ಸ್ವಾತಂತ್ರ್ಯ ಹೋರಾಟದ ಇತಿಹಾಸ ಸಾರುವ ಪ್ರವಾಸಿ ತಾಣವಾಗಿ ಶಿವಪುರ ಸೌಧ ಅಭಿವೃದ್ಧಿ

Date:

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ದೇಶಪ್ರೇಮದ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಮದ್ದೂರು ತಾಲ್ಲೂಕಿನ ಶಿವಪುರ ಧ್ವಜಸತ್ಯಾಗ್ರಹ ಸೌಧವನ್ನು ಸುಸಜ್ಜಿತ ಐತಿಹಾಸಿಕ ಸ್ಮಾರಕ ಹಾಗೂ ಆಕರ್ಷಕ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಶಾಸಕ ಕೆ. ಉದಯ್‌ ತಿಳಿಸಿದರು.

- Advertisement -

ಶಿವಪುರ ಧ್ವಜಸತ್ಯಾಗ್ರಹ ಸೌಧದ ಸಮಗ್ರ ಅಭಿವೃದ್ಧಿ ಹಾಗೂ ‘ಶಿವಪುರ ಧ್ವಜಸತ್ಯಾಗ್ರಹ ಸೌಧ ಪ್ರತಿಷ್ಠಾನ’ ಸ್ಥಾಪನೆಗೆ ಸಂಬಂಧಿಸಿದಂತೆ ಸೌಧದ ಆವರಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

“ಶಿವಪುರ ಧ್ವಜಸತ್ಯಾಗ್ರಹ ಸೌಧ ಕೇವಲ ಐತಿಹಾಸಿಕ ಸ್ಮಾರಕವಾಗಿ ಉಳಿಯದೆ, ಸ್ವಾತಂತ್ರ್ಯ ಹೋರಾಟದ ಮಹತ್ವವನ್ನು ಯುವಜನರಲ್ಲಿ ಬಿತ್ತುವ ಜ್ಞಾನಕೇಂದ್ರವಾಗಿ ರೂಪುಗೊಳ್ಳಬೇಕು. ಈ ನಿಟ್ಟಿನಲ್ಲಿ ಸೌಧದ ಅಭಿವೃದ್ಧಿಗೆ ಲಭ್ಯವಾಗುವ ಅನುದಾನವನ್ನು ಆದ್ಯತೆಗನುಗುಣವಾಗಿ ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಸೌಧದ ಆವರಣದಲ್ಲಿ ಸ್ವಚ್ಛತೆ, ಮೂಲಸೌಕರ್ಯ ಹಾಗೂ ಪ್ರವಾಸಿಗರಿಗೆ ಅಗತ್ಯ ಅನುಕೂಲಗಳನ್ನು ಕಲ್ಪಿಸುವುದರ ಜತೆಗೆ ಮಕ್ಕಳ ಮತ್ತು ಯುವಜನರ ಆಸಕ್ತಿಗೆ ಪೂರಕವಾದ ಜ್ಞಾನವರ್ಧಕ ಹಾಗೂ ಮನರಂಜನಾತ್ಮಕ ಚಟುವಟಿಕೆಗಳನ್ನು ರೂಪಿಸಬೇಕು” ಎಂದರು.

“ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಕೇವಲ ಪಠ್ಯಪುಸ್ತಕಗಳ ಮೂಲಕವಷ್ಟೇ ಅಲ್ಲದೆ, ದೃಶ್ಯಮಾಧ್ಯಮ ಮತ್ತು ವಿವಿಧ ಚಟುವಟಿಕೆಗಳ ಮೂಲಕ ಪರಿಚಯಿಸಬೇಕು. ಇದರಿಂದ ಹೋರಾಟಗಾರರ ಕೊಡುಗೆ, ತ್ಯಾಗ ಮತ್ತು ದೇಶಪ್ರೇಮದ ಮೌಲ್ಯಗಳು ಹೊಸ ತಲೆಮಾರಿನಲ್ಲಿ ಬೇರೂರಲು ಸಾಧ್ಯವಾಗಲಿದೆ. ಪ್ರವಾಸಿಗರು ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಆಧುನಿಕ ಸೌಲಭ್ಯಗಳನ್ನೊಳಗೊಂಡ ಹೈಟೆಕ್ ಕ್ಯಾಂಟೀನ್ ಮತ್ತು ಆಹಾರ ಸೇವನಾ ಕೊಠಡಿ ನಿರ್ಮಾಣಕ್ಕೂ ಕ್ರಮ ವಹಿಸಲಾಗುವುದು” ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ಕುಮಾರ ಮಾತನಾಡಿ, “ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನ ಹಾಗೂ ಅಚಲ ದೇಶಪ್ರೇಮದ ಸಂಕೇತವಾಗಿರುವ ಶಿವಪುರ ಧ್ವಜಸತ್ಯಾಗ್ರಹ ಸೌಧದ ಐತಿಹಾಸಿಕ ಮಹತ್ವವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಮಗ್ರ ಅಭಿವೃದ್ಧಿ ಮತ್ತು ನವೀಕರಣ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ” ಎಂದರು.

“ಲೋಕೋಪಯೋಗಿ ಇಲಾಖೆಯಿಂದ ₹2 ಕೋಟಿ ಅನುದಾನ ಒದಗಿಸುವ ಮೂಲಕ ಸೌಧದ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಐತಿಹಾಸಿಕ ಕಟ್ಟಡದ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ನವೀಕರಣ, ಸಂರಕ್ಷಣೆ, ಸ್ವಚ್ಛತೆ, ಸುಸಜ್ಜಿತ ಬೆಳಕಿನ ವ್ಯವಸ್ಥೆ ಹಾಗೂ ಸುಂದರ ಪರಿಸರ ನಿರ್ಮಾಣಕ್ಕೆ ಆದ್ಯತೆ ನೀಡಲಾಗುವುದು” ಎಂದು ತಿಳಿಸಿದರು.

