ಗೆಜ್ಜಲಗೆರೆ ನಗರಸಭೆಗೆ ಸೇರ್ಪಡೆ: ಜನರ ಆಶೋತ್ತರದ ವಿರುದ್ಧ ನಿರ್ಣಯಕ್ಕೆ ಸುನಂದಮ್ಮ ಜಯರಾಮ್ ಆಕ್ರೋಶ

Date:

​ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಯ ಮಣ್ಣಿನ ಗುಣ ಹೋರಾಟ ರೂಪದ್ದು. ನಮ್ಮ ಗ್ರಾಮದ ಸ್ವಾಯತ್ತತೆಯನ್ನು ಉಳಿಸಿಕೊಳ್ಳಲು ನಾವು ಯಾವುದೇ ತ್ಯಾಗಕ್ಕೂ ಸಿದ್ಧ. ಹೀಗಿರುವಾಗ ಗ್ರಾಮದ ಅಸ್ಮಿತೆ ಮತ್ತು ರೈತರ ಹಿತಾಸಕ್ತಿಯನ್ನು ಬಲಿಕೊಡುವ ಸರಕಾರದ ನಿರ್ಧಾರ ಖಂಡನೀಯ ಎಂದು ರೈತ ಹೋರಾಟಗಾರ್ತಿ ಸುನಂದಮ್ಮ ಜಯರಾಮ್ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಗೆಜ್ಜಲಗೆರೆ ಗ್ರಾಮವನ್ನು ಮದ್ದೂರು ನಗರಸಭೆಗೆ ಸೇರ್ಪಡೆಗೊಳಿಸಿರುವ ಸರ್ಕಾರದ ನಿರ್ಣಯವನ್ನು ವಿರೋಧಿಸಿ ನಡೆಯುತ್ತಿರುವ ನಿರಂತರ ಧರಣಿ ಸತ್ಯಾಗ್ರಹದಲ್ಲಿ ಮಾತನಾಡಿದ ಅವರು, “​ಗೆಜ್ಜಲಗೆರೆ ಗ್ರಾಮಸ್ಥರ ಅಭಿಪ್ರಾಯವನ್ನು ಪಡೆಯದೆ, ಏಕಪಕ್ಷೀಯವಾಗಿ ಗ್ರಾಮವನ್ನು ನಗರಸಭೆಗೆ ಸೇರಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮ” ಎಂದು ಸುನಂದಮ್ಮ ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿದ್ದಾಗ ಸಿಗುತ್ತಿದ್ದ ಸೌಲಭ್ಯಗಳು ಮತ್ತು ರೈತಾಪಿ ವರ್ಗದ ಹಕ್ಕುಗಳು ನಗರಸಭೆ ವ್ಯಾಪ್ತಿಗೆ ಬಂದಾಗ ಮರೀಚಿಕೆಯಾಗಲಿವೆ. ​ಗ್ರಾಮವನ್ನು ನಗರಸಭೆಗೆ ಸೇರಿಸುವುದರಿಂದ ಸಾಮಾನ್ಯ ಜನರ ಮೇಲೆ ಹೆಚ್ಚಿನ ತೆರಿಗೆ ಹೊರೆ ಬೀಳಲಿದೆ. ಕೃಷಿ ಭೂಮಿಯನ್ನು ಹೊಂದಿರುವ ರೈತರಿಗೆ ಇದರಿಂದ ಯಾವುದೇ ಲಾಭವಿಲ್ಲ, ಬದಲಾಗಿ ಮೂಲಭೂತ ಸೌಕರ್ಯಗಳ ಹೆಸರಿನಲ್ಲಿ ರೈತರನ್ನು ಒಕ್ಕಲೆಬ್ಬಿಸುವ ಅಥವಾ ಅವರ ಹಕ್ಕುಗಳನ್ನು ಮೊಟಕುಗೊಳಿಸುವ ಹುನ್ನಾರ ಇದರ ಹಿಂದಿದೆ” ಎಂದು ಆತಂಕ ವ್ಯಕ್ತಪಡಿಸಿದರು.
​
“ಸರ್ಕಾರ ಮತ್ತು ಸ್ಥಳೀಯ ಜನಪ್ರತಿನಿಧಿಗಳು ಈ ಕೂಡಲೇ ಎಚ್ಚೆತ್ತುಕೊಂಡು ಈ ನಿರ್ಣಯವನ್ನು ಕೈಬಿಡಬೇಕು. ಇಲ್ಲದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಸಾಂಪ್ರದಾಯಿಕವಾಗಿ ಹಿಂದೂ ಮಹಿಳೆಯ ಅಂತ್ಯಕ್ರಿಯೆ: ಸೌಹಾರ್ದತೆ ಮೆರೆದ ಮುಸ್ಲಿಂ, ಕ್ರಿಶ್ಚಿಯನ್ನರು

