ಮಂಡ್ಯ | ಜೀವಪರ ಕಾವ್ಯದ ಸೃಷ್ಟಿಗೆ ಯುವ ಕವಿಗಳು ಮುಂದಾಗಬೇಕು: ಸಾಹಿತಿ ಸತೀಶ್ ಜವರೇಗೌಡ

Date:

“ಸಮಾಜದಲ್ಲಿ ಇರುವ ಜನ ಸಮುದಾಯವನ್ನು ಸತ್ಪಥದಲ್ಲಿ ನಡೆಸುವ, ಸತ್ಯದ ನೆಲೆಯೆಡೆಗೆ ಕೊಂಡೊಯ್ಯುವ, ಮಾನವೀಯ ಮೌಲ್ಯಗಳನ್ನು ಬೆಳೆಸಬೇಕು. ಜೀವಪರ ಕಾವ್ಯದ ಸೃಷ್ಟಿಗೆ ಯುವ ಕವಿಗಳು ಮುಂದಾಗಬೇಕು” ಎಂದು ದಸರಾ ಯುವ ಕವಿಗೋಷ್ಠಿಯಲ್ಲಿ ಸಾಹಿತಿ ಟಿ. ಸತೀಶ್ ಜವರೇಗೌಡ ಕರೆ ನೀಡಿದರು.

- Advertisement -

ಕನ್ನಡ ಸಾಹಿತ್ಯ ಪರಿಷತ್ತು, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಸಹಯೋಗದಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ  ‘ನಾಡಹಬ್ಬ ಶ್ರೀರಂಗಪಟ್ಟಣ ದಸರಾ ಮಹೋತ್ಸವ’ದ ಅಂಗವಾಗಿ ಪರಿವರ್ತನಾ ಕಾಲೇಜಿನಲ್ಲಿ ‘ದಸರಾ ಯುವ ಕವಿಗೋಷ್ಠಿ’ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

“ಸಮಾಜದಲ್ಲಿ ಹಿಂಸೆ ಮತ್ತು ಕ್ರೌರ್ಯದ ವಿಕೃತ ಮನೋಭಾವ ಹೆಚ್ಚುತ್ತಿದೆ. ಇದರಿಂದ ಮಹಿಳೆಯರ ಮೇಲಿನ ದೌರ್ಜ್ಯನ ಮತ್ತು ಕೋಮು-ಗಲಭೆಗಳು ಹೆಚ್ಚಾಗುತ್ತವೆ. ಹಾಗಾಗಿ ಸಮಾಜದಲ್ಲಿ ಸೌಹಾರ್ದತೆಗೆ ಧಕ್ಕೆ ಉಂಟಾಗುತ್ತಿದ್ದು, ಅಪಾಯಕಾರಿ ಬೆಳವಣಿಗೆ ಹೆಚ್ಚುತ್ತಿದೆ” ಎಂದರು.

“ಸಾಹಿತ್ಯದ ಮೂಲಕ ಸಾಮಾಜಿಕ ಪರಿವರ್ತನೆ ಸಾಧ್ಯವಿದೆ. ಆದ್ದರಿಂದ ಕವಿಗಳು ಜವಾಬ್ದಾರಿಯಿಂದ ಕಾವ್ಯ ರಚಿಸಬೇಕು. ಜಾತಿ, ಮತ, ಪಂಥ, ಪಕ್ಷ, ವೈಯಕ್ತಿಕ ನೆಲೆಗಳನ್ನು ಮೀರಿ ವಿಶ್ವಾತ್ಮಕ ನೆಲೆಯಲ್ಲಿ ಕಾವ್ಯ ರಚಿಸಬೇಕು. ಆಗ ಉತ್ತಮವಾದ ಸಮಾಜಮುಖಿ ಮತ್ತು ಜೀವನ್ಮುಖಿಯಾದ ಕಾವ್ಯ ಸೃಷ್ಟಿಯಾಗುತ್ತದೆ. ಕವಿಗಳು ಸಾಹಿತ್ಯ ಪ್ರತಿಭೆಯ ಅಭಿವ್ಯಕ್ತಿಗೆ ಸಾಮಾಜಿಕ ಜಾಲತಾಣ ಮುಕ್ತ ವೇದಿಕೆಯನ್ನು ಕಲ್ಪಿಸಿದೆ. ಇದನ್ನು ಸಮರ್ಥವಾಗಿ ಬಳಸಿಕೊಂಡು ಸಹೃದಯರಿಗೆ ಸಾಹಿತ್ಯ ತಲುಪಿಸಬೇಕು. ಆದರೆ ಬರೆದುದ್ದೆಲ್ಲವನ್ನು ಪ್ರಕಟಿಸುವ ಮುನ್ನ ತಿದ್ದಿ ತೀಡಿ ಸಂಯಮದಿಂದ ಪರಿಷ್ಕರಿಸಬೇಕು. ಆಗ ಸಾಹಿತ್ಯಕ್ಕೆ ಗಟ್ಟಿತನ ಬರುತ್ತದೆ” ಎಂದು ಯುವ ಕವಿಗಳಿಗೆ ಸಜಗೌ ಅವರು ಸಲಹೆ ನೀಡಿದರು.

