ಜಯಕುಮಾರ್‌ ಸಾವಿನ ಪ್ರಕರಣ; ಕರ್ತವ್ಯಲೋಪ ಎಸಗಿದ ಪೊಲೀಸರ ಅಮಾನತಿಗೆ ಆಗ್ರಹಿಸಿ ಧರಣಿ

Date:

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟದ ದಲಿತ ಯುವಕ ಜಯಕುಮಾರ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿರುವ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆಗ್ರಹಿಸಿ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಮಂಡ್ಯ ಜಿಲ್ಲಾ ಪ್ರಗತಿಪರ ಸಂಘಟನೆಗಳ ಒಕ್ಕೂಟ ಸೋಮವಾರದಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಪ್ರಾರಂಭಿಸಿದೆ.

- Advertisement -

ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿರುವ  ಡಿವೈಎಸ್ಪಿ ಚೆಲುವರಾಜು, ಸರ್ಕಲ್ ಇನ್ಸ್ಪೆಕ್ಟರ್ ಆನಂದೇಗೌಡ, ಪಿಎಸ್ಐ ಸುಬ್ಬಯ್ಯ, ದಬೇದಾರ್ ವೈರಮುಡಿಗೌಡ ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದಿವಾಕರ್ ಮೇಲೆ ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಕಳೆದ ಮೇ 16ರಂದು ಜಯಕುಮಾರ್ ಅವರು ನೀಡಿದ್ದ ದೂರಿಗೆ ಸ್ಪಂದಿಸದೇ ನಿರ್ಲಕ್ಷ್ಯ ವಹಿಸಿದ್ದರಿಂದ ಮೇ 17ರಂದು ಜಯ ಕುಮಾರ್ ಅವರ ಸಾವು ಸಂಭವಿಸಿದೆ. ಸಾವಿನ ನಂತರ ಅವರ ಮಡದಿ ನನ್ನ ಗಂಡನನ್ನು ಕೊಲೆ ಮಾಡಿದ್ದಾರೆ ಎಂದು ದೂರು ನೀಡಿದರೆ, ಅದನ್ನು ಆತ್ಮಹತ್ಯೆ ಎಂದು ಬದಲಾಯಿಸಿಕೊಂಡು ಪ್ರಕರಣದ ದಿಕ್ಕು ತಪ್ಪಿಸಿರುವ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಿ, ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ಕಠಿಣ ಕ್ರಮ ವಹಿಸಲು ಮಂಡ್ಯ ಜಿಲ್ಲಾಧಿಕಾರಿಯಾಗಿ ಮುಂದಾಗುತ್ತಿಲ್ಲ. ಆದ ಕಾರಣ ಡಿಎಜಿಪಿ ಅವರು ಸ್ಥಳಕ್ಕೆ ಆಗಮಿಸಬೇಕು. ಇದು ಅಲ್ಲಿಯೂ ಬಗೆಹರಿಯಲಿಲ್ಲ ಎಂದರೆ ರಾಜ್ಯಮಟ್ಟಕ್ಕೆ ಗೃಹ ಸಚಿವರಿಗೆ, ಮುಖ್ಯಮಂತ್ರಿಯವರಿಗೆ ಒತ್ತಡ ಹೇರುವುದಾಗಿ ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ತಿಳಿಸಿದರು.

ಧರಣಿಯಲ್ಲಿ ಕೆ ಎಸ್ ಎಸ್ ನ ಹೆಚ್ ಎನ್ ನರಸಿಂಹಮೂರ್ತಿ, ಡಿ ಎಸ್ ಎಸ್ ಕೃಷ್ಣ, ದ್ರಾವಿಡ ಕನ್ನಡಿಗರು ಅಭಿ ಒಕ್ಕಲಿಗ, ಎ ವಿ ಎಸ್ ಎಸ್  ಬಾಲರಾಜು, ಕರವೇ ಹೆಚ್.ಡಿ.ಜಯರಾಂ, ಕಣಿವೆ ಯೋಗೇಶ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ವಿಕಲಚೇತನರು, ಹಿರಿಯ ನಾಗರಿಕರಿಗೆ ವಿವಿಧ ಸೌಲಭ್ಯ: ಅರ್ಜಿ ಸಲ್ಲಿಕೆಗೆ ಅ.31 ಕೊನೆಯ ದಿನ

ವಿಕಲಚೇತನರು ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ 14 ಫಲಾನುಭವಿ ಆಧಾರಿತ...

ಹಾಸನ | SIR ವಿರೋಧ: ಚುನಾವಣಾ ಆಯೋಗ ಅಕ್ರಮವಾಗಿ ಕಾರ್ಯನಿರ್ವಹಿಸಿದೆ; ನಟ ಪ್ರಕಾಶ್ ರಾಜ್ 

SIR ವಿರೋಧಿ ಒಕ್ಕೂಟ, ನಾಗರೀಕ ಸಂಘಟನೆಗಳ ಹಾಗೂ ಜಾತ್ಯತೀತ ಪಕ್ಷಗಳಿಂದ ರಾಜ್ಯ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...