ನಗರಸಭೆಗೆ ಗೆಜ್ಜಲಗೆರೆ ಸೇರ್ಪಡೆ ಸ್ವಾಭಾವಿಕ ಪ್ರಕ್ರಿಯೆ; ಶಾಸಕರ ಮೇಲಿನ ರಿಯಲ್ ಎಸ್ಟೇಟ್ ಆರೋಪ ನಿರಾಧಾರ: ಎಚ್ ಎಲ್ ಸತೀಶ್

Date:

ಗೆಜ್ಜಲಗೆರೆ ಕೈಗಾರಿಕಾ ಪ್ರದೇಶವಾಗಿ ಅಭಿವೃದ್ಧಿಯಾಗುವ ಮೊದಲೇ ಅಲ್ಲಿ ಭೂಮಿಯ ಬೆಲೆ ಏರಿಕೆಯಾಗಿತ್ತು ಮತ್ತು ಇದು ಸ್ವಾಭಾವಿಕ ಪ್ರಕ್ರಿಯೆಯೇ ಹೊರತು ಯಾವುದೇ ವ್ಯಕ್ತಿಯ ಲಾಭಕ್ಕಾಗಿ ಅಲ್ಲ. ಶಾಸಕರು ರಿಯಲ್ ಎಸ್ಟೇಟ್ ಲಾಭಕ್ಕಾಗಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಆರೋಪಗಳನ್ನು ಕಾಂಗ್ರೆಸ್ ಮುಖಂಡ ಎಚ್ ಎಲ್ ಸತೀಶ್ ತಳ್ಳಿಹಾಕಿದರು.

- Advertisement -

ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಗ್ರಾಮವನ್ನು ಮದ್ದೂರು ನಗರಸಭೆಗೆ ಸೇರ್ಪಡೆಗೊಳಿಸಿರುವುದಕ್ಕೆ ಬೆಂಬಲ ವ್ಯಕ್ತಪಡಿಸಿ ಯುವ ಕಾಂಗ್ರೆಸ್ ಮುಖಂಡರು ಮದ್ದೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ಗೆಜ್ಜಲಗೆರೆಯು ಈಗಾಗಲೇ ನಗರದ ಸ್ವರೂಪ ಪಡೆದುಕೊಂಡಿದ್ದು, ಕೆಎಂಎಫ್ ಡೈರಿ ಮತ್ತು ವಿವಿಧ ಕೈಗಾರಿಕೆಗಳಿಂದಾಗಿ ಸಾವಿರಾರು ಜನರಿಗೆ ಉದ್ಯೋಗ ನೀಡುತ್ತಿದೆ. ಇದನ್ನು ನಗರಸಭೆಗೆ ಸೇರಿಸುವುದರಿಂದ ಸರ್ಕಾರದಿಂದ ಹೆಚ್ಚಿನ ಅನುದಾನ ಲಭ್ಯವಾಗಿ ಮೂಲಸೌಕರ್ಯಗಳು ಮತ್ತಷ್ಟು ಅಭಿವೃದ್ಧಿಯಾಗಲಿವೆ” ವಾದಿಸಿದರು.

“ಒಂದು ಪ್ರದೇಶದಲ್ಲಿ ಇರುವ ಜನಸಂಖ್ಯೆ ಮತ್ತು ಆದಾಯದ ಆಧಾರದ ಮೇಲೆ ಅದನ್ನು ನಗರಸಭೆಗೆ ಸೇರಿಸುವ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಗೆಜ್ಜಲಗೆರೆಯು ಈ ಎಲ್ಲ ಮಾನದಂಡಗಳನ್ನು ಪೂರೈಸಿದೆ” ಎಂದು ಮುಖಂಡರು ಸ್ಪಷ್ಟಪಡಿಸಿದರು.

“ಗೆಜ್ಜಲಗೆರೆಯ ಕೆಲವು ನಿವಾಸಿಗಳು ನಡೆಸುತ್ತಿರುವ ಪ್ರತಿಭಟನೆಯು ರಾಜಕೀಯ ಪ್ರೇರಿತವಾಗಿದೆ. ಅಭಿವೃದ್ಧಿಯನ್ನು ಸಹಿಸದ ಕೆಲವರು ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ” ಎಂದು ಟೀಕಿಸಿದರು.

