ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದಾಗಿ ಆರೋಪ: ನೇಣು ಕುಣಿಕೆ ಹಿಡಿದು ರೈತರ ಪ್ರತಿಭಟನೆ

Date:

ಮುಂಗಾರು ಕೊರತೆಯಿಂದ ನೀರಿಲ್ಲದೆ ಬರಿದಾಗಿರುವ ಕೆಆರ್‌ಎಸ್‌ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಆರೋಪಿಸಿ ರೈತಸಂಘ ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಸೋಮವಾರ ಶ್ರೀರಂಗಪಟ್ಟಣ ಮತ್ತು ಮಂಡ್ಯ ನಗರದಲ್ಲಿ ಪ್ರತಿಭಟನೆ ನಡೆಸಿದರು.

- Advertisement -

ಭೂಮಿತಾಯಿ ಹೋರಾಟ ಸಮಿತಿ ಕಾರ್ಯಕರ್ತರು ಶ್ರೀರಂಗಪಟ್ಟಣದ ಮಿನಿವಿಧಾನಸೌಧದ ಎದುರು ನೇಣು ಕುಣಿಕೆ ಹಿಡಿದು ಪ್ರತಿಭಟನೆ ನಡೆಸಿದ್ದು, ರಾಜ್ಯ ಸರ್ಕಾರ ಕದ್ದುಮುಚ್ಚಿ ತಮಿಳುನಾಡಿಗೆ ನೀರು ಹರಿಸುತ್ತಿದೆ ಎಂದು ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ರೈತ ನಾಯಕ ಕೆ ಎಸ್‌ ನಂಜುಂಡೇಗೌಡ ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಕೆಆರ್‌ಎಸ್‌ ಅಣೆಕಟ್ಟೆಯಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಮೂಲಕ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ಆರನೇ ಗ್ಯಾರಂಟಿ ನೇಣಿನ ಭಾಗ್ಯ ಕೊಟ್ಟಿದೆ. ಕಳೆದ ಮೂರು ದಿನಗಳಿಂದ ತಮಿಳುನಾಡಿಗೆ ನಿರಂತರವಾಗಿ ನೀರು ಹರಿದು ಹೋಗುತ್ತಿದೆ. ಆದರೂ ತಮಿಳುನಾಡಿಗೆ ನೀರು ಬಿಟ್ಟಿಲ್ಲವೆಂದು ಜಲಸಂಪನ್ಮೂಲ ಸಚಿವ ಎನ್‌ ಚಲುವರಾಯಸ್ವಾಮಿ ಸುಳ್ಳು ಹೇಳುತ್ತಿದ್ದಾರೆ. ಇಂಥವರು ನಮ್ಮ ಜಿಲ್ಲೆಯ ಸಚಿವರಾಗಿರುವುದು ನಮ್ಮ ದುರ್ದೈವ” ಎಂದು ಟೀಕಿಸಿದರು.