“ಸೌಧದಲ್ಲಿ ಡೇಟಾ ಎಂಟ್ರಿ ಕಾರ್ಯನಿರ್ವಹಣೆ, ಎರಡು ವರ್ಷಗಳ ವಿದ್ಯುತ್ ಬಿಲ್ ಪಾವತಿ ಹಾಗೂ ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸಲಾಗಿದೆ. ಸುಮಾರು ₹20 ಲಕ್ಷ ವೆಚ್ಚದಲ್ಲಿ ಪ್ರೊಜೆಕ್ಟರ್ ವ್ಯವಸ್ಥೆ ಅಳವಡಿಸಲಾಗಿದ್ದು, ಇದರ ಮೂಲಕ ಸ್ವಾತಂತ್ರ್ಯ ಹೋರಾಟಗಾರರ ಜೀವನ, ಹೋರಾಟ ಹಾಗೂ ಐತಿಹಾಸಿಕ ಘಟನೆಗಳ ದೃಶ್ಯಾವಳಿಗಳನ್ನು ಪ್ರದರ್ಶಿಸಲು ಉದ್ದೇಶಿಸಲಾಗಿದೆ. ಈ ಕಾರ್ಯವನ್ನು ಒಂದು ತಿಂಗಳೊಳಗೆ ಪೂರ್ಣಗೊಳಿಸಲು ಕ್ರಮ ವಹಿಸಲಾಗಿದೆ” ಎಂದರು.

“ಶಿವಪುರ ಧ್ವಜಸತ್ಯಾಗ್ರಹದ ಇತಿಹಾಸವು ಕೇವಲ ಒಂದು ಪ್ರದೇಶಕ್ಕೆ ಸೀಮಿತವಾಗದೆ, ಇಡೀ ನಾಡಿನ ಸ್ವಾತಂತ್ರ್ಯ ಹೋರಾಟದ ಮಹತ್ವದ ಅಧ್ಯಾಯವಾಗಿದೆ. ಈ ಐತಿಹಾಸಿಕ ಪರಂಪರೆಯನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ತಲುಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಸೌಧದ ನಿರಂತರ ನಿರ್ವಹಣೆ, ಸ್ವಚ್ಛತೆ ಹಾಗೂ ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕಾಗಿ ಭದ್ರತಾ ಸಿಬ್ಬಂದಿ, ಹೊರಗುತ್ತಿಗೆ ಸಿಬ್ಬಂದಿ ಹಾಗೂ ಗುಮಾಸ್ತರನ್ನು ನೇಮಕ ಮಾಡಿಕೊಳ್ಳುವ ಅಗತ್ಯವಿದ್ದು, ಈ ಸಂಬಂಧ ಸೂಕ್ತ ವ್ಯವಸ್ಥೆ ರೂಪಿಸಲಾಗುವುದು” ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಮನ್‌ಮುಲ್ ಅಧ್ಯಕ್ಷ ಹರೀಶ್ ಬಾಬು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ವಿ. ನಂದೀಶ್, ಮದ್ದೂರು ನಗರಸಭೆ ಆಯುಕ್ತೆ ರಾಧಿಕಾ, ಅಭಿವೃದ್ಧಿ ಸಮಿತಿಯ ಮುಖಂಡರಾದ ಜಯಪ್ರಕಾಶ್ ಗೌಡ, ವೆಂಕಟಕೃಷ್ಣ ಕಾಸಪ್ಪ, ಸುನಿಲ್ ಕುಮಾರ್, ಚಂದ್ರ ಸಿಪಾಯಿ, ಹರ್ಷ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಸೀನಾ ತಾಯ್ನಾಡಿಗೆ ಮರಳಿದರೆ ಜೈಲು ಖಂಡಿತ: ಬಾಂಗ್ಲಾ ಸರ್ಕಾರದ ಎಚ್ಚರಿಕೆ ಬೆನ್ನಲ್ಲೇ ಭುಗಿಲೆದ್ದ ಹಿಂಸೆ!

ಭಾರತದಲ್ಲಿ ಆಶ್ರಯ ಪಡೆದಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಡಿಸೆಂಬರ್‌ನಲ್ಲಿ...

ಸೊರಬ | ನವೆಂಬರ್ 25ರಿಂದ ಬಿಸಿಯೂಟ ನೌಕರರ ಅನಿರ್ದಿಷ್ಟಾವಧಿ ಹೋರಾಟ

ಅಕ್ಷರದಾಸೋಹ ಯೋಜನೆಯಡಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸಿ ಬಡಿಸುತ್ತಿರುವ ಅಡುಗೆ ನೌಕರರ...

‘ಎಲ್ ನಿನೋ’ ಎಫೆಕ್ಟ್ | ಹಿಮಾಲಯದಲ್ಲಿ ಭಾರೀ‌ ಹಿಮಪಾತ, ಪ್ರವಾಹ ಸಂಭವ: ವರದಿ

'ಎಲ್ ನಿನೋ' ಪರಿಣಾಮವಾಗಿ ಚಳಿಗಾಲದಲ್ಲಿ ಹಿಮಾಲಯದ ಹಿಂದು ಕುಶ್ ಪರ್ವತ ಶ್ರೇಣಿಯ...

ನ.26ರಂದು ಕಂದಗಲ್‌ ಹನುಮಂತರಾಯ ರಂಗಮಂದಿರದಲ್ಲಿ ಸಂವಿಧಾನ ದಿನಾಚರಣೆ

ವಿಜಯಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಂಯುಕ್ತ...