ಕೆಎಂ ದೊಡ್ಡಿಯಲ್ಲಿ ಹಿಂದಿ-ಇಂಗ್ಲಿಷ್ ಹೇರಿಕೆ; SBI ಬ್ಯಾಂಕ್‌ನಲ್ಲಿ ಕನ್ನಡ ಸೇವೆಗೆ ಆಗ್ರಹಿಸಿ ಕರವೇ ಪ್ರತಿಭಟನೆ

Date:

​ಮದ್ದೂರು ತಾಲೂಕಿನ ಕೆಎಂ ದೊಡ್ಡಿ ಗ್ರಾಮದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಶಾಖೆಯಲ್ಲಿ ಕನ್ನಡ ಭಾಷೆಯನ್ನು ನಿರ್ಲಕ್ಷಿಸಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

- Advertisement -

ಕೇವಲ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿರುವ ಚಲನ್‌ಗಳಿಂದ ಗ್ರಾಮೀಣ ಜನರಿಗೆ ಆಗುತ್ತಿರುವ ತೊಂದರೆಯನ್ನು ಖಂಡಿಸಿದ ಕಾರ್ಯಕರ್ತರು, ತಕ್ಷಣವೇ ಕನ್ನಡದಲ್ಲಿ ಸೇವೆ ಒದಗಿಸುವಂತೆ ಪಟ್ಟು ಹಿಡಿದರು. ​​ಕರವೇ ಮದ್ದೂರು ತಾಲೂಕು ಘಟಕದ ಅಧ್ಯಕ್ಷ ಮಣಿಗರೆರ ರಾಮಚಂದ್ರಗೌಡ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಬ್ಯಾಂಕಿನ ವ್ಯವಸ್ಥೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಬ್ಯಾಂಕಿನಲ್ಲಿ ಹಣ ಜಮೆ ಮಾಡುವ ಮತ್ತು ಹಿಂಪಡೆಯುವ ಚಲನ್‌ಗಳು, ಸಾಲದ ಅರ್ಜಿಗಳು ಸೇರಿದಂತೆ ಯಾವುದೇ ಮುದ್ರಿತ ನಮೂನೆಗಳು ಕನ್ನಡದಲ್ಲಿ ಲಭ್ಯವಿಲ್ಲ. ಜೊತೆಗೆ ಮುಂಚೂಣಿ ಸಿಬ್ಬಂದಿಗೂ ಕನ್ನಡ ಬಾರದಿರುವುದರಿಂದ ಸ್ಥಳೀಯ ರೈತರು, ಮಹಿಳೆಯರು ಹಾಗೂ ಹಿರಿಯ ನಾಗರಿಕರು ತಮ್ಮ ತಾಯಿ ನುಡಿಯಲ್ಲಿ ಸೇವೆ ಸಿಗದೆ ಪರದಾಡುವಂತಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

​ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಮಾರ್ಗಸೂಚಿಗಳ ಪ್ರಕಾರ ಕಡ್ಡಾಯವಾಗಿ ಪ್ರಾದೇಶಿಕ ಭಾಷೆಯಲ್ಲಿ ಬ್ಯಾಂಕಿಂಗ್ ಸೇವೆ ಒದಗಿಸಬೇಕು. ಆದರೆ ಈ ನಿಯಮವನ್ನು ಗಾಳಿಗೆ ತೂರಲಾಗಿದೆ ಎಂದು ಸಂಘಟನೆ ಆರೋಪಿಸಿತು. ಕೂಡಲೇ ಎಲ್ಲಾ ಚಲನ್‌ಗಳು, ಅರ್ಜಿಗಳು ಹಾಗೂ ಮಾಹಿತಿ ಫಲಕಗಳನ್ನು ಕನ್ನಡದಲ್ಲಿ ಅಳವಡಿಸುವಂತೆ ಶಾಖಾ ವ್ಯವಸ್ಥಾಪಕರಿಗೆ ಮನವಿ ಪತ್ರ ಸಲ್ಲಿಸಲಾಯಿತು.
​
ಪ್ರತಿಭಟನಾಕಾರರ ಮನವಿಗೆ ಸ್ಪಂದಿಸಿದ ಬ್ಯಾಂಕ್ ಶಾಖಾ ವ್ಯವಸ್ಥಾಪಕರು, “ಒಂದು ವಾರದೊಳಗೆ ಎಲ್ಲಾ ಚಲನ್‌ಗಳನ್ನು ಕನ್ನಡದಲ್ಲಿ ಮುದ್ರಣ ಮಾಡಿಸಲಾಗುವುದು. ಹಾಗೂ, ಕ್ರಮೇಣ ಇತರೆ ಮುದ್ರಿತ ನಮೂನೆಗಳನ್ನೂ ಕನ್ನಡದಲ್ಲಿಯೇ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ಇದನ್ನೂ ಓದಿ: ಮಂಡ್ಯ | ಅತಿಯಾದ ಮೊಬೈಲ್ ಬಳಕೆ ಅನಾರೋಗ್ಯಗಳಿಗೆ ರಹದಾರಿ: ಡಾ ನಿಶ್ಚಲಾನಂದ ಸ್ವಾಮೀಜಿ