ಯುವ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿದ್ದ ಹಿರಿಯ ಸಾಹಿತಿ ಸಾ.ವೆ.ರಾ. ಸ್ವಾಮಿ‌ ಮಾತನಾಡಿ, “ಕವಿಗಳು ತಮ್ಮ ಅನುಭವಗಳನ್ನು ಕಾವ್ಯದಲ್ಲಿ ತರಬೇಕು. ಬೇರೆಯವರ ನೋವುಗಳನ್ನು ತಮ್ಮದೆಂದು ಪರಿಭಾವಿಸಿ ಬರೆಯಬೇಕು. ಆಗ ಉತ್ತಮ ಕಾವ್ಯವಾಗುತ್ತದೆ ಎಂದರು.

ಯುವ ಕವಿಗೋಷ್ಠಿಯನ್ನು ಕಾಟಾಚಾರಕ್ಕೆ ಯೋಜಿಸಬಾರದು. ಇದನ್ನು ಕಾಲೇಜು ಸಭಾಂಗಣದಲ್ಲಿ ಆಯೋಜಿಸುವ ಬದಲು ಶ್ರೀರಂಗ ಮುಖ್ಯ ವೇದಿಕೆಯಲ್ಲಿ ವ್ಯವಸ್ಥೆ ಮಾಡಬೇಕಿತ್ತು. ಕವಿಗಳನ್ನು‌ ಗೌರವಪೂರ್ವಕವಾಗಿ ಆಹ್ವಾನಿಸಬೇಕು. ಕವಿಗಳಿಗೆ ಸಕಾಲಕ್ಕೆ ಆಹ್ವಾನ ಪತ್ರಿಕೆಯನ್ನು ತಲುಪಿಸಬೇಕಿತ್ತು ಎಂದು ಸಾಹಿತಿ ಸಾ.ವೆ.ರಾ. ಸ್ವಾಮಿ ಆಯೋಜಕರ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಮನಗರ | ಗಿಡ ನೆಡುವ ಮೂಲಕ ಜಯಕರ್ನಾಟಕ ಜನಪರ…

ವೇದಿಕೆಯಲ್ಲಿ‌ ಜಿಲ್ಲಾ ಕಸಾಪ ಅಧ್ಯಕ್ಷೆ ಡಾ. ಮೀರಾ ಶಿವಲಿಂಗಯ್ಯ, ಗೌರವ ಕಾರ್ಯದರ್ಶಿ  ಡಾ. ಹುಸ್ಕೂರು ಕೃಷ್ಣೇಗೌಡ, ತಾಲ್ಲೂಕು ಅಧ್ಯಕ್ಷ ಸಿದ್ದಲಿಂಗು, ನಿಕಟಪೂರ್ವ ಅಧ್ಯಕ್ಷ ಎಂ.ಬಿ. ಕುಮಾರ್, ಪದಾಧಿಕಾರಿಗಳಾದ ಸಿ. ಸ್ವಾಮಿಗೌಡ, ಗಂಜಾಂ ಸುರೇಶ್, ಕೆ.ಬಿ. ಬಸವರಾಜ್ ಉಪಸ್ಥಿತರಿದ್ದರು. ಇಪ್ಪತ್ತಕೂ ಹೆಚ್ಚಿನ‌ ಕವಿಗಳು ತಮ್ಮ ಕವನಗಳ ವಾಚಿಸಿ ಗಮನ ಸೆಳೆದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...

ಉಡುಪಿ | ಡಾ.ಮೆಹೆವಿಶ್ ಮುಶೀರ್ ಶೇಖ್‌ಗೆ ಪಿಎಚ್‌ಡಿ ಪದವಿ

ಡಾ. ಮಮತಾ ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ಹಾಗೂ ಡಾ. ನರೇಂದ್ರ ವಿ.ಜಿ....

ಯಾದಗಿರಿ | ₹2,500 ಬೆಳೆನಷ್ಟ ಪರಿಹಾರ ರೈತರ ನೋವಿಗೆ ಅವಮಾನ: ಭೀಮರಾಯ ಎಲ್ಹೇರಿ

ರಾಜ್ಯ ಸರ್ಕಾರ ರೈತರ ಬೆಳೆನಷ್ಟಕ್ಕೆ ಕೇವಲ ₹2,500 ಪರಿಹಾರ ಘೋಷಿಸಿರುವುದು ರೈತರ...

ಕಲಬುರಗಿ | ವರದಕ್ಷಿಣೆ ಕಿರುಕುಳ ಆರೋಪ; ಮಹಿಳೆ ಅನುಮಾನಾಸ್ಪದ ಸಾವು!

ವರದಕ್ಷಿಣೆ ಕಿರುಕುಳದ ಆರೋಪದ ನಡುವೆ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಗರದ...