಷ್ಟ್ರ ಪ್ರಶಸ್ತಿ ವಿಜೇತ ಡಾ. ರಾಘವೇಂದ್ರ ಹಸಿರು ನಿಶಾನೆ ತೋರುವ ಮುಖಾಂತರ ಚಾಲನೆ ನೀಡಿ ಮಾತನಾಡಿದರು.
“ಜುಲೈ 11ರಂದು ಪ್ರತಿವರ್ಷ ‘ವಿಶ್ವ ಜನಸಂಖ್ಯಾ ದಿನ’ವನ್ನು ಆಚರಿಸಲಾಗುತ್ತದೆ. ಜಾಗತಿಕವಾಗಿ ಜನಸಂಖ್ಯೆ ಏರುತ್ತಿರುವ ವೇಗ ನೋಡಿ ವಿಶ್ವಸಂಸ್ಥೆ 1987ರ ವರ್ಷದಲ್ಲಿ ಈ ವಿಶ್ವ ಜನಸಂಖ್ಯಾ ದಿನಾಚರಣೆಗೆ ಮುನ್ನುಡಿ ಬರೆಯಿತು. ಆ ದಿನದಂದು ವಿಶ್ವದ ಜನಸಂಖ್ಯೆ 5 ಬಿಲಿಯನ್ ತಲುಪಿತಂತೆ. ಹೀಗೆ ಈ ದಿನವನ್ನು ಆಚರಿಸುವುದರ ಮೂಲಕ ವಿಶ್ವದಲ್ಲಿ ಜನಸಂಖ್ಯೆಯ ಕುರಿತಾದ ವಿವಿಧ ಸಮಸ್ಯೆಗಳ ಕುರಿತಾಗಿ ವಿಶ್ವ ಸಮುದಾಯದ ಗಮನ ಸೆಳೆಯುವುದು ಈ ಆಚರಣೆಯ ಪ್ರಮುಖ ಉದ್ದೇಶವಾಗಿದ್ದು ಈ ದಿನ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೇವೆ” ಎಂದು ಹೇಳಿದರು.
ಇದನ್ನೂ ಓದಿ: ಮಂಡ್ಯ | ಕೃಷಿಯೇ ನಮ್ಮ ಭವಿಷ್ಯ: ಕವಿತಾ ಕುರುಗಂಟಿ ಅಭಿಮತ
ಜಾಥಾದಲ್ಲಿ ಶ್ರೀರಂಗಪಟ್ಟಣದ ರೋಟರಿಯ ಕಾರ್ಯದರ್ಶಿ ಎನ್ ನಾಗೇಂದ್ರ, ಸಹ ಕಾರ್ಯದರ್ಶಿ ರಾಜೇಶ್, ಉದ್ಯೋಗ ದಾತ ಸಂಸ್ಥೆಯ ಅಧ್ಯಕ್ಷ ರುಕ್ಮಾಂದ, ಶಾರದಾ ವಿಲಾಸ್ ಕಾನೂನು ಕಾಲೇಜಿನ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಸವಿತಾ, ಓಂಶ್ರೀ ನಿಕೇತನ ಶಾಲೆಯ ಮುಖ್ಯೋಪಾಧ್ಯಾಯ ಶಿವಕುಮಾರ್, ನಾರಾಯಣ, ಪುನೀತ್, ರವಿ, ಎನ್ಎಸ್ಎಸ್ ವಿದ್ಯಾರ್ಥಿಗಳು ಹಾಗೂ ಇತರರು ಪಾಲ್ಗೊಂಡಿದ್ದರು.