​ಒಂದು ವೇಳೆ ನೀಡಿದ ಭರವಸೆಯಂತೆ ಬ್ಯಾಂಕ್ ಆಡಳಿತ ಮಂಡಳಿ ಕ್ರಮ ಜರುಗಿಸದಿದ್ದರೆ, ಮುಂದಿನ ದಿನಗಳಲ್ಲಿ ಬ್ಯಾಂಕಿಂಗ್ ಒಂಬುಡ್ಸ್‌ಮನ್ (Banking Ombudsman) ಹಾಗೂ ರಿಸರ್ವ್ ಬ್ಯಾಂಕ್‌ನ ಉನ್ನತ ಅಧಿಕಾರಿಗಳಿಗೆ ಅಧಿಕೃತವಾಗಿ ದೂರು ನೀಡಲಾಗುವುದು ಎಂದು ಕರವೇ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
​
ಈ ಹೋರಾಟದಲ್ಲಿ ಕರವೇ ಮದ್ದೂರು ಪಟ್ಟಣ ಘಟಕದ ಅಧ್ಯಕ್ಷೆ ಗೀತ, ಪಟ್ಟಣ ಘಟಕದ ಅಧ್ಯಕ್ಷ ಮದ್ದೂರು ಮಹಾದೇವ್, ಉಪಾಧ್ಯಕ್ಷರಾದ ಸಂತೋಷ್, ಗಣೇಶ್, ಮುಖಂಡರಾದ ಅರೆಚಾಕನಹಳ್ಳಿ ಶಿವರಾಜು, ಉಮೇಶ್, ಮಾದರಹಳ್ಳಿ ಗ್ರಾಮ ಘಟಕದ ಅಧ್ಯಕ್ಷ ಉಮೇಶ್, ಕಡಿಲುವಾಗಲು ಶಿವಮಾದು, ರವಿ, ಕಳ್ಳಿ ಮಳೆ ದೊಡ್ಡಿ ನಾಗೇಶ್, ತೊರೆಚಾಕನಹಳ್ಳಿ ಮಹೇಶ್, ಹೂನ್ನಾಯಕನಹಳ್ಳಿ ಚಿಕ್ಕಸ್ವಾಮಿ ಸೇರಿದಂತೆ ಹಲವು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಅಂಬೇಡ್ಕರ್ ಅವಹೇಳನ ಆರೋಪ: ವೇದಮೂರ್ತಿ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಪೊಲೀಸ್ ಇಲಾಖೆಯ ಬಗ್ಗೆ ಅವಹೇಳನಕಾರಿ ಹೇಳಿಕೆ...

ತಮಿಳು ಕಾಲೊನಿ ನಿವಾಸಿಗಳನ್ನು ‘ಭಯೋತ್ಪಾದಕರು’ ಎಂದಿರುವ ಆರೋಪ: ರವೀಂದ್ರ ವಿರುದ್ಧ FIR ದಾಖಲಿಸಲು ಆಗ್ರಹ

ಮಂಡ್ಯ ನಗರದ ತಮಿಳು ಕಾಲೊನಿ ನಿವಾಸಿಗಳನ್ನು ‘ತಮಿಳುನಾಡಿನಿಂದ ಬಂದವರು’, ‘ಭಯೋತ್ಪಾದಕರು’ ಎಂದು...

ಮಂಡ್ಯದ ನ್ಯೂ ತಮಿಳು ಕಾಲೊನಿಯಲ್ಲಿ ‘SIR’ ಗೊಂದಲ: 207 ಮತದಾರರು ಎಲ್ಲಿ ಹೋದರು?

ವಿಶೇಷ ತೀವ್ರ ಪರಿಷ್ಕರಣೆ (Special Intensive Revision–SIR) ಹಿನ್ನೆಲೆಯಲ್ಲಿ ಮತದಾರರ ಪಟ್ಟಿಯ...

ಬರದ ನೆರಳಲ್ಲಿ 101 ತಾಲ್ಲೂಕುಗಳು; ಮೈಸೂರು-ಚಾಮರಾಜನಗರ-ಮಂಡ್ಯದಲ್ಲಿ ರೈತರ ಬದುಕಿಗೆ ಕಠಿಣ ಸವಾಲು

ಕರ್ನಾಟಕದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಿಸಿರುವುದು ಕೇವಲ ಮಳೆ ಕಡಿಮೆಯಾಗಿದೆ...