​ಮೊಬೈಲ್ ಗೀಳಿಗೆ ಬಿದ್ದು ಪುಸ್ತಕಗಳ ಕಡೆಗಣಿಸದಿರಿ: ವಿದ್ಯಾರ್ಥಿಗಳಿಗೆ ‘ಪುಸ್ತಕದ ಮನೆ’ ಅಂಕೆಗೌಡ ಕಿವಿಮಾತು

Date:

​ಪ್ರಪಂಚದ ಯಾವುದೇ ಕ್ಷೇತ್ರದಲ್ಲಿಯೂ ಹಣ, ಅಂತಸ್ತು ಸಂಪಾದನೆಗಿಂತ ಜ್ಞಾನ ಸಂಪಾದನೆ ಅತಿ ಮುಖ್ಯವಾದದ್ದು. ಹೀಗಾಗಿ ಈಗಿನ ವಿದ್ಯಮಾನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್ ಬಳಕೆಯ ಗೀಳಿಗೆ ಬಿದ್ದು ಪುಸ್ತಕಗಳನ್ನು ಓದುವುದನ್ನು ಕಡೆಗಣಿಸಬಾರದು ಎಂದು ‘ಪುಸ್ತಕದ ಮನೆ’ ಖ್ಯಾತಿಯ ಎಂ. ಅಂಕೆಗೌಡ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

- Advertisement -

​ಪಾಂಡವಪುರ ತಾಲೂಕಿನ ಹರಳಹಳ್ಳಿ ಗ್ರಾಮದಲ್ಲಿರುವ ‘ಪುಸ್ತಕದ ಮನೆ’ಯಲ್ಲಿ ಮೈಸೂರಿನ ಶಾರದಾ ವಿಲಾಸ ಕಾನೂನು ಕಾಲೇಜಿನ ವಿದ್ಯಾರ್ಥಿ ಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮೊಬೈಲ್‌ನಿಂದ ಆಗುವಷ್ಟು ಅನುಕೂಲ ಜಗತ್ತಲ್ಲಿ ಯಾವುದರಿಂದಲೂ ಆಗುವುದಿಲ್ಲ. ಆದರೆ ಅದನ್ನು ಯಾವ ಸಮಯಕ್ಕೆ, ಎಷ್ಟು ಬಳಸಬೇಕೋ ಅಷ್ಟು ಮಾತ್ರ ಬಳಸಬೇಕು. 24 ಗಂಟೆಯೂ ಮೊಬೈಲ್‌ನಲ್ಲಿ ಚಿತ್ರಗೀತೆಗಳನ್ನು ಹಾಕಿಕೊಂಡು ಕುಣಿಯುವುದರಿಂದ ನಮಗೆ ಯಾವುದೇ ಪ್ರಯೋಜನವಿಲ್ಲ. ಮನರಂಜನೆಗಾಗಿ ಹತ್ತು ನಿಮಿಷ ಬಳಸಿದರೆ ಸಾಕು. ಸಕ್ಕರೆ ಬಹಳ ಸಿಹಿಯಾಗಿದೆ ಎಂದು ಬರೀ ಸಕ್ಕರೆಯನ್ನೇ ತಿಂದರೆ ಬದುಕಲು ಸಾಧ್ಯವೇ?” ಎಂದು ಮಾರ್ಮಿಕವಾಗಿ ಪ್ರಶ್ನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