ಈ ಹಿಂದೆ ಮಾಜಿ ಮುಖ್ಯಮಂತ್ರಿಗಳಾದ ಎಸ್ ಎಂ ಕೃಷ್ಣ ಮತ್ತು ಎಚ್ ಡಿ ಕುಮಾರಸ್ವಾಮಿಯವರ ಅವಧಿಯಲ್ಲಿ ನಡೆದ ಅಭಿವೃದ್ಧಿ ಕೆಲಸಗಳನ್ನು ಸ್ಮರಿಸಿದ ಮುಖಂಡರು, ಮದ್ದೂರನ್ನು ದೊಡ್ಡ ಮಟ್ಟದ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಈ ಸೇರ್ಪಡೆ ಅತಿ ಅಗತ್ಯವಾಗಿದೆ ಎಂದು ಒತ್ತಿ ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಾರವಾರ | ಶ್ವಾನ ಪ್ರದರ್ಶನಕ್ಕೆ ಪ್ರಾಣಿ ಪ್ರಿಯರು ಫಿದಾ: 118 ಶ್ವಾನಗಳ ಕೌಶಲ್ಯ ಕಂಡು ಜನ ಮಂತ್ರಮುಗ್ಧ

ಈ ಸುದ್ದಿಗೋಷ್ಠಿಯಲ್ಲಿ ರವಿಶಂಕರ್ ಚಾಮನಹಳ್ಳಿ, ಎಸ್ ಸಿ ಎಸ್ ಟಿ ಅಧ್ಯಕ್ಷ ಮಹಾದೇವಯ್ಯ, ಪ್ರಧಾನ ಕಾರ್ಯದರ್ಶಿ ತಿಪ್ಪೂರು ಮನು, ಪ್ರಚಾರ ಸಮಿತಿ ಅಧ್ಯಕ್ಷ ನಿತಿನ್‌ಗೌಡ, ಹುಲಿಗೆರೆಪುರ ರವಿ, ರಾಜೇಗೌಡ ಅಪ್ಪಾಜಿ, ಬಸವರಾಜ ಅಜ್ಜಹಳ್ಳಿ, ಮನು ಅಜ್ಜಹಳ್ಳಿ, ನಗರಕೆರೆ ಪುಟ್ಟೇಗೌಡ, ಯಡಗನಹಳ್ಳಿ ಮಹಾಲಿಂಗ, ಹರವನಳ್ಳಿ ಸಿದ್ದರಾಜು, ವಕೀಲರಾದ ಕೊಪ್ಪ ದೇವರಾಜು, ಅಲೋಕ್ ವಳಗೆರೆಹಳ್ಳಿ, ಅಶೋಕ್ ಚಾಮನಹಳ್ಳಿ, ಶಿವರಾಜ್ ಮದ್ದೂರು, ಪಣ್ಣೆದೊಡ್ಡಿ ರಾಜೇಶ್, ಆಲೂರ್ ಕುಮಾರ್ ಇನ್ನೂ ಮುಂತಾದ ಯುವ ಕಾಂಗ್ರೆಸ್ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯದ ನ್ಯೂ ತಮಿಳು ಕಾಲೊನಿಯಲ್ಲಿ ‘SIR’ ಗೊಂದಲ: 207 ಮತದಾರರು ಎಲ್ಲಿ ಹೋದರು?

ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR) ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ...

ಬರದ ನೆರಳಲ್ಲಿ 101 ತಾಲ್ಲೂಕುಗಳು; ಮೈಸೂರು-ಚಾಮರಾಜನಗರ-ಮಂಡ್ಯದಲ್ಲಿ ರೈತರ ಬದುಕಿಗೆ ಕಠಿಣ ಸವಾಲು

ಕರ್ನಾಟಕದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿರುವುದು ಕೇವಲ ಮಳೆ ಕಡಿಮೆಯಾಗಿದೆ...

ಶ್ರೀರಂಗಪಟ್ಟಣ | ಇದು ಸ್ಟಾರ್ ಪವರ್ ಪಕ್ಷವಲ್ಲ, ಸಮ ಸಮಾಜದ ಪಕ್ಷ: ಚೇತನ್ ಅಹಿಂಸಾ

ಕರ್ನಾಟಕದಲ್ಲಿ ಆಡಳಿತ ನಡೆಸಿದ ಎಲ್ಲ ಪಕ್ಷಗಳು ಜನರ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ...

ಮಳೆಯೂ ಇಲ್ಲ, ಬೆಳೆಯೂ ಇಲ್ಲ; ಕಾವೇರಿ ಹರಿದಿದ್ದು ತಮಿಳುನಾಡಿನತ್ತ-ರೈತನ ಬದುಕಿನ ಮುಂದಿನ ದಾರಿ ಏನು?

ಮಳೆ ಕೈಕೊಟ್ಟಿದೆ. ಹೊಲದಲ್ಲಿ ಬೆಳೆ ಕಾಣುತ್ತಿಲ್ಲ. ಕೆರೆ-ಕಟ್ಟೆಗಳು ತುಂಬಿಲ್ಲ. ಜಾನುವಾರುಗಳಿಗೆ ಮೇವು...