Advertisements

ಧರಣಿ ಸತ್ಯಾಗ್ರಹದಲ್ಲಿ ಕುಳಿತಿರುವ ಹೋರಾಟಗಾರರನ್ನು ಹುರಿದುಂಬಿಸಿದ ಅವರು, “ಪಕ್ಷಭೇದ ಮರೆತು ಗ್ರಾಮದ ಹಿತದೃಷ್ಟಿಯಿಂದ ಎಲ್ಲರೂ ಒಗ್ಗೂಡಬೇಕು. ನ್ಯಾಯ ಸಿಗುವವರೆಗೂ ಈ ಸತ್ಯಾಗ್ರಹ ನಿಲ್ಲಬಾರದು” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಲಿಂಗಪ್ಪಾಜಿ, ಶಂಕರ್, ವಳಗೆರೆಹಳ್ಳಿ ಉಮೇಶ್, ರವಿ, ರಘು, ವಿನೋದ್ ಬಾಬು, ಸತ್ಯಪ್ಪ ವಕೀಲರು, ವೆಂಕಟೇಶ್ ಮುಟ್ಟನಹಳ್ಳಿ, ಪ್ರಸನ್ನ ಗೊರವನಹಳ್ಳಿ ಸೇರಿದಂತೆ ಹಲವಾರು ಗ್ರಾಮಸ್ಥರು ಹಾಗೂ ರೈತ ಸಂಘದ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯದ ನ್ಯೂ ತಮಿಳು ಕಾಲೊನಿಯಲ್ಲಿ ‘SIR’ ಗೊಂದಲ: 207 ಮತದಾರರು ಎಲ್ಲಿ ಹೋದರು?

ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR) ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ...

ಬರದ ನೆರಳಲ್ಲಿ 101 ತಾಲ್ಲೂಕುಗಳು; ಮೈಸೂರು-ಚಾಮರಾಜನಗರ-ಮಂಡ್ಯದಲ್ಲಿ ರೈತರ ಬದುಕಿಗೆ ಕಠಿಣ ಸವಾಲು

ಕರ್ನಾಟಕದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿರುವುದು ಕೇವಲ ಮಳೆ ಕಡಿಮೆಯಾಗಿದೆ...

ಶ್ರೀರಂಗಪಟ್ಟಣ | ಇದು ಸ್ಟಾರ್ ಪವರ್ ಪಕ್ಷವಲ್ಲ, ಸಮ ಸಮಾಜದ ಪಕ್ಷ: ಚೇತನ್ ಅಹಿಂಸಾ

ಕರ್ನಾಟಕದಲ್ಲಿ ಆಡಳಿತ ನಡೆಸಿದ ಎಲ್ಲ ಪಕ್ಷಗಳು ಜನರ ಮೂಲಭೂತ ಸಮಸ್ಯೆಗಳನ್ನು ಪರಿಹರಿಸುವಲ್ಲಿ...

ಮಳೆಯೂ ಇಲ್ಲ, ಬೆಳೆಯೂ ಇಲ್ಲ; ಕಾವೇರಿ ಹರಿದಿದ್ದು ತಮಿಳುನಾಡಿನತ್ತ-ರೈತನ ಬದುಕಿನ ಮುಂದಿನ ದಾರಿ ಏನು?

ಮಳೆ ಕೈಕೊಟ್ಟಿದೆ. ಹೊಲದಲ್ಲಿ ಬೆಳೆ ಕಾಣುತ್ತಿಲ್ಲ. ಕೆರೆ-ಕಟ್ಟೆಗಳು ತುಂಬಿಲ್ಲ. ಜಾನುವಾರುಗಳಿಗೆ ಮೇವು...