​ಮುಂದುವರಿದು, “ಮೊಬೈಲ್ ಅನ್ನು ಸರಿಯಾದ ಮಾರ್ಗದಲ್ಲಿ ಬಳಸಿಕೊಂಡರೆ ಐಎಎಸ್, ಕೆಎಎಸ್ ನಂತಹ ಕಠಿಣ ಪರೀಕ್ಷೆಗಳನ್ನೂ ಪಾಸ್ ಮಾಡಬಹುದು. ಆ ಕ್ಷೇತ್ರದಲ್ಲಿ ಬಳಸಿಕೊಳ್ಳುವುದನ್ನು ಬಿಟ್ಟು, ಮೊಬೈಲ್-ಟಿವಿಗಳಲ್ಲಿ ಕುಣಿಯುವವರನ್ನು ನೋಡಿ ನಾವೂ ಕುಣಿಯುವುದು ಅರ್ಥಹೀನ. ಯಾವುದನ್ನು ಎಷ್ಟು ಬೇಕೋ ಅಷ್ಟು ಮಾತ್ರ ಬಳಸಿಕೊಂಡರೆ ಒಳಿತು, ಮಿತಿ ಮೀರಿದರೆ ತೊಂದರೆ ಕಟ್ಟಿಟ್ಟ ಬುತ್ತಿ. ವಿದ್ಯಾರ್ಥಿಗಳು ಸಮಯದ ಮಹತ್ವವನ್ನು ಅರಿತು ಓದುವುದರಲ್ಲಿ ತೊಡಗಿಸಿಕೊಳ್ಳಬೇಕು. ಜ್ಞಾನಾರ್ಜನೆಗೆ ಹೆಚ್ಚಿನ ಒತ್ತು ನೀಡುವುದರ ಜೊತೆಗೆ, ವಿದ್ಯಾರ್ಥಿ ದೆಸೆಯಿಂದಲೇ ಶಿಸ್ತಿನ ಜೀವನವನ್ನು ರೂಢಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

ಇದನ್ನೂ ಓದಿ: ಮಂಡ್ಯ | ಪ್ರೇಮ ವಿವಾಹ; ಯುವಕನ ಮನೆಗೆ ಬೆಂಕಿ ಹಚ್ಚಿದ ಯುವತಿ ತಂದೆ

​ಈ ಅರ್ಥಪೂರ್ಣ ಸಂವಾದ ಕಾರ್ಯಕ್ರಮದಲ್ಲಿ ಆಚೀವರ್ಸ್ ಅಕಾಡೆಮಿಯ ಅಧ್ಯಕ್ಷ ಡಾ. ರಾಘವೇಂದ್ರ, ಸಮರ್ಪಣಾ ಟ್ರಸ್ಟ್ ಅಧ್ಯಕ್ಷರಾದ ಕೆ ಎಸ್ ಜಯಶಂಕರ್, ಕಡತನಾಳು ಕೃಷ್ಣಕುಮಾರ್ ಹಾಗೂ ಶಾರದಾ ವಿಲಾಸ ಕಾಲೇಜಿನ ಕಾನೂನು ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಅಂಬೇಡ್ಕರ್ ಅವಹೇಳನ ಆರೋಪ: ವೇದಮೂರ್ತಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪೊಲೀಸ್ ಇಲಾಖೆಯ ಬಗ್ಗೆ ಅವಹೇಳನಕಾರಿ ಹೇಳಿಕೆ...

ತಮಿಳು ಕಾಲೊನಿ ನಿವಾಸಿಗಳನ್ನು ‘ಭಯೋತ್ಪಾದಕರು’ ಎಂದಿರುವ ಆರೋಪ: ರವೀಂದ್ರ ವಿರುದ್ಧ FIR ದಾಖಲಿಸಲು ಆಗ್ರಹ

ಮಂಡ್ಯ ನಗರದ ತಮಿಳು ಕಾಲೊನಿ ನಿವಾಸಿಗಳನ್ನು ‘ತಮಿಳುನಾಡಿನಿಂದ ಬಂದವರು’, ‘ಭಯೋತ್ಪಾದಕರು’ ಎಂದು...

ಮಂಡ್ಯದ ನ್ಯೂ ತಮಿಳು ಕಾಲೊನಿಯಲ್ಲಿ ‘SIR’ ಗೊಂದಲ: 207 ಮತದಾರರು ಎಲ್ಲಿ ಹೋದರು?

ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR) ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ...

ಬರದ ನೆರಳಲ್ಲಿ 101 ತಾಲ್ಲೂಕುಗಳು; ಮೈಸೂರು-ಚಾಮರಾಜನಗರ-ಮಂಡ್ಯದಲ್ಲಿ ರೈತರ ಬದುಕಿಗೆ ಕಠಿಣ ಸವಾಲು

ಕರ್ನಾಟಕದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿರುವುದು ಕೇವಲ ಮಳೆ ಕಡಿಮೆಯಾಗಿದೆ...