“ಯಾವುದೇ ಪಕ್ಷಗಳು ಅಧಿಕಾರಕ್ಕೆ ಬಂದರೂ ತಮ್ಮ ಕುರ್ಚಿಗಳನ್ನು ಗಟ್ಟಿಗೊಳಿಸಿಕೊಳ್ಳುವತ್ತ ಬ್ಯುಸಿಯಾಗಿರುತ್ತಾರೆಯೇ ಹೊರತು, ರೈತರ ಬಗ್ಗೆ ಯಾವುದೇ ಹಿತ ಕಾಯುವುದಿಲ್ಲ. ಇವರಿಗೆ ಬೇಕಾದಂತೆ ನ್ಯಾಯ ಮಂಡಳಿಗಳನ್ನು ಸ್ಥಾಪಿಸಿಕೊಂಡು ತಮಿಳಿಗರ ಓಲೈಕೆ ಮಾಡಲು ಮುಂದಾಗಿರುವ ಸರ್ಕಾರ, ರಾಜ್ಯದ ರೈತರ ಕೊರಳಿಗೆ ಉರುಳಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಮಳೆಗಾಲದಲ್ಲಿ ನೀರನ್ನು ಹೇಗೆ ಸಂಗ್ರಹಿಸಿಟ್ಟುಕೊಳ್ಳಬೇಕು ಎಂಬುದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳದ ಆಡಳಿತಗಾರರು, ಬರಗಾಲದ ಸಮಯದಲ್ಲಿ ಒಡೆದಾಳುವ ನೀತಿ ಅನುಸರಿಸುತ್ತವೆ. ರೈತನಿಗೆ ಬರಗಾಲ ಬಂದರೂ ನಷ್ಟ, ಮಳೆಗಾಲವಿದ್ದು, ಉತ್ತಮ ಬೆಳೆ ಬಂದರೂ ಲಾಭವಿಲ್ಲದ ನಷ್ಟ. ಪ್ರಾಮಾಣಿಕವಾಗಿ ದೇಶಕ್ಕಾಗಿ ದುಡಿಯುವ ರೈತ ಇಂದು ಬಡವನಾಗುತ್ತಿದ್ದಾನೆ… ಆತ್ಮಹತ್ಯೆಗೆ ಶರಣಾಗುತ್ತಿದ್ದಾನೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ತಮಿಳುನಾಡಿನ ಮೇಲ್ಮವಿ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಮುಂದೆ ರಾಜ್ಯ ಸರ್ಕಾರ ರಾಜ್ಯದ ಬರ ಸ್ಥಿತಿಯ ಬಗ್ಗೆ ವಾಸ್ತವಾಂಶಗಳನ್ನು ಮನವರಿಕೆ ಮಾಡಿಕೊಡುವಲ್ಲಿ ವಿಫಲವಾಗಿದೆ. ಹಾಗಾಗಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪಾಲಿಸುವಂತೆ ಸುಪ್ರೀಂ ಕೋರ್ಟ್‌ ಸೋಮವಾರ ಸೂಚಿಸಿದೆ. ಸರ್ಕಾರಕ್ಕೆ ರೈತರ ಬಗ್ಗೆ ನಿಜವಾದ ಕಾಳಜಿ ಇದ್ದರೆ ಪ್ರಾಧಿಕಾರದ ಆದೇಶವನ್ನು ಪಾಲಿಸುವುದಿಲ್ಲವೆಂದು ಹೇಳುವ ಧೈರ್ಯ ಪ್ರದರ್ಶಿಸಬೇಕು. ಆಗದಿದ್ದರೆ ತಾವು ಅಸಮರ್ಥರೆಂದು ಮುಖ್ಯಮಂತ್ರಿ ಮತ್ತು ಜಲ ಸಂಪನ್ಮೂಲ ಸಚಿವರು ರಾಜ್ಯದ ಜನರ ಕ್ಷಮೆ ಕೇಳಬೇಕು” ಎಂದು ಆಗ್ರಹಿಸಿದರು.

ಮಂಡ್ಯ ನಗರದಲ್ಲಿಯೂ ರೈತಸಂಘ, ಕನ್ನಡ ಸೇನೆ ಮತ್ತು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, “ರಾಜ್ಯ ಸರ್ಕಾರ ರೈತರ ಹಿತ ಕಾಪಾಡುವಲ್ಲಿ ವಿಫಲವಾಗಿದೆ” ಎಂದು ದೂರಿದರು.

ಈ ಸುದ್ದಿ ಓದಿದ್ದೀರಾ? ಹನೂರು | ಗುಂಡಿನ ದಾಳಿ ಪ್ರಕರಣ: ಮೃತರ ಕುಟುಂಬಸ್ಥರಿಗೆ ತಲಾ 15 ಲಕ್ಷ ರೂ. ಪರಿಹಾರ ವಿತರಣೆ

ಟೈರಿಗೆ ಬೆಂಕಿ ಹಚ್ಚಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ತಡೆಯುವ ವೇಳೆ ತಳ್ಳಾಟ, ನೂಕಾಟ ಉಂಟಾಗಿದ್ದು, ಇದೇ ಸಂದರ್ಭ ಪಿಎಸ್‌ಐ ಮಣಿ ಅವರ ಕೈಗೆ ಗಾಯವಾಯಿತು.

ಭೂಮಿತಾಯಿ ಹೋರಾಟ ಸಮಿತಿಯ ಅಧ್ಯಕ್ಷ ಬಿ ಸಿ ಕೃಷ್ಣೇಗೌಡ ಮಾತನಾಡಿ, “ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಪ್ರಾಧಿಕಾರ ನೀಡಿರುವ ಆದೇಶ ಪಾಲಿಸುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿರುವುದು ಆಘಾತ ಉಂಟುಮಾಡಿದೆ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...

ಉಡುಪಿ | ಆತ್ಮಪರಿಚಯದತ್ತ ಕರೆದೊಯ್ಯುವ ಗಾಂಧೀ ಚಿಂತನೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಡಾ. ಶಿವರಾಮ ಕಾರಂತ ಟ್ರಸ್ಟ್ ಹಾಗೂ...